Latest Post

ಈ ದೇಶದ ಸಂಪತ್ತು ಶಿಕ್ಷಕರು :ಡಾ ಮನ್ನಥ ಡೊಳೆ ವಸತಿ ನಿಲಯಗಳಿಗೆ 25% ಪ್ರತಿಶತ ಪ್ರವೇಶವನ್ನು ಹೆಚ್ಚಿಸುವಂತೆ ಎಬಿವಿಪಿ ಔರಾದ ಶಾಖೆ ಮನವಿ
Spread the love

1.ಬೆಳಗಾವಿ: ಬೆಳಗಾವಿ ಜಿಲ್ಲೆಯ ‌ವಿವಿಧ ಆಭರಣ ಮಳಿಗೆಗಳು ಹಾಗೂ ಅವುಗಳ ಮಾಲೀಕರ ಮನೆಗಳ ಮೇಲೆ ಐ.ಟಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.ಬೆಳಗಾವಿಯ ಖಡೇಬಜಾರ್‌ನಲ್ಲಿರುವ ಪೋತದಾರ್ ಜ್ಯುವೆಲರ್ಸ್ ಮಳಿಗೆ ಮೇಲೆ ಹಾಗೂ ಅದರ ಮಾಲೀಕ ಅನಿಲ ಪೋತದಾರ ಅವರ ಜಾಧವ ನಗರದಲ್ಲಿರುವ ಮನೆ ಮೇಲೆ ದಾಳಿ ನಡೆಸಿದ್ದಾರೆ.

 

2.ನವದೆಹಲಿ: ವಿಆರ್​ಎಲ್​ ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ವಿಜಯ ಸಂಕೇಶ್ವರ ಅವರಿಗೆ ಸೋಮವಾರ ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ‘ಪದ್ಮಶ್ರೀ ಪ್ರಶಸ್ತಿ’ ಪ್ರದಾನ ಮಾಡಿದರು.

 

3.ನವದೆಹಲಿ: ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು, ಬಾಲಿವುಡ್ ನಟಿ ಕಂಗನಾ ರನಾವತ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ 119 ಜನರು ಇಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ದೇಶದ ಸರ್ವೋನ್ನತ ಗೌರವ ಸ್ವೀಕರಿಸಿದರು.

 

4.ಬೆಂಗಳೂರು- ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರಿಗೆ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ನೀಡುವ ಕುರಿತು ಅವರ ಕುಟುಂಬ ವರ್ಗದವರೊಂದಿಗೆ ಚರ್ಚಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.

 

5.ಬೆಂಗಳೂರು :ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿ ಕಾಂಗ್ರೆಸ್‍ನ ಪಾದಯಾತ್ರೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಚಿವ ಕೆಎಸ್ ಈಶ್ವರಪ್ಪ , ರಾಜಕಾರಣಕ್ಕೋಸ್ಕರ ಪಾದಯಾತ್ರೆ ಮಾಡುತ್ತಿದ್ದಾರೆ. ಅವರು ಪಾದಯಾತ್ರೆ ಮಾಡಿದರೆ ನಮ್ಮದೇನು ಅಭ್ಯಂತರ ಇಲ್ಲ ಎಂದು ಹೇಳಿದರು. ಈ ಯೋಜನೆ ಅನುಷ್ಠಾನವಾಗಬೇಕು ಎಂಬುದು ರಾಜ್ಯದ ಪ್ರತಿಯೊಬ್ಬರ ಅಪೇಕ್ಷೆ ಇದೆ ಎಂದರು.

 

6.ಬೆಳಗಾವಿ: ಬೆಳಗಾವಿಯಲ್ಲಿ ‌ ನಡೆಯಲಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನದ ಕಲಾಪವನ್ನು ವೆಬ್‌ಕ್ಯಾಸ್ಟಿಂಗ್ ಮೂಲಕ ನೇರಪ್ರಸಾರ ಮಾಡುವುದಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಸುವರ್ಣ ವಿಧಾನಸೌಧದಲ್ಲಿ ಪರಿಶೀಲನೆ ನಡೆಸಿದರು.

 

7.ಬೆಂಗಳೂರು: ಕಿತ್ತೂರು ಉತ್ಸವವನ್ನು ರಾಜ್ಯ ಮಟ್ಟದ ಉತ್ಸವವಾಗಿ ಸರ್ಕಾರ ಘೋಷಿಸಿದ ಬೆನ್ನಲ್ಲೇ ಇದೀಗ ಮುಂಬೈ ಕರ್ನಾಟಕಕ್ಕೆ ಕಿತ್ತೂರು ಕರ್ನಾಟಕ ಎಂದು ನಾಮಕರಣ ಮಾಡಲು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಮ್ಮತಿ ಸೂಚಿಸಲಾಗಿದೆ.

