Latest Post

ಉಪನ್ಯಾಸಕ ಅಶೋಕ ಕೋರೆಗೆ ಪಿಎಚ್‌.ಡಿ ಡಾಕ್ಟರೇಟ್ : ಎಬಿವಿಪಿ ಯಿಂದ ಸನ್ಮಾನ ಸಾಕು ನಾಯಿಗಳಿಗೆ ತಪ್ಪದೇ ರೇಬೀಸ್ ಲಸಿಕೆ ನೀಡಿ: ಸಚಿವ ಪ್ರಭು ಚವ್ಹಾಣ
Spread the love

1.ಬೆಂಗಳೂರು:  ರಾಜ್ಯದಲ್ಲಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿತ್ತು.ಜಾರಿಗೊಳಿಸಲಾಗಿದ್ದ ನೈಟ್ ಕರ್ಫ್ಯೂ ಹಿಂಪಡೆಯಲಾಗಿದೆ. ಕೊರೋನಾ ಕಡಿಮೆಯಾದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ವಾಪಸ್ ಪಡೆದುಕೊಂಡಿದೆ.

2. ಹುಬ್ಬಳ್ಳಿ :ಉಪ ಚುನಾವಣೆ​ ಬಳಿಕ ಬಿಜೆಪಿ ನಾಯಕರಿಗೆ ತಿಳಿವಳಿಕೆ ಬಂದಿದೆ. ಆದರೆ ಇನ್ನೂ ಗ್ಯಾಸ್, ಅಡುಗೆ ಎಣ್ಣೆ ದರ ಕಡಿಮೆ ಮಾಡಿಲ್ಲ. ದರ ಇಳಿಸದಿದ್ದರೆ 2023ರ ಚುನಾವಣೆಯಲ್ಲಿ ಇದೇ ಉತ್ತರ ಸಿಗಲಿದೆ,” ಎಂದು ಡಿಕೆಶಿ ಎಚ್ಚರಿಕೆ ನೀಡಿದ್ದಾರೆ.

3.ಹುಬ್ಬಳ್ಳಿ: ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿರುವ ಡಿಕೆಶಿ, “ಕೋವಿಡ್​ ವೇಳೆ ರೈತರು, ಕಾರ್ಮಿಕರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಿರಲಿಲ್ಲ. ಸಹಾಯ ಮಾಡುವ ಬದಲು ಜನರ ಪಿಕ್​ಪ್ಯಾಕೆಟ್ ಮಾಡುತ್ತಿತ್ತು. ಇದರಿಂದ ಬೇಸತ್ತು ಹಾನಗಲ್ ಜನರು ಉತ್ತರ ಕೊಟ್ಟಿದ್ದಾರೆ,” ಎಂದು ತಿಳಿಸಿದ್ದಾರೆ.

4.ಬೆಂಗಳೂರು: ಬೆಂಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜನಜೀವನ ತತ್ತರಿಸಿದೆ. ತುರ್ತು ಪರಿಹಾರ ಕಾಮಗಾರಿಗಳ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು ನಗರ ಸ್ಥಳೀಯ ಸಂಸ್ಥೆಗಳೊಂದಿಗೆ ತುರ್ತು ಸಭೆ ನಡೆಸಿದರು.

5.ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು ಪತ್ನಿ ಅನಿತಾ ಕುಮಾರಸ್ವಾಮಿ ಅವರ ಜೊತೆ ಬಿಡದಿಯ ತೋಟದಲ್ಲಿ ಗೋ ಪೂಜೆ ನೆರವೇರಿಸಿದರು.

