Latest Post

ಉಪನ್ಯಾಸಕ ಅಶೋಕ ಕೋರೆಗೆ ಪಿಎಚ್‌.ಡಿ ಡಾಕ್ಟರೇಟ್ : ಎಬಿವಿಪಿ ಯಿಂದ ಸನ್ಮಾನ ಸಾಕು ನಾಯಿಗಳಿಗೆ ತಪ್ಪದೇ ರೇಬೀಸ್ ಲಸಿಕೆ ನೀಡಿ: ಸಚಿವ ಪ್ರಭು ಚವ್ಹಾಣ
Spread the love
  • ಹೊಸ ತಳಿಯ ಓಮಿಕ್ರಾನ್ ವೈರಸ್ ಪತ್ತೆ
  • ಮತ್ತೆ ಲಾಕ್ ಆಗುತ್ತಾ ಕರ್ನಾಟಕ ?
  • ಇದು ಹಳೆ ಕರೊನಕ್ಕಿಂತಲೂ ತುಂಬಾ ಡೇಂಜರ್?

ಬೆಂಗಳೂರು,ನ.27-ವಿಶ್ವದ ನಾನಾ ಭಾಗಗಳಲ್ಲಿ ಹೊಸ ತಳಿಯ ಓಮಿಕ್ರಾನ್ ವೈರಸ್ ಕಾಣಿಸಿಕೊಂಡಿರುವ ಹಿನ್ನೆಲೆ, ರಾಜ್ಯದಲ್ಲಿ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸಂಜೆ ಮಹತ್ವದ ಸಭೆ ನಡೆಸಲಿದ್ದಾರೆ.

ಸಂಜೆ 4 ಗಂಟೆಗೆ ಗೃಹ ಕಚೇರಿ ಕೃಷ್ಣಾದಲ್ಲಿ ಏಳು ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಪ್ಪತ್ತು ನಿರ್ವಹಣೆ ಹಾಗೂ ಅಭಿವೃದ್ಧಿ ಆಯುಕ್ತರು ಸೇರಿದಂತೆ ಮತ್ತಿತರ ಅಧಿಕಾರಿಗಳ ಜೊತೆ ಮಹತ್ವದ ಸಭೆಯನ್ನು ನಡೆಸಲಿದ್ದಾರೆ.

ಚಾಮರಾಜನಗರ, ಮೈಸೂರು, ಕೊಡುಗು, ಬೆಂಗಳೂರುನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಧಾರವಾಡ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಆರೋಗ್ಯ ಮತ್ತು ಕುಟುಂಬ ಇಲಾಖೆಯ ಹಿರಿಯ ಅಧಿಕಾರಿಗಳು ವಿಡಿಯೋ ಕಾನರೆನ್ಸ್‍ನಲ್ಲಿ ಭಾಗವಹಿಸಬೇಕೆಂದು ಬೊಮ್ಮಾಯಿ ಸೂಚನೆ ಕೊಟ್ಟರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಕ್ಷಿಣ ಆಫ್ರಿಕಾ, ಬೋಟ್ಸಾನ, ಬಾಂಗ್ಲಾದೇಶ ಸೇರಿದಂತೆ ಮತ್ತಿತರ ಕಡೆ ಹೊಸ ತಳಿಯ ವೈರಸ್ ಪತ್ತೆಯಾಗಿದೆ. ರಾಜ್ಯದಲ್ಲಿ ಮತ್ತೆ ಕೊರೊನಾ ವೈರಸ್ ಅಲ್ಲಲ್ಲಿ ಕಾಣಿಸಿಕೊಂಡಿದೆ. ಕೆಲವರು ಕೇರಳದಿಂದ ಇದು ಹಬ್ಬಿದೆ ಎಂದು ಹೇಳುತ್ತಿದ್ದಾರೆ. ಈ ಎಲ್ಲ ಸಾಧಕ-ಬಾಧಕಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿ ನಂತರ ಸರ್ಕಾರ ಏನು ಕ್ರಮ ಕೈಗೊಳ್ಳಲಿದೆ ಎಂಬುದನ್ನು ತಿಳಿಸಲಿದ್ದೇವೆ ಎಂದು ಹೇಳಿದರು.

ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸದಸ್ಯರು, ರಾಜ್ಯ ವಿಪತ್ತು ನಿರ್ವಹಣಾ ಸಮಿತಿ ಸದಸ್ಯರು ಕೂಡ ಭಾಗಿಯಾಗಬೇಕು. ತಡ ಮಾಡದೆ ನಾವು ಸಭೆ ನಡೆಸಿ ವೈರಸ್ ಹಬ್ಬದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಎಂದು ತಿಳಿಸಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೆಲವು ಶಿಫಾರಸ್ಸುಗಳನ್ನು ಮಾಡಿದೆ. ಅಷ್ಟು ಮಾತ್ರವಲ್ಲದೆ ಸಾರ್ವಜನಿಕರು ಕೂಡ ಏನು ಮಾಡಬೇಕು ಎಂಬುದರ ಕುರಿತಾಗಿ ಚರ್ಚೆ ನಡೆಸಲಿದ್ದೇವೆ. ಅಂತಿಮವಾಗಿ ಸಭೆಯ ಬಳಿಕ ಸರ್ಕಾರದ ಕ್ರಮಗಳನ್ನು ಸರ್ಕಾರ ಬಹಿರಂಗಪಡಿಸುವುದಾಗಿ ಸಿಎಂ ಹೇಳಿದ್ದಾರೆ.

ಒಂದು ಕಡೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವುದು ಮತ್ತೊಂದು ಕಡೆ ಹೊಸ ತಳಿಯ ಕೊರೊನಾ ವೈರಸ್ ಕಾಣಿಸಿಕೊಂಡಿರುವುದರಿಂದ ರಾಜ್ಯ ಸರ್ಕಾರ ಏನು ಕ್ರಮ ಕೈಗೊಳ್ಳಲಿದೆ ಎಂಬುದು ಸಾರ್ವಜನಿಕ ವಲಯದಲ್ಲೂ ಕುತೂಹಲಕ್ಕೆ ಕಾರಣವಾಗಿದೆ