Latest Post

ಸಾಕು ನಾಯಿಗಳಿಗೆ ತಪ್ಪದೇ ರೇಬೀಸ್ ಲಸಿಕೆ ನೀಡಿ: ಸಚಿವ ಪ್ರಭು ಚವ್ಹಾಣ ಕಂದಾಯ ಇಲಾಖೆ ಡಾಟಾ ಎಂಟ್ರಿ ಆಪರೇಟರ್‌ಗೆ ಸೇವಾ ಭದ್ರತೆ, ಸೂರ್ಯಕಾಂತ್ ನಾಗಮಾರಪಳ್ಳಿ ಮನವಿ
Spread the love

1.ಮೈಸೂರು: ನನ್ನನ್ನು ಜಾತಿವಾದಿ ಎಂದು ಬಿಂಬಿಸಲು ಬಿಜೆಪಿ ಷಡ್ಯಂತ್ರ ರೂಪಿಸಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.ಮೈಸೂರಿನ
ಕನಕ ಭವನದ ಆವರಣದಲ್ಲಿ ನೂತನವಾಗಿ ನಿರ್ಮಾಣವಾಗಿರುವ ವರಸಿದ್ಧಿ ವಿನಾಯಕ ದೇವಸ್ಥಾನ ಲೋಕಾರ್ಪಣೆ ಹಾಗೂ ಅತಿಥಿ ಗೃಹ ಉದ್ಘಾಟನೆಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಜಾತಿ ರಾಜಕಾರಣ ಮಾಡುತ್ತಿದ್ದಾರೆಂದು ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.

 

2:ಬೆಂಗಳೂರು: ಅಲ್ಪಸಂಖ್ಯಾತ ನಾಯಕರನ್ನು ಯಾರು ಮುಗಿಸಿದ್ದಾರೆ ಎಂದು ಜನ ನೋಡಿದ್ದಾರೆ. ಹಾನಗಲ್ ಮತ್ತು ಸಿಂದಗಿ ಉಪಚುನಾವಣೆಯ ಇತ್ತೀಚಿನ ಬೆಳವಣಿಗೆಗಳು ಕರ್ನಾಟಕದಲ್ಲಿ ಅಲ್ಪಸಂಖ್ಯಾತರ ನಾಯಕರನ್ನು ಯಾರು ಮುಗಿಸುತ್ತಿದ್ದಾರೆಂಬುದನ್ನು ಬಹಿರಂಗಪಡಿಸಿದೆ ಎಂದು ಹೆಚ್.ಡಿ.ಕುಮಾರಸ್ವಾಮಿಯವರ ಹೇಳಿಕೆಗೆ ಕಾಂಗ್ರೆಸ್ ಶಾಸಕ ಎನ್‌.ಎ ಹ್ಯಾರಿಸ್. ರಿಯಾಕ್ಟ್ ಮಾಡಿದ್ದಾರೆ.

 

3.ಬೆಂಗಳೂರು: ಗೋವಾದಲ್ಲಿ ಕನ್ನಡ ಭವನ ನಿರ್ಮಿಸಲು 10 ಕೋಟಿ ಮಂಜೂರು ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ. ನೇತೃತ್ವದಲ್ಲಿ ಇಂದು ಬೆಳಿಗ್ಗೆ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ರನ್ನು ಭೇಟಿ ಮಾಡಿದ ಅಖಿಲ ಗೋವಾ ಕನ್ನಡ ಮಹಾಸಂಘದ ಪದಾಧಿಕಾರಿಗಳಿಗೆ ಮುಖ್ಯಮಂತ್ರಿ ಈ ಭರವಸೆ ನೀಡಿದರು.

 

4.ಬೆಂಗಳೂರು: ಬಿಟ್‌ ಕಾಯಿನ್‌ ಹಗರಣಕ್ಕೆ ಸಂಬಂಧಿಸಿದಂತೆ ಗರಂ ಆಗಿರುವ ಶಾಸಕ ಸಿಟಿ ರವಿ,ಕಾಂಗ್ರೆಸ್‌ಗೆ ಯಾರ ಮೇಲೆ ನಂಬಿಕೆ ಇದೆಯೋ ಅಲ್ಲಿ ದಾಖಲೆ ಕೊಡಲಿ, ನ್ಯಾಯಾಂಗದ ಮೇಲೆ ನಂಬಿಕೆ ಇದ್ರೆ ಅಲ್ಲಿಯೇ ದಾಖಲೆ ತೋರಿಸಲಿ, ಇಲ್ಲವೇ ಸಿಬಿಐ ಮೇಲೆ ವಿಶ್ಚಾಸ ಇದ್ರೆ ಅದಕ್ಕೆ ಕೊಡಲಿ ಎಂದು ತಿರುಗೇಟು ನೀಡಿದರು.