6.ಬೆಂಗಳೂರು: ಕಾಂಗ್ರೆಸ್ ತೈಲ ಬೆಲೆ ಇಳಿಕೆಗೆ ಟೀಕೆ ಮಾಡುತ್ತಿದ್ದಾರೆ. ಉಪ ಚುನಾವಣೆಯಲ್ಲಿ ಸೋತಿದ್ದಕ್ಕೆ ಬೆಲೆ ಇಳಿಕೆ ಮಾಡಿದರೆಂದು ಹೇಳುತ್ತಿದ್ದಾರೆ. ಚುನಾವಣೆಗೂ ಮುನ್ನ ಮಾಡಿದ್ದರೂ ಟೀಕೆ ಮಾಡ್ತಿದ್ದರು. ಟೀಕೆ ಮಾಡ್ಬೇಕು ಅಂತ ಮಾಡಬಾರದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು.

7. ಬೆಂಗಳೂರು :ಸಿದ್ಧರಾಮಯ್ಯನವರ ಕಂಡರೆ ಬಿಜೆಪಿಗೆ ನಡುಕ. ಅದಕ್ಕಾಗಿ ಬೆಳಗಾದರೆ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಮೂಲಭೂತವಾದಿ ಬಿಜೆಪಿಯವರೇ ದಲಿತರು ಹಿಂದುಳಿದವರು ಅಲ್ಪಸಂಖ್ಯಾತರು ನಿಮಗೆಲ್ಲಾ ಕಾಲಕಸ ಅವರನ್ನು ತುಳಿಯುವುದೇ ನಿಮ್ಮ ಕೆಲಸ. ತಾಲಿಬಾನಿ ಬಿಜೆಪಿ ಎಂಬುದಾಗಿ ಕೆಪಿಸಿಸಿ ವಕ್ತಾರ ಎ.ಎನ್.ನಟರಾಜ್ ಗೌಡ ಕಿಡಿಕಾರಿದ್ದಾರೆ.

8.ಬೆಂಗಳೂರು: ಉಪಚುನಾವಣೆಯಲ್ಲಿ ಸೋಲು-ಗೆಲುವಿನ ಕುರಿತು ಚರ್ಚೆ ಮಾಡುವ ಬದಲು 2023ರ ಸಾರ್ವತ್ರಿಕ ಚುನಾವಣೆಗೆ ಸಕ್ರಿಯವಾಗಿ ಕೆಲಸ ಮಾಡಬೇಕು ಎಂಬ ತೀರ್ಮಾನ ಕೈಗೊಂಡಿದ್ದೇನೆ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ತಿಳಿಸಿದ್ದಾರೆ.

9.ಚಿತ್ರದುರ್ಗ: ಮಠಾಧೀಶರು, ಸಚಿವರು ಹಾಗೂ ಆದಿಜಾಂಬವ ಮಹಾಸಂಸ್ಥಾನದ ಭಕ್ತ ಸಮೂಹ ಮಾರ್ಕಾಂಡಮುನಿ ಸ್ವಾಮೀಜಿ ಅವರ ಅಂತಿಮ ದರ್ಶನವನ್ನು ಪಡೆದರು.ಹೃದಯಾಘಾತದಿಂದ ಲಿಂಗೈಕ್ಯರಾದ ಸ್ವಾಮೀಜಿ ಅವರ ದರ್ಶನಕ್ಕೆ ಹಿರಿಯೂರು ತಾಲ್ಲೂಕಿನ ಕೋಡಿಹಳ್ಳಿಯ ಮಠದಲ್ಲಿ ಶುಕ್ರವಾರ ವ್ಯವಸ್ಥೆ ಮಾಡಲಾಗಿದೆ.

10.ರಾಯ್ಪುರ: ಗೋವರ್ಧನ ಪೂಜೆಯ ಆಚರಣೆಯ ಪ್ರಯುಕ್ತ ಛತ್ತೀಸ್‌ಗಡ ಮುಖ್ಯಮಂತ್ರಿ ಭೂಪೇಶ್‌ ಬಘೇಲ್‌ ಅವರು ಚಾಟಿ ಏಟಿಗೆ ಕೈಯೊಡ್ಡಿದರು.ದುರ್ಗಾ ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದ ಸಾಂಪ್ರದಾಯಿಕ ಆಚರಣೆಯಲ್ಲಿ ರಾಜ್ಯದ ಒಳಿತಿಗೆ ಪ್ರಾರ್ಥಿಸಿ ಮುಖ್ಯಮಂತ್ರಿ ಬಘೇಲ್‌ ಅವರು ಚಾಟಿ ಏಟು ತಿಂದರು.