 

8.ಬೆಳಗಾವಿ:  ರಾಜ್ಯದಾದ್ಯಂತ ಇಂದು ಅಂಗನವಾಡಿ ಕೇಂದ್ರಗಳು ಪುನರಾರಂಭಗೊಂಡಿವೆ, ಅದೇ ರೀತಿಯಾಗಿ ಗಡಿನಾಡು ಬೆಳಗಾವಿಯ ರುಕ್ಮಿಣಿ ನಗರ ಅಂಗನವಾಡಿ ಕೇಂದ್ರವನ್ನು ಆಕರ್ಷಕವಾಗಿ ಸಿಂಗರಿಸಲಾಗಿತ್ತು. ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ಮಕ್ಕಳನ್ನು ಬರಮಾಡಿಕೊಂಡು. ಪೌಷ್ಟಿಕ ಆಹಾರ ಹಾಗೂ ಸಿಹಿ ವಿತರಿಸಿದರು.

 

 

9.ರಾಮನಗರ: ಮಲಗಿದ್ದ ವೇಳೆ ಗುಡಿಸಲಿನ ಗೋಡೆ ಕುಸಿದು ಮೈಮೇಲೆ ಬಿದ್ದ ಪರಿಣಾಮವಾಗಿ ಮಹಿಳೆಯೊಬ್ಬರು ಸಾವಪ್ಪಿರುವ ಘಟನೆ ವರದಿಯಾಗಿದೆ. ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಲಂಬಾಣಿತಾಂಡ್ಯದಲ್ಲಿ ಈ ಘಟನೆ ನಡೆದಿದೆ. 55 ವರ್ಷ ವಯಸ್ಸಾಗಿದ್ದ ಗೌರಿಬಾಯಿ ಮೃತ ಮಹಿಳೆ ಎಂದು ತಿಳಿದುಬಂದಿದೆ.

 

10.ಚನ್ನಪಟ್ಟಣ: ಚನ್ನಪಟ್ಟಣ ತಾಲ್ಲೂಕಿನ ತಿಟ್ಟಮಾರನಹಳ್ಳಿ ಗ್ರಾಮಸ್ಥರು ಹಾಗೂ ಪುನೀತ್ ಅಭಿಮಾನಿಗಳು ಭಾನುವಾರ ನಟ ಪುನೀತ್ ನಿಧನಕ್ಕೆ ಸಂತಾಪ ಸಭೆ ಏರ್ಪಡಿಸಿದ್ದರು. ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಜೊತೆಗೆ ಅವರ ನೆಚ್ಚಿನ ಬಿರಿಯಾನಿಯನ್ನು ಎಡೆ ಇಟ್ಟು ಅಭಿಮಾನ ಪೂರ್ವಕ ಶ್ರದ್ಧಾಂಜಲಿ ಸಲ್ಲಿಸಿದರು.

 

11.ಬಳ್ಳಾರಿ: ಬಳ್ಳಾರಿಯಲ್ಲಿ ಪುನೀತ್ ಹೆಸರಲ್ಲಿ ಶಾಲೆ ಆರಂಭ ಮಾಡಲಾಗುವುದು. ರಸ್ತೆ, ಪಾರ್ಕ್ ಗಳಿಗೆ ಪುನೀತ್ ಹೆಸರಿಡಲು ಸ್ಥಳೀಯ ಸಂಸ್ಥೆಗಳ ಗಮನ ಸೆಳೆಯಲಾಗುವುದು ಎಂದು ಜನಾರ್ದನ ರೆಡ್ಡಿ ತಿಳಿಸಿದ್ದಾರೆ.

 

 

12.ನವದೆಹಲಿ: ಕೇಂದ್ರ ಸರ್ಕಾರದ ‘ನೋಟು ಅಮಾನ್ಯೀಕರಣ’ ಕ್ರಮವನ್ನು ‘ದುರಂತ’ಕ್ಕೆ ಹೋಲಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಒಂದೊಮ್ಮೆ ಈ ಕ್ರಮ ಯಶಸ್ವಿಯಾಗಿದ್ದರೆ ದೇಶದಲ್ಲಿ ಭ್ರಷ್ಟಾಚಾರ ಏಕೆ ಕೊನೆಗೊಂಡಿಲ್ಲ ಮತ್ತು ಕಪ್ಪು ಹಣವನ್ನು ಏಕೆ ದೇಶಕ್ಕೆ ಮರಳಿ ತರಲಾಗಲಿಲ್ಲ’ ಎಂದು ಪ್ರಶ್ನಿಸಿದ್ದಾರೆ.

 

13.ಬೆಂಗಳೂರು: ಈಗಾಗಲೇ ಗ್ಯಾಸ್ ದರ, ಹೋಟೆಲ್ ಊಟ ತಿಂಡಿ ದರ, ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳದ ಹೊಡೆತಕ್ಕೆ ಸಿಲುಕಿ ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಇದೇ ಸಂದರ್ಭದಲ್ಲಿ ಇದೀಗ ರಾಜಧಾನಿಯಲ್ಲಿ ಆಟೋ ಪ್ರಯಾಣದರವನ್ನು ಪ್ರತಿ ಕಿಲೋಮೀಟರ್ ಗೆ ರೂ.25 ರಿಂದ ರೂ.30ಕ್ಕೆ ಹೆಚ್ಚಳ ಮಾಡಲಾಗಿದೆ.

