Latest Post

ಉಪನ್ಯಾಸಕ ಅಶೋಕ ಕೋರೆಗೆ ಪಿಎಚ್‌.ಡಿ ಡಾಕ್ಟರೇಟ್ : ಎಬಿವಿಪಿ ಯಿಂದ ಸನ್ಮಾನ ಸಾಕು ನಾಯಿಗಳಿಗೆ ತಪ್ಪದೇ ರೇಬೀಸ್ ಲಸಿಕೆ ನೀಡಿ: ಸಚಿವ ಪ್ರಭು ಚವ್ಹಾಣ
Spread the love

ಕಲಬುರ್ಗಿ: ಕಲ್ಯಾಣ ಕರ್ನಾಟಕ ಪ್ರದೇಶದ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಒಂದು ತಿಂಗಳ ಒಳಗೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು 371ಜೆ ಕಲಂ ಅನುಷ್ಠಾನ ಕುರಿತ ಸಂಪುಟ ಉಪಸಮಿತಿ ಅಧ್ಯಕ್ಷ, ಸಾರಿಗೆ ಸಚಿವ ಬಿಶ್ರೀರಾಮುಲು ತಿಳಿಸಿದ್ದಾರೆ.

ಕಲ್ಬುರ್ಗಿಯಲ್ಲಿ ಸಮಿತಿ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಹುದ್ದೆಗಳು ಮತ್ತು ಬಡ್ತಿ ನೀಡಬೇಕಾದ ಹುದ್ದೆಗಳ ಬಗ್ಗೆ ಮಾಹಿತಿ ಇದೆ. ಯೋಜನಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ನೇಮಕಾತಿ ಕುರಿತಾಗಿ ವರದಿ ನೀಡಲಿದ್ದಾರೆ. ಈ ಹುದ್ದೆಗಳನ್ನು ಸ್ಥಳೀಯ ಮೀಸಲಾತಿ ನೀಡಿ 1 ತಿಂಗಳಲ್ಲಿ ಭರ್ತಿ ಮಾಡಲಾಗುವುದು ಎಂದು ಹೇಳಿದ್ದಾರೆ.