Latest Post

ಉಪನ್ಯಾಸಕ ಅಶೋಕ ಕೋರೆಗೆ ಪಿಎಚ್‌.ಡಿ ಡಾಕ್ಟರೇಟ್ : ಎಬಿವಿಪಿ ಯಿಂದ ಸನ್ಮಾನ ಸಾಕು ನಾಯಿಗಳಿಗೆ ತಪ್ಪದೇ ರೇಬೀಸ್ ಲಸಿಕೆ ನೀಡಿ: ಸಚಿವ ಪ್ರಭು ಚವ್ಹಾಣ
Spread the love

ಪಶುಸಂಗೋಪನೆ ಇಲಾಖೆ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವರಾದ *ಪ್ರಭು ಚವ್ಹಾಣ* ಅವರು
ತಾಲ್ಲೂಕಿನ ಲಕ್ಷ್ಮಿನಗರ ಗ್ರಾಮಕ್ಕೆ ಭೇಟಿ ನೀಡಿ ಬಿಜೆಪಿ ಪಕ್ಷದ ಕಾರ್ಯಕರ್ತರಾದ ಶ್ರೀ ದತ್ತಾತ್ರಿ ಪಾಂಡುರಂಗ ಧನಗಾರ್ ಅವರು ಇತ್ತಿಚಿಗೆ ರಸ್ತೆ ಅಪಘಾತದಲ್ಲಿ ತಮ್ಮ ಎರಡು ಕಾಲನ್ನು ಕಳೆದುಕೊಂಡಿದ್ದರು ಹಾಗೂ ಅದೇ ಗ್ರಾಮದ ರೈತರಾದ ಶ್ರೀ ತುಳಸಿರಾಮ ತುಕರಾಮ ಕೈಕಾಡೆ ಅವರು ತಮ್ಮ ತೋಟದಲ್ಲಿ ಬೆಳೆಯ ರಾಶಿ ಮಾಡುವಾಗ ರಾಶಿ ಯಂತ್ರದೊಳಗೆ ಸಿಲುಕಿ ಮೃತಪಟ್ಟಿದ್ದರ ಹಿನ್ನೆಲೆಯಲ್ಲಿ ಸಚಿವರು ಇಂದು ಅವರ ಮನೆಗಳಿಗೆ ತೆರಳಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿ, ಇಬ್ಬರಿಗೂ ವೈಯಕ್ತಿಕವಾಗಿ ಸಹಾಯಧನ ನೀಡಿದರು ಹಾಗೂ ಸರ್ಕಾರದ ವತಿಯಿಂದ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು