Latest Post

ಈ ದೇಶದ ಸಂಪತ್ತು ಶಿಕ್ಷಕರು :ಡಾ ಮನ್ನಥ ಡೊಳೆ ವಸತಿ ನಿಲಯಗಳಿಗೆ 25% ಪ್ರತಿಶತ ಪ್ರವೇಶವನ್ನು ಹೆಚ್ಚಿಸುವಂತೆ ಎಬಿವಿಪಿ ಔರಾದ ಶಾಖೆ ಮನವಿ
Spread the love

ಜೆಸ್ಕಾಂ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ವಾಸ್ತವ್ಯ ಹೂಡಲು ಆಗ್ರಹ

ಔರಾದ : ಔರಾದ್ ತಾಲೂಕಿನ ಜೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಿಯಂತರ ರವಿ ಕಾರಬಾರಿ ಕೇಂದ್ರ ಸ್ಥಾನದಲ್ಲಿ ವಾಸಿಸಿ ಗ್ರಾಹಕರ ಸಮಸ್ಯೆಗಳಿಗೆ ಪರಿಹಾರ ನೀಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ಪಟ್ಟಣ ಪಂಚಾಯ್ತಿ ಸದಸ್ಯ ದಯಾನಂದ ಘೂಳೆ ಆಗ್ರಹಿಸಿದ್ದಾರೆ.

ಔರಾದ ಜೆಸ್ಕಾಂ ಎಇಇ ಕೇಂದ್ರ ಸ್ಥಾನದಲ್ಲಿ ವಾಸ ಮಾಡದೇ ಬೀದರ್‌ನಲ್ಲಿ ಮನೆ ಮಾಡಿಕೊಂಡಿದ್ದಾರೆ.
ಎಇಇ ಬೀದರ್‌ನಿಂದ ಔರಾದ್‌ಗೆ ಬಂದು ಹೊಗುವುದರಿಂದ ಗ್ರಾಹಕರಿಗೆ ಸಮಯಕ್ಕೆ ಸೇವೆ ಸಿಗದೆ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ರೈತರು ಸೇರಿದಂತೆ ಜೆಸ್ಕಾಂ ಗ್ರಾಹಕರು ಕೆಲಸ ಕಾರ್ಯ ಬಿಟ್ಟು ಕಚೇರಿಯಲ್ಲಿ ಕಾಲ ಕಳೆಯುವಂತಾಗಿದೆ.

ಪಟ್ಟಣದ ಜೆಸ್ಕಾಂ ಕಚೇರಿ ಆವರಣದಲ್ಲಿ ಅಧಿಕಾರಿ ಹಾಗೂ ಸಿಬ್ಬಂದಿಗಳಿಗಾಗಿ ವಸತಿ ಗೃಹಗಳಿದ್ದರು ಸಹ ಎಇಇ ವಸತಿ ಗೃಹ ಬಳಕೆ ಮಾಡದೇ ಬೀದರ್‌ನಲ್ಲಿ ಮನೆ ಮಾಡಿಕೊಂಡಿದ್ದಾರೆ ಇದರಿಂದ ಸಾರ್ವಜನಿಕರು ಸಾಕಷ್ಟು ರೀತಿಯ ತೊಂದರೆ ಅನುಭವಿಸುವಂತಾಗಿದೆ.
ಕೂಡಲೆ ಪಶು ಸಂಗೋಪನ ಸಚಿವ ಪ್ರಭು ಚವ್ಹಾಣರ ಆದೇಶದನ್ವಯ ಜೆಸ್ಕಾಂ ಎಇಇ ಕೇಂದ್ರ ಸ್ಥಾನದಲ್ಲಿ ವಾಸಿಸುವ ನಿಟ್ಟಿನಲ್ಲಿ ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ನಿರ್ದೇಶನ ನೀಡಿದಲ್ಲಿ ಸಾರ್ವಜನಿಕರಿಗೆ ಅನೂಕುಲವಾಗುವ ಜೊತೆಗೆ ಸಾರ್ವಜನಿಕರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ ವಾಗುತ್ತದೆ.

ನೂತನವಾಗಿ ಬೀದರ್ ಜಿಲ್ಲಾ ಉಸ್ತುವಾರಿ ಸಚಿವರಾಗಿ ಆಗಮಿಸಿದ ಶಂಕರ ಪಾಟೀಲ ಮನೆನಕೊಪ್ಪ ಸಹ ಜೆಸ್ಕಾಂ ಎಇಇ ಕೇಂದ್ರ ಸ್ಥಾನದಲ್ಲಿ ವಾಸಿಸುವಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಬೇಕು ಎಂದು ಒತ್ತಾಯಿಸಿದರು. ಒಂದು ವೇಳೆ ಜೆಸ್ಕಾಂ ಎಇಇ ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದಲ್ಲಿ ವಿವಿಧ ಸಂಘಟನೆಗಳ ಮೂಲಕ ಪ್ರತಿಭಟನೆ ನಡೆಸಲಾಗುವುದು ಪಟ್ಟಣ ಪಂಚಾಯ್ತಿ ಸದಸ್ಯ ದಯಾನಂದ ಘೂಳೆ ಆಗ್ರಹಿಸಿದ್ದಾರೆ.