Latest Post

ಈ ದೇಶದ ಸಂಪತ್ತು ಶಿಕ್ಷಕರು :ಡಾ ಮನ್ನಥ ಡೊಳೆ ವಸತಿ ನಿಲಯಗಳಿಗೆ 25% ಪ್ರತಿಶತ ಪ್ರವೇಶವನ್ನು ಹೆಚ್ಚಿಸುವಂತೆ ಎಬಿವಿಪಿ ಔರಾದ ಶಾಖೆ ಮನವಿ
Spread the love

ಬೀದರ ಫೆಬ್ರುವರಿ 17 (ಕರ್ನಾಟಕ ವಾರ್ತೆ): ಔರಾದ(ಬಿ) ತಾಲ್ಲೂಕಿನ ಗ್ರಾಮ ಮತ್ತು ಪಟ್ಟಣ ಪ್ರದೇಶಗಳಲ್ಲಿ ಸ್ಮಶಾನ ಭೂಮಿ ಕಲ್ಪಿಸುವುದು ಸರ್ಕಾರದ ಮೂಲ ಉದ್ದೇಶವಾಗಿರುವುದರಿಂದ ಸಾರ್ವಜನಿಕರು ತಮ್ಮ ಗ್ರಾಮಗಳಲ್ಲಿ ಸ್ಮಶಾನದ ಅವಶ್ಯಕತೆ ಇದ್ದಲ್ಲಿ ತಹಸೀಲ್ದಾರರು ಅಥವಾ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಔರಾದ(ಬಿ) ತಹಸೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿಯಮಗಳು ಕಡ್ಡಾಯ: ಸರ್ಕಾರದ ಜಮೀನು ಲಭ್ಯವಿರುವ ಕಡೆ ಸ್ಮಶಾನ ಉದ್ದೇಕ್ಕಾಗಿ 2-00 ಎಕರೆ ವಿಸ್ತೀರ್ಣದ ಜಮೀನನ್ನು ಕಾಯ್ದಿರಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ಇವರಿಗೆ ಪ್ರತ್ಯಾಯೋಜಿಸಲಾಗಿರುತ್ತದೆ, ಕರ್ನಾಟಕ ಭೂ ಕಂದಾಯ ಕಾಯ್ದೆ 1964 ರ ಕಲಂ 71 ರಡಿ ಪ್ರದÀತ್ತವಾದ ಅಧಿಕಾರದನ್ವಯ ಜಿಲ್ಲಾಧಿಕಾರಿಗಳು ಸರ್ಕಾರಿ ಜಮೀನು ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗಿದೆ, ಗೋಮಾಳ ಜಮೀನು ನಿಗಧಿತ ಪ್ರಮಾಣಕ್ಕಿಂತ ಕಡಿಮೆ ಇದ್ದಾಗ್ಯೂ ಸ್ಮಶಾನಕ್ಕಾಗಿ ಮೀಸಲಿಡಲು ಕರ್ನಾಟಕ ಭೂ ಕಂದಾಯ ನಿಯಮಗಳು 1966 ರ ನಿಯಮ 97(4)(iii) ರಲ್ಲಿ ಜಿಲ್ಲಾಧಿಕಾರಿಯವರಿಗೆ ಅವಕಾಶ ಕಲ್ಪಿಸಲಾಗಿದೆ,

