Latest Post

ಈ ದೇಶದ ಸಂಪತ್ತು ಶಿಕ್ಷಕರು :ಡಾ ಮನ್ನಥ ಡೊಳೆ ವಸತಿ ನಿಲಯಗಳಿಗೆ 25% ಪ್ರತಿಶತ ಪ್ರವೇಶವನ್ನು ಹೆಚ್ಚಿಸುವಂತೆ ಎಬಿವಿಪಿ ಔರಾದ ಶಾಖೆ ಮನವಿ
Spread the love

*

ಇಂದು ವಿಶೇಷ ಮತದಾರರ ನೋಂದಣಿ ಅಭಿಯಾನ: ರಾಮಚಂದ್ರನ್ ಆರ್

ಬೀದರ, ನವೆಂಬರ್ 13 (ಕರ್ನಾಟಕ ವಾರ್ತೆ):- ಮುಖ್ಯ ಚುನಾವಣಾಧಿಕಾರಿಗಳ ನಿರ್ದೇಶನದಂತೆ ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ–2022ಗೆ ಸಂಬAಧಿಸಿದAತೆ ನವೆಂಬರ್ 14ರಂದು ವಿಶೇಷ ಮತದಾರರ ನೋಂದಣಿ ಅಭಿಯಾನ ನಡೆಯಲಿದೆ ಎಂದು ಜಿಲ್ಲಾಧಿಕಾರಿಗಳಾದ ರಾಮಚಂದ್ರನ್ ಆರ್ ಅವರು ತಿಳಿಸಿದ್ದಾರೆ.
ಅರ್ಹ ಪ್ರತಿಯೊಬ್ಬರು ಮತದಾರರ ಪಟ್ಟಿ ವ್ಯಾಪ್ತಿಗೊಳಪಡಬೇಕು ಎಂಬುದು ಜಿಲ್ಲಾಡಳಿತದ ಉದ್ದೇಶವಾಗಿದೆ. ಮತದಾರರ ನೋಂದಣಿಗೆ ಸಂಬAಧಿಸಿದAತೆ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಮತದಾರರ ಪಟ್ಟಿಯಲ್ಲಿ ಅರ್ಹರು ತಮ್ಮ ಹೆಸರನ್ನು ಸೇರಿಸಲು ಕೆಲವು ದಾಖಲೆಗಳನ್ನು ನೀಡಬೇಕು. ಭಾರತೀಯ ಪಾಸ್ ಪೋರ್ಟ್, ಚಾಲನಾ ಪರವಾನಿಗೆ, ಆಧಾರ್ ಪತ್ರ, ಪ್ಯಾನ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್, ಪಡಿತರ ಚೀಟಿ, ಸರ್ಕಾರಿ ಅರೆ ಸರ್ಕಾರಿ ನೌಕರರು ಹೊಂದಿರುವ ಗುರುತಿನ ಚೀಟಿ, ರೈತ ಗುರುತಿನ ಚೀಟಿ, ನೀರಿನ ಬಿಲ್ಲು ದೂರವಾಣಿ ಬಿಲ್ಲು ವಿದ್ಯುತ್ ಬಿಲ್ಲು ಗ್ಯಾಸ್ ಕನೆಕ್ಷನ್ ಬಿಲ್ ಈ ಯಾವುದಾದರೂ ಒಂದು ದಾಖಲಾತಿಯೊಂದಿಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.