Latest Post

ಉಪನ್ಯಾಸಕ ಅಶೋಕ ಕೋರೆಗೆ ಪಿಎಚ್‌.ಡಿ ಡಾಕ್ಟರೇಟ್ : ಎಬಿವಿಪಿ ಯಿಂದ ಸನ್ಮಾನ ಸಾಕು ನಾಯಿಗಳಿಗೆ ತಪ್ಪದೇ ರೇಬೀಸ್ ಲಸಿಕೆ ನೀಡಿ: ಸಚಿವ ಪ್ರಭು ಚವ್ಹಾಣ
Spread the love

1.ಬೆಂಗಳೂರು: ರಾಜ್ಯ ಸರ್ಕಾರದಿಂದ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳ ಭರ್ತಿಗೆ ಸಂಬಂಧ ಇದ್ದಂತ ರಿಕ್ತ ಸ್ಥಾನ ಆಧಾರಿತ ವರ್ಗೀಕರಣವನ್ನು ರದ್ದು ಪಡಿಸಿದ್ದು, ಇದರ ಬದಲಾಗಿ ಹುದ್ದೆ ಆಧಾರಿತ ( ಪೋಸ್ಟ್ ಬೇಸ್ಡ್ ) ವರ್ಗೀಕರಣಕ್ಕೆ ಅವಕಾಶ ನೀಡಲಾಗಿದೆ.

2.ಬೆಂಗಳೂರು(ಡಿ. 11): ಬಲವಂತ, ಆಮಿಷ ಅಥವಾ ವಂಚಿಸಿ ಮತಾಂತರ ಮಾಡುವವರಿಗೆ ಕನಿಷ್ಠ (Forced Religious Conversion) 1ರಿಂದ ಗರಿಷ್ಠ 10 ವರ್ಷಗಳ ಶಿಕ್ಷೆ ಮತ್ತು ದಂಡ, ಮತಾಂತರಗೊಳ್ಳುವ ವ್ಯಕ್ತಿ ಮೊದಲೇ ಸಕ್ಷಮ ಪ್ರಾಧಿಕಾರಕ್ಕೆ ಮಾಹಿತಿ ನೀಡುವುದು (Information) ಸೇರಿದಂತೆ ಹಲವು ಕಠಿಣ ಅಂಶಗಳಿರುವ ಮತಾಂತರ ನಿಷೇದ ಕಾಯ್ದೆ ಜಾರಿಗೆ ತರಲು ಸರ್ಕಾರ ಮುಂದಾಗಿದ್ದು, ಕರಡು ಮಸೂದೆ ಸಿದ್ಧಪಡಿಸಿದೆ

3.ವಿಧಾನ ಸಭಾ ಚುನಾವಣೆ ಸನಿಹವಾಗುತ್ತಿರುವ ಗೋವಾಗೆ ಭೇಟಿ ಕೊಟ್ಟಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಇಲ್ಲಿನ ಮೊರ್ಪ್ರಿಲಾ ಗ್ರಾಮದ ಬುಡಕಟ್ಟು ಜನಾಂಗದೊಂದಿಗೆ ಜಾನಪದ ನೃತ್ಯದಲ್ಲಿ ಹೆಜ್ಜೆ ಹಾಕಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ 43 ಸೆಕೆಂಡ್‌ಗಳ ಈ ಕ್ಲಿಪ್‌ನಲ್ಲಿ, ಕೆಂಪು ಸೀರೆಯುಟ್ಟ ಪ್ರಿಯಾಂಕಾ ಗಾಂಧಿ ಬುಡಕಟ್ಟು ಮಹಿಳೆಯರೊಂದಿಗೆ ನೃತ್ಯ ಮಾಡುತ್ತಿರುವುದನ್ನು ನೋಡಬಹುದಾಗಿದೆ.

4.ಬೆಂಗಳೂರು: ಒಮಿಕ್ರಾನ್ ಸೋಂಕಿತ ಅಂತರಾಷ್ಟ್ರೀಯ ಪ್ರಯಾಣಿಕರು ಖಾಸಗಿ ಆಸ್ಪತ್ರೆಗಳಲ್ಲಿಯೂ ಚಿಕಿತ್ಸೆ ಪಡೆಯಬಹುದು ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.

5.ನವದೆಹಲಿ, ಡಿ.11- ಅನಪೇಕ್ಷೀಯವಾದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಒಂದು ವರ್ಷದಿಂದ ದೆಹಲಿಯಲ್ಲಿ ಬೀಡು ಬಿಟ್ಟು ಅಹೋರಾತ್ರಿ ಪ್ರತಿಭಟನೆ ನಡೆಸಿ, ಅಂತಿಮವಾಗಿ ಜಯ ಸಾಧಿಸಿದ ರೈತರು ಇಂದಿನಿಂದ ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ.

6.ಮುಂಬೈ, ಡಿ.11- ಹೊಸ ರೂಪಾಂತರಿ ಓಮಿಕ್ರಾನ್ ವೈರಸ್ ಹರಡುವಿಕೆ ತಡೆಗಟ್ಟಲು ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುಂಬೈ ನಗರದಲ್ಲಿ ಎರಡು ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಇಂದು ಮತ್ತು ನಾಳೆ ಗುಂಪು ಸೇರುವುದು, ಪ್ರತಿಭಟನೆ ನಡೆಸುವುದು ಹಾಗೂ ರ್ಯಾಲಿಗಳನ್ನು ನಿಷೇಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

7.ಕೇರಳ, ಡಿ.11- ಕೋವಿಡ್-19 ಸೋಂಕು ಕೇರಳದಲ್ಲಿ ಕಡಿಮೆಯಾಗಿರುವುರಿಂದ ಶಬರಿಮಲೆ ದೇಗುಲಕ್ಕೆ ಹೋಗಲು ಭಕ್ತಾದಿಗಳಿಗೆ ಸರ್ಕಾರ ಅವಕಾಶ ನೀಡಿದೆ. ಕೇರಳದಲ್ಲಿ ಕೊರೊನಾ ಪ್ರಕರಣಗಳು ಇಳಿಕೆಯಾದ ಹಿನ್ನೆಲೆಯಲ್ಲಿ ಅಯ್ಯಪ್ಪಸ್ವಾಮಿ ಸನ್ನಿಧಿಗೆ ತೆರಳುವ ಮಾರ್ಗ ಮುಕ್ತವಾಗಿದೆ

8.ಗುಂಟೂರು(ಆಂಧ್ರಪ್ರದೇಶ): ಸ್ನಾನಕ್ಕೆಂದು ಗುರೂಜಿ ಜತೆ ಕೃಷ್ಣಾನದಿ ನೀರಿಗೆ ಇಳಿದ 7 ವಿದ್ಯಾರ್ಥಿಗಳ ಪೈಕಿ ಐವರು ಜಲಸಮಾಧಿಯಾಗಿದ್ದು, ಮಕ್ಕಳ ಜತೆಗೆ ಗುರೂಜಿಯೂ ದುರಂತ ಅಂತ್ಯಕಂಡ ಘಟನೆ ಗುಂಟೂರು ಜಿಲ್ಲೆಯ ಅಚ್ಚಂಪೇಟ ಮಂಡಲದ ಮಡಿಪಾಡು ಸಮೀಪ ಕೃಷ್ಣಾ ನದಿಯಲ್ಲಿ ಸಂಭವಿಸಿದೆ.

9.ನವದೆಹಲಿ:ವಿಸ್ತೃತ ಶ್ರೇಣಿಯ ಪಿನಾಕಾ (pinaka-ER) ಮಲ್ಟಿ ಬ್ಯಾರೆಲ್ ರಾಕೆಟ್ ಲಾಂಚರ್ ಸಿಸ್ಟಮ್ ಅನ್ನು ಶುಕ್ರವಾರ ಪೋಖ್ರಾನ್ ಶ್ರೇಣಿಯಲ್ಲಿ ಯಶಸ್ವಿಯಾಗಿ ಪರೀಕ್ಷಿಸಲಾಯಿತು.

10.ಮಂಗಳೂರು: ಒಂದೇ ಕುಟುಂಬದ ನಾಲ್ವರ ಸಾವು ಪ್ರಕರಣದಲ್ಲಿ ನೂರ್ ಜಹಾನ್ ಎಂಬ ಮಹಿಳೆ ಮತಾಂತರ ಮಾಡಲು ಯತ್ನಿಸಿದ್ದು ದೃಢವಾಗಿದ್ದು ಆಕೆಯನ್ನು ಬಂಧಿಸಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಶನಿವಾರ ತಿಳಿಸಿದ್ದಾರೆ.

11.ಬೆಂಗಳೂರು: ಕಾಂಗ್ರೆಸ್ ಒಂದು ವಿರೋಧ ಪಕ್ಷ. ಹಾಗಾಗಿ ಎಲ್ಲದಕ್ಕೂ ವಿರೋಧ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮತಾಂತರ ನಿಷೇಧ ಮಸೂದೆ ಮಂಡನೆಗೆ ಕಾಂಗ್ರೆಸ್ ವಿರೋಧ ವಿಚಾರಕ್ಕೆ ತಿರುಗೇಟು ನೀಡಿದರು.

12.ಮುಂಬೈ:ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಡ್ರಗ್ಸ್ ಪ್ರಕರಣದಲ್ಲಿ ಜಾಮೀನು ಪಡೆದಾಗ ವಿಧಿಸಲಾದ ಷರತ್ತುಗಳನ್ನು ಮಾರ್ಪಾಡು ಮಾಡುವಂತೆ ಕೋರಿ ಶುಕ್ರವಾರ ಬಾಂಬೆ ಹೈಕೋರ್ಟ್‌ಗೆ ಮೊರೆ ಹೋಗಿದ್ದಾರೆ.

