Latest Post

ಸಾಕು ನಾಯಿಗಳಿಗೆ ತಪ್ಪದೇ ರೇಬೀಸ್ ಲಸಿಕೆ ನೀಡಿ: ಸಚಿವ ಪ್ರಭು ಚವ್ಹಾಣ ಕಂದಾಯ ಇಲಾಖೆ ಡಾಟಾ ಎಂಟ್ರಿ ಆಪರೇಟರ್‌ಗೆ ಸೇವಾ ಭದ್ರತೆ, ಸೂರ್ಯಕಾಂತ್ ನಾಗಮಾರಪಳ್ಳಿ ಮನವಿ
Spread the love

ಈ ಗ್ರಾಮಕ್ಕೆ ಅಂಗನವಾಡಿಯ ಬೇಡಿಕೆ ಬಂದಿದ್ದು ಕೆಕೆಆರ್ಡಿಬಿ ಬಜೆಟ್ ನಲ್ಲಿ ಮಾಡಿಕೊಡುತ್ತೇನೆಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.

ಐದು ಅಂಗನವಾಡಿ ಕೇಂದ್ರಗಳಿದ್ದು ಕೆಲವು ಅಂಗನವಾಡಿಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ. ಆ ಬಗ್ಗೆ ಗ್ರಾಮ ಪಂಚಾಯತಿ ಅಧ್ಯಕ್ಷ ಗಮನಕ್ಕೆ ನಾವು ತಂದಿದ್ದೇವೆ. ಆದರೂ ಸಮಸ್ಯೆ ಪರಿಹಾರವಾಗಿಲ್ಲವೆಂದ ಗ್ರಾಮಸ್ಥರು ಶಾಸಕರ ಗಮನಕ್ಕೆ ತಂದರು.
ಈ ವೇಳೆ ಮಾತನಾಡಿದ ಶಾಸಕರು: ಕೂಡಲೇ ಸಮಸ್ಯೆಗಳಿಗೆ ಪರಿಹಾರ ಒದಗಿಸಿಕೊಡುವ ಕೆಲಸ ಮಾಡುತ್ತೇನೆಂದು ಭರವಸೆ ನೀಡಿದರು.

ಉಡಬಾಳವಾಡಿಯ ಶಾಲೆಯಲ್ಲಿ ಶಿಕ್ಷಕರ ಕೊರತೆಯಿದೆ. ಆ ಶಾಲೆಗೆ ಹೆಚ್ಚಿನ ಶಿಕ್ಷಕರನ್ನು ಕೊಡಬೇಕೆಂದು ಸ್ಥಳೀಯರು ಶಾಸಕರಿಗೆ ಮನವಿ ಮಾಡಿದರು. ನಾವು ಈಗಾಗಲೇ ಬಿಇಒ, ಡಿಡಿಪೈಗಳಿಗೆ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನವಾಗಿಲ್ಲವೆಂದು ಗ್ರಾಮಸ್ಥರು ಬೇಸರ ವ್ಯಕ್ತಪಡಿಸಿದರು.
ಕೂಡಲೇ ಶಿಕ್ಷಕರನ್ನು ಒದಗಿಸಿಕೊಡುವ ವ್ಯವಸ್ಥೆ ಮಾಡಬೇಕೆಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಸೂಚಿಸಿದರು. ಸಮಸ್ಯೆ ಪರಿಹರಿಸುವ ಭರವಸೆಯನ್ನು ಅಧಿಕಾರಿಗಳು ನೀಡಿದರು.

ಗ್ರಾಮದಲ್ಲಿ ವಿದ್ಯುತ್ ಪರಿವರ್ತಕ (ಟಿಸಿ) ಸಮಸ್ಯೆಯಿದೆ ಎಂದು ಗ್ರಾಮಸ್ಥರು ಶಾಸಕರ ಮುಂದೆ ಅಳಲು ತೋಡಿಕೊಂಡರು. ಕೂಡಲೇ ಸಮಸ್ಯೆಗೆ ಪರಿಹಾರ ಒದಗಿಸಿಕೊಡುವಂತೆ ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಜೆಸ್ಕಾಂ ಅಧಿಕಾರಿಗಳಿಗೆ ತಿಳಿಸಿದರು.

ರೈತರ ಜಮೀನುಗಳಿಗೆ ಹೋಗುವ ರಸ್ತೆಗಳು, ಗ್ರಾಮದಲ್ಲಿರುವ ಸಿಸಿ ರಸ್ತೆಗಳು, ಚರಂಡಿ ಸಮಸ್ಯೆಗಳ ಬಗ್ಗೆ ಗ್ರಾಮಸ್ಥರು ಅಧಿಕಾರಿಗಳ ಸಮ್ಮುಖದಲ್ಲಿ ಶಾಸಕರ ಗಮನಕ್ಕೆ ತಂದರು. ಹಂತಹಂತವಾಗಿ ಪರಿಹಾರ ಒದಗಿಸಿಕೊಡುವ ಭರವಸೆಯನ್ನು ಶಾಸಕರು ನೀಡಿದರು.