11.ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕಳೆದ ಕೆಲವು ದಿನಗಳ ಹಿಂದೆ ಭಾರೀ ಮಳೆ ಸುರಿದಿತ್ತು. ನಂತರ ಚಾಮುಂಡಿ ಬೆಟ್ಟದಲ್ಲಿ ಸಂಭವಿಸಿದ್ದ ಭೂಕುಸಿತದ ಆತಂಕ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 15 ದಿನಗಳ ಅಂತರದಲ್ಲಿ ಮೂರನೇ ಬಾರಿ ಭೂಕುಸಿತ ಉಂಟಾಗಿದೆ.

12.ಬೆಂಗಳೂರು: ದೀಪಾವಳಿ ಸಂದರ್ಭದಲ್ಲಿ ಸಂತಸ, ಸಂಭ್ರಮದಿಂದ ಆಚರಿಸುವ ಸಂದರ್ಭದಲ್ಲೇ, ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪಟಾಕಿ ಹಚ್ಚುವ ಸಂದರ್ಭದಲ್ಲಿ ಅವಘಡ ಉಂಟಾಗಿದೆ. ಪ್ರತ್ಯೇಕ ಪ್ರಕರಣದಲ್ಲಿ 9 ಮಕ್ಕಳ ಕಣ್ಣಿಗೆ ಹಾನಿಯಾಗಿರೋದಾಗಿ ತಿಳಿದು ಬಂದಿದೆ.

13.ಪುದುಚೆರಿ: ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯ ಕೊಟ್ಟಕುಪ್ಪಮ್ ಬಳಿ ಬಂದಾಗ ಪಟಾಕಿ ಸ್ಫೋಟಗೊಂಡು ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಅರಿಯನ್ ಕುಪ್ಪಂ ಟೌನ್ ನ ನಿವಾಸಿ (32) ಕಲೈನೇಸನ್ ತನ್ನ 7 ವರ್ಷದ ಪುತ್ರನೊಂದಿಗೆ ಎರಡು ಚೀಲದಲ್ಲಿ ಪಟಾಕಿ ಹೊತ್ತು ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ.

14.ಶ್ರೀನಗರ: ಜಮ್ಮು-ಕಾಶ್ಮೀರಕ್ಕೆ ಶೀಘ್ರದಲ್ಲೇ ಬಿಜೆಪಿ ಮುಖ್ಯಮಂತ್ರಿ ಚುನಾಯಿತರಾಗಲಿದ್ದಾರೆ. ಸದ್ಯದಲ್ಲೇ ಚುನಾವಣೆ ನಡೆಯಲಿದೆ ಎಂದು ಪಕ್ಷದ ಜಮ್ಮು-ಕಾಶ್ಮೀರ ಘಟಕದ ಅಧ್ಯಕ್ಷ ರವೀಂದರ್ ರೈನಾ ಹೇಳಿದ್ದಾರೆ.

15.ಡೆಹ್ರಾಡೂನ್‌: ಪ್ರಧಾನ ಮಂತ್ರಿ ನರೇಂದ್ರ ಮೋದಿ ಉತ್ತರಾಖಂಡದಲ್ಲಿ ಕೇದಾರನಾಥದಲ್ಲಿ ಶ್ರೀ ಆದಿಶಂಕರಾಚಾರ್ಯರ ಪ್ರತಿಮೆಯನ್ನು ಅನಾವರಣಗೊಳಿಸಿದ್ದಾರೆ. ಆ ಬಳಿಕ ಮಾತನಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ “ಕೇದಾರನಾಥ ಮತ್ತೆ ಬೆಳಗುತ್ತದೆ ಎಂದು ನನ್ನ ಒಳ ಧ್ವನಿ ಹೇಳುತ್ತಿದೆ,” ಎಂದು ಹೇಳಿದ್ದಾರೆ.