13.ಯಾದಗಿರಿ: ರಾಜ್ಯದಲ್ಲಿ ಮಹಾಮಾರಿ ಓಮೈಕ್ರಾನ್ (Omicron) ಪ್ರಕರಣಗಳು ಕಾಣಿಸಿಕೊಂಡ ನಂತರ ಜನರು ಭಯಗೊಂಡಿದ್ದು, ಯಾದಗಿರಿ ಜಿಲ್ಲೆಯ ಜನರು ಕೋವಿಡ್ ಲಸಿಕೆ ಪಡೆಯಲು ಮುಗಿ ಬಿದ್ದಿದ್ದಾರೆ. ರೂಪಾಂತರಿ ಕೋವಿಡ್ ವೈರಸ್ ಗೆ (COVID Pandemic) ಜನರು ಆತಂಕಗೊಂಡಿದ್ದಾರೆ.

14.ಚಿಕ್ಕಮಗಳೂರು: ಜಿಲ್ಲೆಯ ಮತ್ತೊಂದು ಶಾಲೆಯಲ್ಲಿ ಕೊರೋನಾ ಸೋಂಕು ಸ್ಫೋಟವಾಗಿದೆ. ಶಿಕ್ಷಕ ಸೇರಿ 11 ಜನರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಒಂದು ವಾರ ಕಾಲ ಶಾಲೆ ಸೀಲ್ ಡೌನ್ ಮಾಡಿ ಜಿಲ್ಲಾಧಿಕಾರಿ ಕೆ.ಎನ್. ರಮೇಶ್ ಆದೇಶ ಹೊರಡಿಸಿದ್ದಾರೆ.

15.ನವದೆಹಲಿ: ದೇಶದಾದ್ಯಂತ 24 ಗಂಟೆ ಅವಧಿಯಲ್ಲಿ 7,992 ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 393 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.

16.ದಾವಣಗೆರೆ,ಡಿ.11- ಸಿಎಂ ಸ್ಥಾನದ ಮೇಲೆ ಶಾಮನೂರು ಶಿವಶಂಕರಪ್ಪ ಕಣ್ಣಿಟ್ಟದ್ದಾರೆ. ಕಾಂಗ್ರೆಸ್‍ನಲ್ಲಿ ಡಿಕೆಶಿ, ಸಿದ್ದರಾಮಯ್ಯ ಬಳಿಕ ಸಿಎಂ ರೇಸ್‍ನಲ್ಲಿ ನಾನು ಇದ್ದೇನೆ ಎಂದು ಶಾಮನೂರು ಶಿವಶಂಕರಪ್ಪ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ.

17.ಬೆಳಗಾವಿ: ಡಿಸೆಂಬರ್ 13ರಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಈ ಬಾರಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಭರದ ಸಿದ್ಧತೆ ನಡೆದಿದ್ದು, ಭದ್ರತೆಗಾಗಿ 4 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.

18.ನವದೆಹಲಿ: 2019ರ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿ ಆಡುವ ಭಾರತ ತಂಡದ ಆಯ್ಕೆ ವಿಚಾರದಲ್ಲಿ ಆಗಿನ ನಾಯಕ ವಿರಾಟ್ ಕೊಹ್ಲಿ ನೀಡಿದ್ದ ಸಲಹೆಯನ್ನು ಆಯ್ಕೆ ಸಮಿತಿ ಪರಿಗಣಿಸಿರಲಿಲ್ಲ ಎಂದು ಮಾಜಿ ಕೋಚ್ ರವಿಶಾಸ್ತ್ರಿ ದೂರಿದ್ದಾರೆ.

19.ಬೆಂಗಳೂರಿಗೆ: ‘ಶೀಘ್ರವೇ ಬೆಂಗಳೂರಿಗೆ ಬರುತ್ತೇನೆ. ಸುದ್ದಿಗೋಷ್ಠಿ ನಡೆಸಿ, ಮುಂದಿನ ವಾರ ಸಂಪೂರ್ಣ ಮಾಹಿತಿ ನೀಡುತ್ತೇನೆ’ ಎಂದು ಅರ್ಜುನ್​ ಸರ್ಜಾ ಹೇಳಿದ್ದಾರೆ. ಮೀಟೂ ಪ್ರಕರಣದಲ್ಲಿ ಅವರಿಗೆ ರಿಲೀಫ್​ ಸಿಕ್ಕಿದೆ.

20.ಬೆಂಗಳೂರು(ಡಿ.11): ಪ್ಯಾಟ್ ಕಮಿನ್ಸ್‌ (Pat Cummins) ನೇತೃತ್ವದ ಆಸ್ಟ್ರೇಲಿಯಾ ಕ್ರಿಕೆಟ್ ತಂಡವು (Australia Cricket Team) ಆಯಷಸ್‌ ಟೆಸ್ಟ್‌ ಸರಣಿಯ (Ashes Test Series) ಮೊದಲ ಪಂದ್ಯದಲ್ಲಿ 9 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ 5 ಪಂದ್ಯಗಳ ಸರಣಿಯಲ್ಲಿ ಶುಭಾರಂಭ ಮಾಡಿದೆ.