 

5.ಬಾಗಲಕೋಟೆ : ದೇಶದಲ್ಲಿ ಕಾಂಗ್ರೆಸ್ ಮುಕ್ತವಾಗುವ ಕಾಲ ಬಹಳ ದೂರ ಇಲ್ಲ ಸನಿಹದಲ್ಲಿದೆ. ಕಾಂಗ್ರೆಸ್ ಮುಕ್ತ ಆಗಲು ಒಂದು ವರ್ಷ ಕಾಯಿರಿ ಎಂದು ಸಚಿವ ಗೋವಿಂದ್ ಕಾರಜೋಳ ಭವಿಷ್ಯ ನುಡಿದಿದ್ದಾರೆ.

 

6.ಮೈಸೂರು: ಮೇಕೆದಾಟು ಯೋಜನೆಯ ವಿಸ್ತೃತ ಯೋಜನಾ ವರದಿ ತಯಾರಿಕೆ ಕಾಂಗ್ರೆಸ್ ಸರ್ಕಾರದ ಸಮಯದಲ್ಲಿ ತಡವಾಗಿತ್ತು ಎಂಬ ಕಾರಣಕ್ಕೆ ಈಗ ಕಾಮಗಾರಿ ಆರಂಭಕ್ಕೆ ತಡ ಮಾಡುವುದು ಸರಿಯಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು.

 

7.ಭೋಪಾಲ್:ಬ್ರಾಹ್ಮಣ ಮತ್ತು ಬನಿಯಾ ಸಮುದಾಯದ ಜನರು ತಮ್ಮ ಜೇಬಿನಲ್ಲಿದ್ದಾರೆ ಎಂದು ಮಧ್ಯಪ್ರದೇಶ ಬಿಜೆಪಿ ಉಸ್ತುವಾರಿ ಮುರಳೀಧರ ರಾವ್ ಹೇಳಿದ್ದಾರೆ.ಬಿಜೆಪಿ ಜಾತಿ ಮತ ಕೇಳುತ್ತಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು ಈ ವಿಷಯ ತಿಳಿಸಿದರು.

 

8.ಮೈಸೂರು : ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ, ಜಿ.ಟಿ.ದೇವೆಗೌಡ ಅವರು ಕಾಂಗ್ರೆಸ್ ಸೇರುವ ಬಗ್ಗೆ ಇನ್ನೂ ಯಾವುದೇ ಚರ್ಚೆ ನಡೆದಿಲ್ಲ, ಸದ್ಯಕ್ಕೆ ಯಾವುದೇ ಭರವಸೆ ಕೊಟ್ಟಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.

 

9.ವಿಜಯಪುರ: ವ್ಯಕ್ತಿಯ ನೈಜ ಬದುಕಿಗೆ ಶೈಕ್ಷಣಿಕ ಓದಿನ ಜೊತೆಗೆ ಸಮಾಜದಲ್ಲಿ ಜೀವನ ನಿರ್ವಹಣೆಗೆ ತಿಳುವಳಿಕೆಯೂ ಮುಖ್ಯ ಎಂದು ಇನ್ಫೋಸಿಸ್ ಸಂಸ್ಥಾಪಕಿ ಡಾ.ಸುಧಾಮೂರ್ತಿ ಅಭಿಪ್ರಾಯಪಟ್ಟರು.

 

 

10.ಗದಗ: ಕಳೆದ ಎರಡು ವರ್ಷದಲ್ಲಿ ಕೋವಿಡ್ ನಿಯಂತ್ರಣ ಮಾಡಿದ್ದೇ ಸರಕಾರದ ದೊಡ್ಡ ಸಾಧನೆ. ಜೊತೆಗೆ ರಾಜ್ಯದ ಯಾವುದೇ ಅಭಿವೃದ್ಧಿ ಕಾರ್ಯಗಳು ನಿಂತಿಲ್ಲ. ಕಾಂಗ್ರೆಸ್ ಬಳಿ ಕೇಳಿ ಬಿಜೆಪಿ ಜನ ಸ್ವರಾಜ್ ಕಾರ್ಯಕ್ರಮ ಮಾಡಬೇಕಿಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ತಿರುಗೇಟು ನೀಡಿದರು.

 

11.ಹಗರಿಬೊಮ್ಮನಹಳ್ಳಿ : ಬಸ್ ಸಂಚಾರಕ್ಕೆ ಆಗ್ರಹಿಸಿ ಕಾಲೇಜು ವಿದ್ಯಾರ್ಥಿಗಳು ಹಗರಿಬೊಮ್ಮನಹಳ್ಳಿ ಬಸ್ ಡಿಪೊ ಎದುರು ಎಸ್‌ಎಫ್‌ಐ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು.ತಾಲ್ಲೂಕಿನ ಮುತ್ಕೂರು, ಬನ್ನಿಗೋಳ, ಶೀಗೇನಹಳ್ಳಿ, ಮಾದೂರು, ಸೊಬಟಿ, ಅಂಕಸಮುದ್ರ ಗ್ರಾಮಗಳಿಗೆ ಬಸ್ ಸಂಚಾರ ಆರಂಭಿಸಬೇಕು.ಬಸ್ಸುಗಳಿಲ್ಲದ ಕಾರಣ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗುತ್ತಿದೆ ಎಂದು ತಿಳಿಸಿದರು.

 

 

12.ಚಿತ್ರದುರ್ಗ: ಚಿತ್ರದುರ್ಗದಲ್ಲಿ ಡಿಸಿಆರ್​ಬಿ ಬ್ರಾಂಚ್​ನಲ್ಲಿ ಡಿವೈಎಸ್ಪಿ ಆಗಿದ್ದ ರಮೇಶ್, ಇಂದು ಬೆಳಗ್ಗೆ ವಾಯುವಿಹಾರ ಹೋಗಿದ್ದರು.ವಾಯುವಿಹಾರ ಮುಗಿಸಿ ವಾಪಸ್ ಬಂದ ರಮೇಶ್​ಗೆ ಎದೆನೋವು ಕಾಣಿಸಿಕೊಂಡಿದೆ.ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲು ಹೊರಡುತ್ತಿದ್ದಂತೆಯೇ 55 ವರ್ಷದ ರಮೇಶ್​ ಕೊನೆಯುಸಿರೆಳೆದಿದ್ದಾರೆ.

 

 

13.ಚಿಕ್ಕಮಗಳೂರು: ವಾಹನ ರಿಪೇರಿ ಮಾಡುವಾಗ ಜಾಕ್ ಸ್ಲಿಪ್ ಆಗಿ ತಲೆಗೆ ಗಂಭೀರವಾದ ಗಾಯವಾಗಿದ್ದ ಯೋಧ ಶೇಷಪ್ಪ ಕೋಮಾಕ್ಕೆ ಜಾರಿದ್ದರು, ನಾಲ್ಕು ದಿನದ ಬಳಿಕ ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಕಡೂರು ತಾಲೂಕಿನ ಬಿಳವಾಲ ಗ್ರಾಮದ ಯೋಧ ಬಿ. ಕೆ. ಶೇಷಪ್ಪ ಅಂತ್ಯಕ್ರಿಯೆ ಅವರ ತೋಟದಲ್ಲಿ ನಡೆಯಿತು.

 

14.ಬೆಂಗಳೂರು: ತಮ್ಮ ನಡೆ, ನುಡಿ, ಸರಳತೆ, ಸಮಾಜ ಸೇವೆ ಮೂಲಕ ಯುವ ಜನತೆಗೆ ಮಾದರಿಯಾಗಿದ್ದ ಪುನೀತ್ ಅವರ ಹೆಸರನ್ನು ಕಲಬುರಗಿಯಲ್ಲಿ ಇದೇ 11 ರಂದು ನಡೆಯಲಿರುವ ‘ಉದ್ಯಮಿಯಾಗು ಉದ್ಯೋಗ ನೀಡು’ ಕಾರ್ಯಾಗಾರದ ವೇದಿಕೆಗೆ ಹೆಸರಿಡಿಲು ಸಚಿವ ಮುರುಗೇಶ್ ನಿರಾಣಿ ತೀರ್ಮಾನಿಸಿದ್ದಾರೆ.

 

 

15.ಭೋಪಾಲ್:ಮಧ್ಯಪ್ರದೇಶದ ಭೋಪಾಲ್‌ನಲ್ಲಿರುವ ಕಮಲಾ ನೆಹರು ಮಕ್ಕಳ ಆಸ್ಪತ್ರೆಯ ವಿಶೇಷ ನವಜಾತ ಶಿಶು ಆರೈಕೆ ಘಟಕದಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಸತ್ತ ಮಕ್ಕಳ ಸಂಖ್ಯೆ ನಾಲ್ಕಕ್ಕೆ ಏರಿದ್ದು, ಘಟನೆಯ ಕುರಿತು ಉನ್ನತ ಮಟ್ಟದ ತನಿಖೆಗೆ ಸರ್ಕಾರ ಆದೇಶಿಸಿದೆ .

