Latest Post

ಸಾಕು ನಾಯಿಗಳಿಗೆ ತಪ್ಪದೇ ರೇಬೀಸ್ ಲಸಿಕೆ ನೀಡಿ: ಸಚಿವ ಪ್ರಭು ಚವ್ಹಾಣ ಕಂದಾಯ ಇಲಾಖೆ ಡಾಟಾ ಎಂಟ್ರಿ ಆಪರೇಟರ್‌ಗೆ ಸೇವಾ ಭದ್ರತೆ, ಸೂರ್ಯಕಾಂತ್ ನಾಗಮಾರಪಳ್ಳಿ ಮನವಿ
Spread the love

ಖಾಶೆಂಪುರ್: ವಿಜ್ಞಾನ ಹೋಮ್ ಲ್ಯಾಬ್ ಕಿಟ್, ಆಕ್ಟಿ ಲರ್ನ್ ಪುಸ್ತಕ ವಿತರಣೆ ಮಾಡಿದ ಶಾಸಕ ಬಂಡೆಪ್ಪ ಖಾಶೆಂಪುರ್

ಬೀದರ್ (ಫೆ.04): ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಖಾಶೆಂಪುರ್ ಪಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಎಂಟು ಮತ್ತು ಒಂಬತ್ತನೇ ತರಗತಿಯ ಮಕ್ಕಳಿಗೆ ಸಮಗ್ರ ಶಿಕ್ಷಣ ಕರ್ನಾಟಕ, ಅಗಸ್ತ್ಯ ಅಂತರಾಷ್ಟ್ರೀಯ ಪ್ರತಿಷ್ಠಾನ, ಕೋರ್ ವಿಜ್ಞಾನ ಚಟುವಟಿಕಾ ಕೇಂದ್ರ ಬೀದರ್ ವತಿಯಿಂದ ನೀಡಲಾಗುವ ವಿಜ್ಞಾನ ಹೋಮ್ ಲ್ಯಾಬ್ ಕಿಟ್, ಆಕ್ಟಿ ಲರ್ನ್ ಪುಸ್ತಕ ವಿತರಣೆ ಕಾರ್ಯಕ್ರಮಕ್ಕೆ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಚಾಲನೆ ನೀಡಿದರು.
ಖಾಶೆಂಪುರ್ ಗ್ರಾಮದ ಶಾಲೆಗೆ ಶುಕ್ರವಾರ ಭೇಟಿ ನೀಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಕ್ಕಳಲ್ಲಿ ವಿಜ್ಞಾನಕ್ಕೆ ಸಂಬಂಧಿಸಿದಂತೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ಕಾರ್ಯ ಮಹತ್ಮದಾಗಿದೆ. ಇದೇ ರೀತಿಯ ಕಾರ್ಯಚಟುವಟಿಕೆಗಳು ಮುಂದಿನ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಆಗಬೇಕಾಗಿದೆ. ಮಕ್ಕಳು ಕೂಡ ಇಂತಹ ಯೋಜನೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕೆಂದರು.
ಇದೇ ವೇಳೆ ಶಾಲಾ ಆವರಣದಲ್ಲಿ ನಿರ್ಮಾಣಗೊಳ್ಳುತ್ತಿರುವ ಆಡಿಟೋರಿಯಂ, ಗ್ರಂಥಾಲಯ, ಜೀಮ್ ಕಟ್ಟಡ ಕಾಮಗಾರಿಗಳನ್ನು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ವೀಕ್ಷಿಸಿದರು. ಕಟ್ಟಡ ಕಾಮಗಾರಿಗಳನ್ನು ಗುಣಮಟ್ಟದಲ್ಲಿ ಮಾಡಬೇಕು. ಯಾವುದೇ ರೀತಿಯ ಲೋಪಗಳಾಗದಂತೆ ನೀಡಿರುವ ಸಮಯದಲ್ಲೇ ಕಟ್ಟಡ ಕಾಮಗಾರಿಯನ್ನು ಮುಗಿಸಬೇಕೆಂದು ಸಂಬಂಧಿಸಿದವರಿಗೆ ಸೂಚಿಸಿದರು, ಇದೇ ವೇಳೆ ಮಕ್ಕಳನ್ನು ಮಾತನಾಡಿಸಿದ ಅವರು, ಶಾಲೆಯ ಬಗ್ಗೆ ಮಕ್ಕಳಿಂದ ಮಾಹಿತಿ ಪಡೆದರು. ಓದಿನ ಕಡೆಗೆ ಹೆಚ್ಚಿನ ಗಮನಹರಿಸುವಂತೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಕೋರ್ ವಿಜ್ಞಾನ ಚಟುವಟಿಕಾ ಕೇಂದ್ರ ಬೀದರನ ಮುಖ್ಯಸ್ಥರಾದ ಬಾಬುರಾವ್ ಎನ್.ಎಸ್, ಪ್ರೌಢ ಶಾಲೆಯ ಮುಖ್ಯ ಗುರುಗಳಾದ ಗಂಗಾಧರ, ವಿಜ್ಞಾನ ಶಿಕ್ಷಕಿ ರಾಜೇಶ್ವರಿ, ಪ್ರಾಥಮಿಕ ಶಾಲೆಯ ವಿಜ್ಞಾನ ಶಿಕ್ಷಕರಾದ ಪರಮೇಶ್ವರ ಭೂಶೇಟ್ಟಿ, ವಿಜ್ಞಾನ ಕೇಂದ್ರದ ಸಿಬ್ಬಂದಿಗಳಾದ ಮಹೇಕುಮಾರ ವಿ, ವಿಶಾಲ, ಮುಖಂಡರಾದ ಸಂಜುರೆಡ್ಡಿ ನಿರ್ಣಾ, ಶರಣಪ್ಪ ಖಾಶೆಂಪುರ್, ರವೀಂದ್ರ ಗುಮಾಸ್ತಿ, ಬಜರಂಗ ತಮಗೊಂಡ, ಶಿವಕುಮಾರ ಬಾಲೆಭಾಯಿ, ಮಂಜುನಾಥ ಬಾಲೆಭಾಯಿ, ಶಿವಕುಮಾರ ದಂಡೆನೋರ್, ಮೋಹನ್ ಸಾಗರ ಸೇರಿದಂತೆ ಅನೇಕರಿದ್ದರು.