16.ವಾಷಿಂಗ್ಟನ್ : ದೇಶಾದ್ಯಂತ ದೀಪಾವಳಿ ಹಬ್ಬದ ಸಂಭ್ರಮ ಮನೆ ಮಾಡಿದ್ದು, ಅಮೆರಿಕದ ಅಧ್ಯಕ್ಷ ಜೋ ಬೈಡನ್ ಅವರು ಭಾರತೀಯರಿಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ.
ಜೋ ಬೈಡನ್ ಅವರು ತಮ್ಮ ಮನೆಯಲ್ಲಿ ದೀಪ ಹಚ್ಚುವ ಮೂಲಕ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ.

17. ಬೆಂಗಳೂರು :ನಟ ಕುಮಾರ್‌ ಗೋವಿಂದ್‌ ಅವರಿಗೆ ‘ಮೂಕನಾಯಕ’ ಚಿತ್ರದ ಅಭಿನಯಕ್ಕಾಗಿ ಅಮೆರಿಕದ ‘ಡಲ್ಲಾಸ್ ಆಕ್ಟಿಂಗ್ ಅಂತರಾಷ್ಟ್ರೀಯ ಚಿತ್ರೋತ್ಸವ’ದಲ್ಲಿ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. 

18. ಬೆಂಗಳೂರು: ಕೇಂದ್ರ ಸಚಿವ ರಾಜೀವ್​ ಚಂದ್ರಶೇಖರ್ ಅವರು ನಟ ಪುನೀತ್ ರಾಜ್‌ಕುಮಾರ್ ಪತ್ನಿ ಅಶ್ವಿನಿ, ನಟ ಶಿವರಾಜ್‌ಕುಮಾರ್, ರಾಘವೇಂದ್ರ ರಾಜ್‌ಕುಮಾರ್ ಅವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಪುನೀತ್ ಹೆಸರಲ್ಲಿ ಏನಾದರೂ ಮಾಡುವುದಾದರೆ ನಮ್ಮ ಇಲಾಖೆಯ ಸಹಾಯ ಇರುತ್ತದೆ.ನಾವು ಸದಾ ಇರುತ್ತೇವೆ ಎಂದಿದ್ದಾರೆ.

19.ದುಬೈ: 2016ರಿಂದ ಇಲ್ಲಿಯವರೆಗೆ ನಾನು ಬಹಳ ಅನುಭವಗಳಿಂದ ಕಲಿತಿದ್ದೇನೆ. ನಿಮ್ಮ ತಂಡ ಟ್ರೋಫಿ ಗೆಲ್ಲದಿದ್ದರೆ, ನೀವು ಗಳಿಸುವ ರನ್ ಗಳು, ಶತಕಗಳಿಗೆ ಯಾವುದೇ ಅರ್ಥವಿರುವುದಿಲ್ಲ ಎಂದು ರೋಹಿತ್ ಶರ್ಮಾ ಹೇಳಿದರು.

20.ದುಬೈ:ನವೆಂಬರ್ 5, 1988 ರಂದು ನವದೆಹಲಿಯಲ್ಲಿ ಜನಿಸಿದ ವಿರಾಟ್ ಕೊಹ್ಲಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಕಠಿಣ ಪರಿಶ್ರಮ, ಕೆಚ್ಚೆದೆಯ ನಡೆ ಅವರನ್ನು ವಿಶ್ವದ ಅತ್ಯುತ್ತಮ ಬ್ಯಾಟರ್​ಗಳ ಸಾಲಿನಲ್ಲಿ ತಂದು ನಿಲ್ಲಿಸಿದೆ.ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್‌ ಕೊಹ್ಲಿ ಇಂದು 33ನೇ ವರ್ಷಕ್ಕೆ ಕಾಲಿರಿಸಿದ್ದಾರೆ.