Latest Post

ಉಪನ್ಯಾಸಕ ಅಶೋಕ ಕೋರೆಗೆ ಪಿಎಚ್‌.ಡಿ ಡಾಕ್ಟರೇಟ್ : ಎಬಿವಿಪಿ ಯಿಂದ ಸನ್ಮಾನ ಸಾಕು ನಾಯಿಗಳಿಗೆ ತಪ್ಪದೇ ರೇಬೀಸ್ ಲಸಿಕೆ ನೀಡಿ: ಸಚಿವ ಪ್ರಭು ಚವ್ಹಾಣ
Spread the love

ಇಂದಿನಿಂದ ತಿಂಗಳ ಪರ್ಯಂತ ಜ್ಞಾನಯೋಗಿ ಸಿದ್ದೇಶ್ವರ ಸ್ವಾಮೀಜಿ ಆಧ್ಯಾತ್ಮಿಕ ಪ್ರವಚನ

 

ಭಾಲ್ಕಿ:ರಾಜ್ಯದ ಗಡಿ ಬೀದರ ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ಇಂದಿನಿಂದ ತಿಂಗಳ ಪರ್ಯಂತ ಜ್ಞಾನಯೋಗಿ ಸಿದ್ದೇಶ್ವರ ಸ್ವಾಮೀಜಿ ಆಧ್ಯಾತ್ಮಿಕ ಪ್ರವಚನ ನಡೆಸಿಕೊಡಲಿದ್ದು, ಜಿಲ್ಲೆಯ ಸದ್ಭಕ್ತರು ಪ್ರವಚನ ಆಲಿಸಿಬೇಕು’ ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ. ಬಸವಲಿಂಗ ಪಟ್ಟದ್ದೇವರು ಅವರು ಹೇಳಿದರು. ಪಟ್ಟಣದ ಚನ್ನಬಸವಾಶ್ರಮದಲ್ಲಿ ಪ್ರತಿದಿನ ಬೆಳಿಗ್ಗೆ 6:30 ರಿಂದ 7:30ರವರೆಗೆ ಶ್ರೀಗಳು ಪ್ರವಚನ ನೀಡಲಿದ್ದಾರೆ. 13 ವರ್ಷಗಳ ಬಳಿಕ ಸ್ವಾಮೀಜಿ ಅವರು ಮತ್ತೊಮ್ಮೆ ಇಲ್ಲಿ ಪ್ರವಚನ ನಡೆಸಿಕೊಡುತ್ತಿರುವುದು ನಮ್ಮೆಲ್ಲರ ಸುದೈವ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಪ್ರವಚನ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು