Latest Post

ಉಪನ್ಯಾಸಕ ಅಶೋಕ ಕೋರೆಗೆ ಪಿಎಚ್‌.ಡಿ ಡಾಕ್ಟರೇಟ್ : ಎಬಿವಿಪಿ ಯಿಂದ ಸನ್ಮಾನ ಸಾಕು ನಾಯಿಗಳಿಗೆ ತಪ್ಪದೇ ರೇಬೀಸ್ ಲಸಿಕೆ ನೀಡಿ: ಸಚಿವ ಪ್ರಭು ಚವ್ಹಾಣ
Spread the love

ಬೆಂಗಳೂರು: ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ನೇತೃತ್ವದಲ್ಲಿ ನಡೆದಂತ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಅದರಲ್ಲೂ ಮುಂಬೈ ಕರ್ನಾಟಕಕ್ಕೆ ಕಿತ್ತೂರು ಕರ್ನಾಟಕವೆಂದು ನಾಮಕರಣ ಪ್ರಸ್ತಾವನೆಗೆ, ಸಚಿವ ಸಂಪುಟ ಸಭೆಯಲ್ಲಿ ಅಸ್ತು ಎನ್ನಲಾಗಿದೆ.

ಈ ಕುರಿತಂತೆ ಸಚಿವ ಸಂಪುಟ ಸಭೆಯ ನಂತ್ರ ಸುದ್ದಿಗಾರರೊಂದಿಗೆ ಮಾಹಿತಿ ನೀಡಿದಂತ ಸಚಿವ ಜೆಸಿ ಮಾಧುಸ್ವಾಮಿಯವರು, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಬಿಜಾಪುರ, ಬಾಗಲಕೋಟೆ, ಗದಗ ಮತ್ತು ಹಾವೇರಿ ಜಿಲ್ಲೆಗಳ ಪ್ರದೇಶಗಳನ್ನು ಕಿತ್ತೂರು ಕರ್ನಾಟಕ ಪ್ರದೇಶ ಎಂದು ನಾಮಕರಣ ಮಾಡುವ ಪ್ರಸ್ತಾವನೆಯನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಸಲ್ಲಿಸಿತ್ತು. ಈ ಕಡತಕ್ಕೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದರು.

ಈ ಹಿನ್ನಲೆಯಲ್ಲಿ ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಬಿಜಾಪುರ, ಬಾಗಲಕೋಟೆ, ಗದಗ ಮತ್ತು ಹಾವೇರಿ ಜಿಲ್ಲೆಗಳ ಪ್ರದೇಶಗಳನ್ನು ಕಿತ್ತೂರು ಕರ್ನಾಟಕ ಪ್ರದೇಶ ಎಂಬುದಾಗಿ ಕರೆಯಲ್ಪಡಲಿವೆ.