Latest Post

ಉಪನ್ಯಾಸಕ ಅಶೋಕ ಕೋರೆಗೆ ಪಿಎಚ್‌.ಡಿ ಡಾಕ್ಟರೇಟ್ : ಎಬಿವಿಪಿ ಯಿಂದ ಸನ್ಮಾನ ಸಾಕು ನಾಯಿಗಳಿಗೆ ತಪ್ಪದೇ ರೇಬೀಸ್ ಲಸಿಕೆ ನೀಡಿ: ಸಚಿವ ಪ್ರಭು ಚವ್ಹಾಣ
Spread the love

 

ಔರಾದ
ಅಖೀಲ ಭಾರತಿಯ ವಿದ್ಯಾರ್ಥಿ ಪರಿಷತ್ ನೇತ್ರತ್ವದಲ್ಲಿ ಪಟ್ಟಣದ ವಿವಿಧ ಕಾಲೇಜ್ ಗಳ ವಿದ್ಯಾರ್ಥಿಗಳು ಸೇರಿ ಮಿನಿ ವಿಧಾನ ಸೌಧಕ್ಕೆ ತೆರಳಿ ಶೈಕ್ಷಣಿಕ ಸಮಸ್ಯೆಗಾದ ವಿದ್ಯಾರ್ಥಿಗಳಿಗೆ ಅನುಕೂಲ ಆಗುವಂತೆ ಎಲ್ಲಾ ಗ್ರಾಮಗಳಿಗೆ ಬಸ್ಸಿ ಸೇವೆ ಆರಂಭಿಸಬೇಕು.ನಗರದಲ್ಲಿರುವಂತ ದೂರದ ಕಾಲೇಜುಗಳಿಗೆ ವಿದ್ಯಾರ್ಥಿಗಳಿಗೆ ನಗರ ಸಾರಿಗೆ ವ್ಯವಸ್ಥೆ ಮಾಡಬೇಕೆಂದು ಅಭಾವಿಪ್ ಅಗ್ರಹಿಸುತ್ತದೆ.
ವಿದ್ಯಾರ್ಥಿಗಳಿಗೆ ಶಿಷ್ಯವೇತನವನ್ನು ತಕ್ಷಣ ವಿದ್ಯಾರ್ಥಿಗಳ ಖಾತೆಗೆ ಜಮೆಯಾಗಬೇಕು.
ಡಿಪ್ಲೊಮಾ ಇಂಜಿನಿಯರಿಂಗ್ ಪದವಿ ಹಾಗೂ ಸ್ನಾತಕೋತ್ತರ ತರಗತಿಗಳಲ್ಲಿ ಮತ್ತು ಪಿ ಎಚ್ ಡಿ ಮಾಡಿತ್ತಿರುವ ಪ ಜಾತಿ ಪ ಪಂಗಡ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಪೂರ್ಣ ಪ್ರಮಾಣದ ಶಿಷ್ಯವೇತನ ಪಡೆಯದೆ ಪರದಾಡುವಂತಾಗಿದೆ.ರಾಜ್ಯ ಸರಕಾರ ಈ ಎಲ್ಲಾ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದಲ್ಲಿ ವಿದ್ಯಾಸಿರಿ ಶಿಷ್ಯವೇತನ ಸೇರಿದಂತೆ ಎಲ್ಲಾ ವಿದ್ಯಾರ್ಥಿ ವೇತನವನ್ನು ತಕ್ಷಣಕ್ಕೆ ಬಿಡುಗಡೆ ಗೊಳಿಸಬೇಕೆಂದು ಮತ್ತು ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಲು ವಿದ್ಯಾರ್ಥಿ ವೇತನದ ಮೊತ್ತವನ್ನು ಹೆಚ್ಚಿಗೆ ಮಾಡಬೇಕೆಂದು ಅಖೀಲ ಭಾರತೀಯ ವಿದ್ಯಾರ್ಥಿ ಪರಿಷತ್ ಔರಾದ ಶಾಖೆ ಮಾನ್ಯ ತಹಶಿಲ್ದಾರರ ಮುಖಾಂತರ ಪತ್ರ ಸಲ್ಲಿಸಲಾಯಿತು.
ವಸತಿ ನಿಲಯಕ್ಕೆ ಸಂಭಂದಿಸಿದ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಿ.
ರಾಜ್ಯದ ಅನೇಕ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳು ಹಾಸ್ಟೆಲ್ ಗಳಿಗೆ ಅವಲಂಬಿತರಾಗಿದ್ದಾರೆ ಮೊದಲೆ ಶಾಲಾ ಕಾಲೇಜುಗಳು ಪ್ರಾರಂಭವಾಗಿದ್ದು ಆದರೆ ವಿದ್ಯಾರ್ಥಿಗಳ ವಸತಿ ನಿಲಯಗಳ ಆಯ್ಕೆ ಪ್ರಕ್ರಿಯೆ ಮುಗಿಯದೆ ವಿದ್ಯಾರ್ಥಿಗಳು ಪರದಸಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.ಕೂಡಲೇ ರಾಜ್ಯ ಸರಕಾರ ವಿದ್ಯಾರ್ಥಿ ಗಳ ಸಮಸ್ಯೆಗಳನ್ನು ಪರಿಗಣಿಸಿ ಸಂಭಂದ ಪಟ್ಟ ಇಲಾಖೆಯ ಅಧಿಕಾರಿಗಳಿಗೆ ಆದೇಶಿಸಬೇಕೆಂದು ಅಭಾವಿಪ್ ಔರಾದ ಶಾಖೆ ಅಗ್ರಹಪಡಿಸುತ್ತದೆ. ಈ ಸಂದರ್ಭದಲ್ಲಿ ತಾಲೂಕು ತಹಶಿಲ್ದಾರ ಮಲ್ಲಶೆಟ್ಟಿ ಚಿದ್ರೆ ಮಾತನಾಡಿ ನಿಮ್ಮ ಮನವಿಯನ್ನು ಸರಕಾರ ಕ್ಕೆ ಖಳುಹಿಸಿ ವಿದ್ಯಾರ್ಥಿಗಳಿಗೆ ನ್ಯಾಯದೊರಕಿಸುವ ಪ್ರಯತ್ನ ಮಾಡುತ್ತೆನ್ನೆ ಹಾಗೂ ಹಿಂಬರಹ ನಿಡುತ್ತೆನೆ ಎಂದರು.ಈ ಸಂದರ್ಭದಲ್ಲಿ ಎಬಿವಿಪಿ ನಗರ ಕಾರ್ಯದರ್ಶಿ ನವನಾಥ ಕೊಳಿ,ಹಾವಪ್ಪಾ ದ್ಯಾಡೆ,ಮಾರುತಿ ಸೂರ್ಯ ವಂಶಿ,ಅನೀಲ ಮೆತ್ರೆ,ಆಕಾಶ ಕದಂ,ಸ್ನೇಹ ರೆಡ್ಡಿ,ಸುಧಾರಾಣಿ,ನಿಕಿತಾ,ಶಿವಾನಿ ಅನೇಕ ಕಾಲೇಜುಗಳ ವಿದ್ಯಾರ್ಥಿ- ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.