ಮತ್ತು ಸರ್ಕಾರಿ ಜಮೀನು “ಬ” ಖರಾಬು ಎಂದು ವರ್ಗೀಕೃತವಾಗಿದಲ್ಲಿ ಸ್ಮಶಾನದ ಉದ್ದೇಶವು ಸಾರ್ವಜನಿಕ ಉದ್ದೇಶವಾಗಿರುವುದರಿಂದ ಅಂತಹ ಜಮೀನುಗಳನ್ನು ಸಹ ಜಿಲ್ಲಾಧಿಕಾರಿಗಳ ಹಂತದಲ್ಲಿಯೇ ಕರ್ನಾಟಕ ಭೂ ಕಂದಾಯ ಕಾಯ್ದೆ 1964 ರ ಕಲಂ 71 ರನ್ವಯ ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗಿದೆ ಹಾಗೂ ಒತ್ತುವರಿಯಿಂದ ತೆರವುಗೊಳಿಸಿರುವ ಸರ್ಕಾರಿ ಜಮೀನುಗಳನ್ನು ಕರ್ನಾಟಕ ಭೂ ಕಂದಾಯ ಕಾಯ್ದೆ 1964 ರ ಕಲಂ 71 ರನ್ವಯ ಜಿಲ್ಲಾಧಿಕಾರಿಗಳು ಸ್ಮಶಾನದ ಉದ್ದೇಶಕ್ಕಾಗಿ ಕಾಯ್ದಿರಿಸಲು ಅವಕಾಶ ಕಲ್ಪಿಸಲಾಗಿದೆ ಮತ್ತು ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ಮಾಡುತ್ತಿರುವ ಸಾಗುವಳಿಯನ್ನು ಸಕ್ರಮೀಕರಣಕ್ಕಾಗಿ ಸಲ್ಲಿಸುವ ಅರ್ಜಿಗಳ ಪೈಕಿ ಅನರ್ಹ ಅರ್ಜಿಗಳು ಇದ್ದಲ್ಲಿ ಜಿಲ್ಲಾಧಿಕಾರಿಗಳ ಹಂತದಲ್ಲಿ ಅಂತಹ ಅನರ್ಹ ಅರ್ಜಿಗಳನ್ನು ವಜಾಗೊಳಿಸಿ ಜಮೀನನ್ನು ಸರ್ಕಾರದ ವಶಕ್ಕೆ ಪಡೆದು ಸ್ಮಶಾನಕ್ಕಾಗಿ ಕಾಯ್ದಿರಿಸುವುದು. ಹಾಗೂ ಈ ಮೇಲ್ಕಂಡ ಎಲ್ಲಾ ಕ್ರಮಗಳನ್ನು ಕೈಗೊಂಡ ನಂತರವೂ ಸಹ ಯಾವುದೇ ಗ್ರಾಮದಲ್ಲಿ ಸ್ಮಶಾನಕ್ಕಾಗಿ ಕಾಯ್ದಿರಿಸಲು ಸರ್ಕಾರಿ ಜಮೀನು ಲಭ್ಯವಿಲ್ಲದಿದ್ದಲ್ಲಿ ಅಂತಹ ಗ್ರಾಮಗಳಲ್ಲಿ ಮಾರ್ಗಸೂಚಿ ಮೌಲ್ಯದ ಮೂರು ಪಟ್ಟು ದರದಲ್ಲಿ ಖಾಸಗಿಯವರಿಂದ ಜಮೀನುಗಳನ್ನು ಖರೀದಿಸಲು ಅವಕಾಶ ಕಲ್ಪಿಸಲಾಗಿದೆ.


ಸರ್ಕಾರಿ ಜಮೀನು ಒತ್ತುವರಿ: ಸರ್ಕಾರಿ ಜಮೀನು ಕೆರೆ, ಕಟ್ಟೆ, ಕುಂಟೆ, ಹಳ್ಳ, ಸರೋವರ ಮತ್ತು ಇನ್ನಿತರ ಜಲಕಾಯ/ಜಲಮೂಲಗಳೆಂದು ವರ್ಗಿಕೃತವಾದ ಜಮೀನುಗಳನ್ನು ಗ್ರಾಮ ನಕಾಶೆಯಲ್ಲಿ ರಸ್ತೆ, ಬೀದಿ, ಬಂಡಿದಾರಿ, ಓಣಿ ಅಥವಾ ಹಾದಿ ಎಂದು ನಮೂದಾಗಿರುವ ಇತರೆ ಎಲ್ಲಾ ಸರ್ಕಾರಿ ಜಮೀನುಗಳು ಒತ್ತುವರಿಯಾಗಿದ್ದಲ್ಲಿ ಸಾರ್ವಜನಿಕರು ತಹಸೀಲ್ದಾರ್ ಅಥವಾ ಜಿಲ್ಲಾಧಿಕಾರಿಯವರಿಗೆ ದೂರು ನೀಡಲು ಅವರು ತಿಳಿಸಿರುತ್ತಾರೆ.