Latest Post

ಈ ದೇಶದ ಸಂಪತ್ತು ಶಿಕ್ಷಕರು :ಡಾ ಮನ್ನಥ ಡೊಳೆ ವಸತಿ ನಿಲಯಗಳಿಗೆ 25% ಪ್ರತಿಶತ ಪ್ರವೇಶವನ್ನು ಹೆಚ್ಚಿಸುವಂತೆ ಎಬಿವಿಪಿ ಔರಾದ ಶಾಖೆ ಮನವಿ
Spread the love

ನಟ ಪುನೀತ್ ರಾಜ್ ಕುಮಾರ್’ಗೆ ಕರ್ನಾಟಕ ರತ್ನ, ಪದ್ಮಶ್ರೀ ನೀಡಬೇಕು: ರವಿ ಬಿರಾದರ್ ಜ್ಯಾಂತಿ

ಬೀದರ್:ಹಠಾತ್ ನಿಧನರಾದ ನಟ ಪುನೀತ್ ರಾಜ್ ಕುಮಾರ್ ಮೇರು ವ್ಯಕ್ತಿ ಹಾಗೂ ಅಜಾತ ಶತ್ರು. ಹೀಗಾಗಿ ರಾಜ್ಯ ಜನತೆಯ ಒತ್ತಾಯದಂತೆ ಅವರಿಗೆ ಕೇಂದ್ರ ಸರ್ಕಾರ ಪದ್ಮಶ್ರೀ ಹಾಗೂ ರಾಜ್ಯ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸಬೇಕು. ಜೊತೆಗೆ ಮುಖ್ಯರಸ್ತೆಗೆ ಅವರ ಹೆಸರಿಡಬೇಕು ಎಂದು ಕೆಪಿಸಿಸಿ ಸಾಮಾಜಿಕ ಜಾಲತಾಣ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿ ಬಿರಾದರ್ ಜ್ಯಾಂತಿ ಒತ್ತಾಯಿಸಿದ್ದಾರೆ.

ಸಿನಿಮಾ ಕ್ಷೇತ್ರ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಪುನೀತ್ ಮಾಡಿದ ಸಾಧನೆ ದೊಡ್ಡದು. ಜೊತೆಗೆ ಅವರು ಅಜಾತ ಶತ್ರುವಾಗಿ ಬಾಳಿದವರು. ಹೀಗಾಗಿ ಪುನೀತ್ ರಾಜ್ ಕುಮಾರ್ ಅವರ ಹೆಸರನ್ನು ನಗರದ ಪ್ರಮುಖ ರಸ್ತೆಗೆ ಇಡಬೇಕು. ಪದ್ಮಶ್ರೀ, ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು ಎಂದು ಒತ್ತಾಯ ಕೇಳಿ ಬರುತ್ತಿದೆ. ಈ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಹಿಂದೆ ಬಂಗಾರಪ್ಪನವರ ಸರ್ಕಾರ ಇದ್ದಾಗ ವರನಟ ರಾಜ್ ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗಿತ್ತು. ಈಗ ಪುನೀತ್ ಅವರಿಗೆ ಈ ಗೌರವ ನೀಡಲು ಮುಖ್ಯಮಂತ್ರಿ ಬೊಮ್ಮಾಯಿಯವರನ್ನು ಆಗ್ರಹಿಸುತ್ತೇನೆಂದು ಹೇಳಿದ್ದಾರೆ.

ಇನ್ನು ಪುನೀತ್ ಅವರು ನಿಧನದಿಂದ ರಾಜ್ಯ ಈ ಬಾರಿ ಬಹಳ ಕೆಟ್ಟ ಕನ್ನಡ ರಾಜ್ಯೋತ್ಸವ ಕಂಡಿದೆ. ಕಳೆದ ಒಂದೂವರೆ ವರ್ಷದಿಂದ ಕೊರೋನಾದಿಂದ ರಾಜ್ಯ ಹಾಗೂ ದೇಶದಲ್ಲಿ ಕತ್ತಲೆಯಲ್ಲಿ ಮುಳುಗಿದ್ದವು. ಇದೀಗ ಈ ಬೆಳಕಿನ ಹಬ್ಬದ ಮೂಲಕ ಬೆಳಕು ದೊರೆಯುವಂತಾಗಲಿ ಎಂದು ಶುಭ ಹಾರೈಸುತ್ತೇನೆಂದು ತಿಳಿಸಿದ್ದಾರೆ.