 

 

14.ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಸಂಪಾದಕತ್ವದ ‘ಜನತಾ ಪತ್ರಿಕೆ’ ಲೋಕಾರ್ಪಣೆಯಾಗಿದೆ. ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ನಾಡಿನ ಹಿರಿಯ ಪತ್ರಕರ್ತ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಪಿ.ರಾಮಯ್ಯ ಇಂದು ‘ಜನತಾ ಪತ್ರಿಕೆ ‘ ಯನ್ನು ಲೋಕಾರ್ಪಣೆ ಮಾಡಿದರು.

 

 

15.ನವದೆಹಲಿ: ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸ್ ಮತ್ತು ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂ ಕೋರ್ಟ್, ನಿರೀಕ್ಷಿತ ಮಟ್ಟದ ತನಿಖೆಯಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಲ್ಲದೇ ,ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳಿಗೆ ವಿಚಾರಣೆ ಹೊಣೆ ನೀಡಿದೆ.

 

16.ಚೆನ್ನೈ: ತಮಿಳುನಾಡಿನಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಅನೇಕ ಜಿಲ್ಲೆಗಳಲ್ಲಿ ಶಾಲಾ- ಕಾಲೇಜ್ ಗಳು ಬಂದ್ ಸೇರಿದಂತೆ ವಿವಿಧ ತುರ್ತು ಕ್ರಮಗಳನ್ನು ಕೈಗೊಳ್ಳಲಾಗಿದೆ. ಈವರೆಗೂ ಮಳೆ ಸಂಬಂಧಿತ ಘಟನೆಗಳಿಂದ ನಾಲ್ವರು ಮೃತಪಟ್ಟಿದ್ದು, ಓರ್ವ ಗಾಯಗೊಂಡಿದ್ದಾರೆ.

 

17.ಹೊಸದಿಲ್ಲಿ: ಮೂರು ಟೆಸ್ಟ್‌ಗಳು, ಮೂರು ಏಕದಿನ ಪಂದ್ಯಗಳು ಹಾಗೂ ಟ್ವೆಂಟಿ-20 ಅಂತರ್ ರಾಷ್ಟ್ರೀಯ ಪಂದ್ಯಗಳನ್ನು ಆಡಲು  ಆಸೀಸ್ ತಂಡ ,1998ರಲ್ಲಿ ಕೊನೆಯ ಬಾರಿಗೆ ಪಾಕಿಸ್ತಾನಕ್ಕೆ ಪ್ರವಾಸ ಕೈಗೊಂಡಿದ್ದ ಆಸ್ಟ್ರೇಲಿಯಾವು 24 ವರ್ಷಗಳ ಅನುಪಸ್ಥಿತಿಯನ್ನು ಕೊನೆಗೊಳಿಸಲು ಸಜ್ಜಾಗಿದೆ.

 

18. ದುಬೈ: ಸ್ಪಿನ್ನರ್ ರಶೀದ್ ಖಾನ್ ಟಿ20 ಕ್ರಿಕೆಟ್​ನಲ್ಲಿ 400 ವಿಕೆಟ್​ ಪಡೆದ ವಿಶ್ವದ ನಾಲ್ಕನೇ ಬೌಲರ್ ಎನಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೆ ಅತೀ ವೇಗವಾಗಿ ಟಿ20ಯಲ್ಲಿ 400 ವಿಕೆಟ್ ಪಡೆದ ಬೌಲರ್ ಎಂಬ ದಾಖಲೆ ನಿರ್ಮಿಸಿದ್ದಾರೆ.

 

19.ಬೆಂಗಳೂರು : ಪುನೀತ್‌ ರಾಜ್‌ಕುಮಾರ್‌ ಅವರಿಗೆ ಮರಣೋತ್ತರ ಪದ್ಮಶ್ರೀ ಪ್ರಶಸ್ತಿ ನೀಡಬೇಕು ಎನ್ನುವ ಅಭಿಯಾನ ಆರಂಭವಾಗಿರುವ ಬೆನ್ನಲ್ಲೇ ಈ ಕುರಿತು ಪ್ರತಿಕ್ರಿಯೆ ನೀಡಿರುವ ನಟ ಶಿವರಾಜ್‌ಕುಮಾರ್‌, ‘ಪದ್ಮಶ್ರೀ ಅಲ್ಲ ಯಾವ ಶ್ರೀ ಕೊಟ್ಟರೂ ಅಪ್ಪು ಅಮರಶ್ರೀ ಎಂದರು.

 

 

20.ಬೆಂಗಳೂರು: ನಟ ಪುನೀತ್ ರಾಜಕುಮಾರ್ ಅವರ 11ನೇ ದಿನದ ಪುಣ್ಯತಿಥಿಯ ಅಂಗವಾಗಿ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವೆಡೆಗಳಲ್ಲಿ ನಡೆದ ಶ್ರದ್ಧಾಂಜಲಿ ಮತ್ತು ಅನ್ನ ಸಂತರ್ಪಣೆ ಕಾರ್ಯಕ್ರಮಗಳಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಪಾಲ್ಗೊಂಡಿದ್ದರು.

 

FOR MORE UPDATES JOIN OUR WHATSAPP GROUP