Latest Post

ಸಾಕು ನಾಯಿಗಳಿಗೆ ತಪ್ಪದೇ ರೇಬೀಸ್ ಲಸಿಕೆ ನೀಡಿ: ಸಚಿವ ಪ್ರಭು ಚವ್ಹಾಣ ಕಂದಾಯ ಇಲಾಖೆ ಡಾಟಾ ಎಂಟ್ರಿ ಆಪರೇಟರ್‌ಗೆ ಸೇವಾ ಭದ್ರತೆ, ಸೂರ್ಯಕಾಂತ್ ನಾಗಮಾರಪಳ್ಳಿ ಮನವಿ
Spread the love

ನ್ಯಾಯಾಧೀಶರ ವಿರುದ್ಧ ಕ್ರಮಕ್ಕೆ ಒತ್ತಾಯ

ಬೀದರ್: ಗಣರಾಜ್ಯೋತ್ಸವ ಸಮಾರಂಭದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವ ರಾಯಚೂರು ಜಿಲ್ಲಾ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ ಒತ್ತಾಯಿಸಿದ್ದಾರೆ.

ಈ ಕುರಿತು ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಮಾಧುಸ್ವಾಮಿ ಹಾಗೂ ಹೈಕೋರ್ಟ್ ಮುಖ್ಯ ನಾಯಮೂರ್ತಿ ಅವರಿಗೆ ಪ್ರತ್ಯೇಕ ಪತ್ರ ಬರೆದಿದ್ದಾರೆ.

ರಾಯಚೂರಿನಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮಲ್ಲಿಕಾರ್ಜುನ ಗೌಡ ಅವರು ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನಿಸಿದ ಘಟನೆಯು ದೇಶವೇ ತಲೆ ತಗ್ಗಿಸುವಂತೆ ಮಾಡಿದೆ ಎಂದು ಹೇಳಿದ್ದಾರೆ.

ಈ ರೀತಿಯ ಮನಸ್ಥಿತಿ ಹೊಂದಿದವರು ಹೇಗೆ ನ್ಯಾಯ ಕೊಡಲು ಸಾಧ್ಯ ಎಂದು ಪ್ರಶ್ನಿಸಿರುವ ಅವರು, ಇಂಥವರು ಅಧಿಕಾರದಲ್ಲಿದ್ದರೆ ದೇಶಕ್ಕೆ ಕಂಟಕ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ನ್ಯಾಯಾಧೀಶರು ಐಪಿಸಿ ಸೆಕ್ಷನ್ 295 ನೇರವಾಗಿ ಉಲ್ಲಂಘಿಸಿದ್ದಾರೆ. ಅವರ ವಿರುದ್ಧ ಯುಎಪಿಎ ಕಾನೂನು ಅಡಿಯಲ್ಲಿ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ.