Latest Post

ಉಪನ್ಯಾಸಕ ಅಶೋಕ ಕೋರೆಗೆ ಪಿಎಚ್‌.ಡಿ ಡಾಕ್ಟರೇಟ್ : ಎಬಿವಿಪಿ ಯಿಂದ ಸನ್ಮಾನ ಸಾಕು ನಾಯಿಗಳಿಗೆ ತಪ್ಪದೇ ರೇಬೀಸ್ ಲಸಿಕೆ ನೀಡಿ: ಸಚಿವ ಪ್ರಭು ಚವ್ಹಾಣ
Spread the love

ಬೀದರ ದಕ್ಷಿಣ ಕ್ಷೇತ್ರದ ಶಾಸಕರದ ಸನ್ಮಾನ್ಯ ಶ್ರೀ ಬಂಡೆಪ್ಪ ಖಾಶೆಂಪುರ ಅವರಿಗೆ ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿಯ ನಾಮನಿರ್ದೇಶಿತ ಸದಸ್ಯರಾಗಿ ಆಯ್ಕೆಗೊಂಡಿದಕ್ಕೆ ಔರಾದ(ಬಾ) ಜೆಡಿಎಸ್ ಪಕ್ಷದ ವತಿಯಿಂದ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಹರ್ಷ ವ್ಯಕ್ತಪಡಿಸಿದರು.
ತಾಲೂಕು ಅಧ್ಯಕ್ಷರಾದ ತಾನಾಜಿ ತೋರಣೆಕರ ಅವರು ಮಾತನಾಡಿ ಶ್ರೀ ಬಂಡೆಪ್ಪ ಖಾಶೆಂಪುರ ಅವರಿಗೆ ಅಭಿನಂದನೆ ಸಲ್ಲಿಸಿ, ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ ಪಕ್ಷ ವರಿಷ್ಠರ ಜೊತೆ ಎಲ್ಲ ಮುಖಂಡರು ಕೈ ಜೋಡಿಸಬೇಕಾಗಿ, ಗಡಿಭಾಗದ ಔರಾದ(ಬಾ) ತಾಲ್ಲೂಕಿಗೆ ಹೆಚ್ಚಿನ ಅನುದಾನ ನೀಡಿ ಸಮಗ್ರ ಅಭಿವೃದ್ಧಿಗೆ ಕಂಕಣ ಬದ್ಧರಾಗಿ ಗಡಿಭಾಗದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ನೀಡಲು ಸಹಕರಿಸಬೇಕಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಶ್ರೀ ರಮೇಶ ಶೇಳಕೆ, ಹಿರಿಯ ಮುಖಂಡರಾದ ಮುನಿರ ಖಾನ, ಜಗದೀಶ್ ಬನ್ನಾರೆ, ಕಲ್ಲಪ್ಪ ಧಬಾಲೆ, ಸಂದೀಪ ಕೌಡಗಾವೆ, ರತ್ನಾಕರ ಮೊರೆ, ