Latest Post

ಉಪನ್ಯಾಸಕ ಅಶೋಕ ಕೋರೆಗೆ ಪಿಎಚ್‌.ಡಿ ಡಾಕ್ಟರೇಟ್ : ಎಬಿವಿಪಿ ಯಿಂದ ಸನ್ಮಾನ ಸಾಕು ನಾಯಿಗಳಿಗೆ ತಪ್ಪದೇ ರೇಬೀಸ್ ಲಸಿಕೆ ನೀಡಿ: ಸಚಿವ ಪ್ರಭು ಚವ್ಹಾಣ
Spread the love

                            ಕಂಡದ್ದು ಕೈ ಬರಹದಲ್ಲಿ’ ಕೃತಿ ಬಿಡುಗಡೆ

 

ಬೀದರ್ ತಾಲ್ಲೂಕಿನ ಬಗದಲ್‌ನಲ್ಲಿ ನವರಸ ಕಲಾ ಲೋಕ ಹಾಗೂ ಬಗದಲ್ ಗೆಳೆಯರ ಬಳಗದ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ ಅವರು ಸಾಹಿತಿ ವಿನೋದ ಹೊನ್ನಾ ರಚಿತ ‘ಕಂಡದ್ದು ಕೈ ಬರಹದಲ್ಲಿ’ ಕೃತಿ ಬಿಡುಗಡೆ ಮಾಡಿದರು. ಕನ್ನಡ ಭಾಷೆ ಬೆಳವಣಿಗೆಗೆ ಎಲ್ಲರೂ ಕನ್ನಡದಲ್ಲೇ ಮಾತನಾಡಬೇಕು ಎಂದು ಹೇಳಿದರು. ವಿನೋದ ಹೊನ್ನಾ ಅವರ ಕೃತಿ ಮಾದರಿಯಾಗಿದೆ ಎಂದು ನುಡಿದರು.

ನವರಸ ಕಲಾ ಲೋಕದ ಅಧ್ಯಕ್ಷ ವೈಜಿನಾಥ ಸಜ್ಜನಶೆಟ್ಟಿ ಕೃತಿ ಪರಿಚಯ ಮಾಡಿಕೊಟ್ಟರು. ಬೇಮಳಖೇಡ ಹಿರೇಮಠದ ಡಾ. ರಾಜಶೇಖರ ಶಿವಾಚಾರ್ಯ ಸಾನಿಧ್ಯ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಾಬುರಾವ್ ಕಾರಬಾರಿ, ವಕೀಲ ಬಾಬುರಾವ್ ಹೊನ್ನಾ, ಉಮೇಶ ಮೂಲಿಮನಿ, ರವಿ ಶಂಕರ ಶೆಟ್ಟಿ ಉಪಸ್ಥಿತರಿದ್ದರು,