Latest Post

ಈ ದೇಶದ ಸಂಪತ್ತು ಶಿಕ್ಷಕರು :ಡಾ ಮನ್ನಥ ಡೊಳೆ ವಸತಿ ನಿಲಯಗಳಿಗೆ 25% ಪ್ರತಿಶತ ಪ್ರವೇಶವನ್ನು ಹೆಚ್ಚಿಸುವಂತೆ ಎಬಿವಿಪಿ ಔರಾದ ಶಾಖೆ ಮನವಿ
Spread the love

ಬೆಂಗಳೂರು: ಮಾಜಿ ಸಚಿವ ರಮೇಶ್​ ಜಾರಕಿಹೊಳಿ ತಮ್ಮ ಬೆಂಗಳೂರಿನ ನಿವಾಸವನ್ನು ಮಾರಾಟಕ್ಕಿಟ್ಟಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ.

ಮೈತ್ರಿ ಸರ್ಕಾರ ಪತನದ ನಂತರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​ ಅವರ ವಿರುದ್ಧ ಜಿದ್ದಿಗೆ ಬಿದ್ದಿದ್ದ ರಮೇಶ್​ ಜಾರಕಿಹೊಳಿ ಡಿ.ಕೆ ಶಿವಕುಮಾರ್ ಅವರ​ ಮನೆಯ ಹಿಂಭಾಗದಲ್ಲೇ ಉದ್ಯಮಿ ಟೈಕೂನ್ ರವಿ ಎಂಬುವರಿಂದ ಬಂಗಲೆ ಖರೀದಿಸಿದ್ದರು

ಹೊಸ ಮನೆಗೆ ಬಂದ ಮೇಲೆ ರಮೇಶ್​ ಜಾರಕಿಹೊಳಿ ಅವರಿಗೆ ಪದೇ ಪದೇ ರಾಜಕೀಯ, ಆರ್ಥಿಕ, ವೈಯುಕ್ತಿಕವಾಗಿ ಸಂಕಷ್ಟ ಎದುರಾಗುತ್ತಿದೆ. ಈ ಹಿನ್ನೆಯಲ್ಲಿ ಮನೆಯ ವಾಸ್ತು ಸರಿಯಿಲ್ಲ ಎನ್ನುವ ಜ್ಯೋತಿಷ್ಯರ ಸಲಹೆ ಮೇರೆಗೆ ಮನೆಯನ್ನು 40ಕೋಟಿಗೆ ಮಾರಾಟಕ್ಕಿಟ್ಟಿದ್ದಾರೆ ಎನ್ನಲಾಗುತ್ತಿದೆ.