Latest Post

ಈ ದೇಶದ ಸಂಪತ್ತು ಶಿಕ್ಷಕರು :ಡಾ ಮನ್ನಥ ಡೊಳೆ ವಸತಿ ನಿಲಯಗಳಿಗೆ 25% ಪ್ರತಿಶತ ಪ್ರವೇಶವನ್ನು ಹೆಚ್ಚಿಸುವಂತೆ ಎಬಿವಿಪಿ ಔರಾದ ಶಾಖೆ ಮನವಿ
Spread the love

ಔರಾದ್ ತಾಲೂಕಿನ ಸಂತಪೂರ್ ಹೋಬಳಿಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅವ್ಯವಹಾರದಲ್ಲಿ ತೊಡಗಿದ್ದು, ಕ್ರಮ ಕೈಗೊಳ್ಳುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ಹಾಗೂ ಸದಸ್ಯ ಕಾರ್ಯದರ್ಶಿಗಳಿಗೆ ಒತ್ತಾಯಿಸಲಾಗಿದೆ.

ಕರ್ನಾಟಕ ಮಾದಿಗ ವೆಲಫೇರ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಕಮಲಹಾಸ್ ಪ್ರಭಣ್ಣಾ ಹಾಗೂ ಇತರರು ದೂರು ನೀಡಿದ್ದು, ಸಿಡಿಪಿಒ ಕಚೇರಿಯಲ್ಲಿ ಬಾಣಂತಿಯರಿಗೆ ಹಾಗೂ ಮಕ್ಕಳಿಗೆ ನೀಡುವ ಪೌಷ್ಟಿಕ ಆಹಾರ ವ್ಯಾಪಕ ಅವ್ಯವಹಾರ ನಡೆಸಲಾಗುತ್ತಿದೆ. ಅಂಗನವಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ನೇಮಕಾತಿಯಲ್ಲೂ ಭ್ರಷ್ಟಾಚಾರ ನಡೆಸಲಾಗಿದೆ ಎಂದು ದೂರಿದ್ದಾರೆ.

ಈಗಾಗಲೇ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ. ತಾಲೂಕಿನ ಮಾಣಿಕ ತಾಂಡಾದಲ್ಲಿ ಇಂಜನಿಯರಿAಗ್ ವಿದ್ಯಾರ್ಥಿನಿಗೆ ಅಂಗನವಾಡಿ ಕಾರ್ಯಕರ್ತೆ ಎಂದು ನೇಮಕ ಮಾಡಿ ಸಂಬಳ ನೀಡಲಾಗುತ್ತಿದೆ. ಅಗತ್ಯ ದಾಖಲೆ ಲಗತ್ತಿಸಲಾಗಿದ್ದು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.