 

 

16.ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ದಿಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
ಇಂದು ಕೋರ್‌ ಕಮಿಟಿ ಸಭೆ ನಡೆಯಲಿದ್ದು, ಮರು ದಿನವೇ ದಿಲ್ಲಿಗೆ ತೆರಳುತ್ತಿರುವುದು ಕುತೂಹಲಕ್ಕೆ ಕಾರಣವಾಗಿದೆ. ಸಂಪುಟ ವಿಸ್ತರಣೆ ವಿಚಾರದ ಬಗ್ಗೆ ವರಿಷ್ಠರ ಜತೆ ಚರ್ಚಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

 

17.ಚೆನ್ನೈ: ತಮಿಳುನಾಡಿನಲ್ಲಿ ಮಳೆ ಮುಂದುವರಿದಿದ್ದು, ಮಳೆ ಸಂಬಂಧಿ ಅವಘಡಗಳಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ರಾಜಧಾನಿ ಚೆನ್ನೈ ವಲಯ ಹಾಗೂ ರಾಜ್ಯದ ಉತ್ತರ ಭಾಗದ ಜಿಲ್ಲೆಗಳಾದ ಚೆಂಗಲ್‌ಪೇಟ್, ಕಾಂಚಿಪುರಂ, ತಿರುವಳ್ಳೂರು ಮತ್ತು ವೆಲ್ಲೂರಿನಲ್ಲಿ ಮುಂಜಾನೆಯಿಂದ ಮಳೆಯಾಗುತ್ತಿದೆ.

 

18.ಬೆಂಗಳೂರು: ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆ ನಡೆಯಲಿದ್ದು, ಇದರಲ್ಲಿ ಪಾಲ್ಗೊಳ್ಳಲು ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ ಅವರು ಬೆಂಗಳೂರು ನಗರಕ್ಕೆ ಬಂದಿಳಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಜ್ಯದಲ್ಲಿ ಪಕ್ಷ ಸದೃಢಗೊಳಿಸಿ ಮುಂದಿನ ಚುನಾವಣೆ ಗೆಲ್ಲುವ ಕುರಿತು ರಾಜ್ಯ ಪದಾಧಿಕಾರಿಗಳ ಸಭೆ ಹಾಗೂ ಕೋರ್‌ ಕಮಿಟಿಯಲ್ಲಿ ಚರ್ಚಿಸಲಾಗುವುದು ಎಂದಿದ್ದಾರೆ.

 

 

19.ಬೆಂಗಳೂರು: ಮುಂದಿನ 2 ವರ್ಷಗಳ ಕಾಲ ಇಂಡಿಯನ್ ಪ್ರೀಮಿಯರ್ ಲೀಗ್ ಫ್ರಾಂಚೈಸಿಯ ಮುಖ್ಯ ಕೋಚ್ ಆಗಿ ಸಂಜಯ್ ಬಂಗಾರ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಪ್ರಕಟಿಸಿದೆ. ಆಸ್ಟ್ರೇಲಿಯದ ಮಾಜಿ ಆರಂಭಿಕ ಆಟಗಾರ ಸೈಮನ್ ಕ್ಯಾಟಿಚ್ ಬದಲಿಗೆ ಬಂಗಾರ್ ಆರ್‌ಸಿಬಿಯ ಮುಖ್ಯ ಕೋಚ್ ಆಗಲಿದ್ದಾರೆ.

 

20.ದುಬೈ: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯ ಸಂದರ್ಭದಲ್ಲಿ ಟೀಮ್ ಇಂಡಿಯಾ ಆಟಗಾರರು ಮಾನಸಿಕವಾಗಿ ಮತ್ತು ದೈಹಿಕವಾಗಿ ಬಳಲಿದ್ದರು ಎಂದು ತಂಡದ ನಿರ್ಗಮಿಸುತ್ತಿರುವ ಮುಖ್ಯ ಕೋಚ್ ರವಿ ಶಾಸ್ತ್ರಿ ಹೇಳಿದ್ದಾರೆ.

FOR MORE UPDATES ON WHATSAPP JOIN OUR WHATSAPP GROUP