Latest Post

ಸಾಕು ನಾಯಿಗಳಿಗೆ ತಪ್ಪದೇ ರೇಬೀಸ್ ಲಸಿಕೆ ನೀಡಿ: ಸಚಿವ ಪ್ರಭು ಚವ್ಹಾಣ ಕಂದಾಯ ಇಲಾಖೆ ಡಾಟಾ ಎಂಟ್ರಿ ಆಪರೇಟರ್‌ಗೆ ಸೇವಾ ಭದ್ರತೆ, ಸೂರ್ಯಕಾಂತ್ ನಾಗಮಾರಪಳ್ಳಿ ಮನವಿ
Spread the love

ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರ ನೇತೃತ್ವದಲ್ಲಿ ಕಾರ್ಯಕ್ರಮ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಉಡಬಾಳ ಗ್ರಾಮದಲ್ಲಿ ನಡೆಯುತ್ತಿರುವ ಜನಸ್ಪಂದನಾ ಕಾರ್ಯಕ್ರಮ

ಜನಸ್ಪಂದನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅನೇಕ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುತ್ತಿರುವ ಸ್ಥಳೀಯರು

ಗ್ರಾಮ ಪಂಚಾಯತಿ ವ್ಯಾಪ್ತಿಯ ವಿವಿಧ ಗ್ರಾಮಗಳಿಂದ ಉಡಬಾಳದ ಸರ್ಕಾರಿ ಶಾಲೆ ಆವರಣಕ್ಕೆ ಆಗಮಿಸಿರುವ ಸಾರ್ವಜನಿಕರು

ತಾಲೂಕು ಮಟ್ಟದ, ಹೋಬಳಿ, ಗ್ರಾಮ ಮಟ್ಟದ ಅಧಿಕಾರಿಗಳು ಜನಸ್ಪಂದನಾ ಕಾರ್ಯಕ್ರಮದಲ್ಲಿ ಭಾಗಿ

ಬಾಕಿ ಮನೆಗಳು, ವೃದ್ಧಾಪ್ಯ, ವಿಧವಾ ವೇತನ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಹಂಚಿಕೊಂಡ ಸಾರ್ವಜನಿಕರು

ಕೂಡಲೇ ಸಮಸ್ಯೆಗಳು ಪರಿಹರಿಸಿ ಕೊಡುವಂತೆ ಸ್ಥಳದಲ್ಲಿರುವ ಅಧಿಕಾರಿಗಳಿಗೆ ಸೂಚಿಸುತ್ತಿರುವ ಶಾಸಕರು

ಚಿಟಗುಪ್ಪಾ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟ ಶಿಂಧೆ, ತಹಶೀಲ್ದಾರ್ (ತಾಲೂಕು ದಂಡಾಧಿಕಾರಿಗಳು) ರವೀಂದ್ರ ದಾಮಾ, ಉಡಬಾಳ ಗ್ರಾಮ ಪಂಚಾಯತಿ ಅಧ್ಯಕ್ಷ ನರಸರಡ್ಡಿ ಜಿ ಇದ್ದಾರಡ್ಡಿ, ಉಪಾಧ್ಯಕ್ಷೆ ಜಗದೇವಿ ಆರ್ ಮಾಳಗೆ, ಪಿಡಿಒ ಸಂದ್ಯಾರಾಣಿ, ಅರಣ್ಯ, ಜೆಸ್ಕಾಂ, ಕಂದಾಯ, ಪಶುಸಂಗೋಪನೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಜನಪ್ರತಿನಿಧಿಗಳು, ಸ್ಥಳೀಯರು ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗಿ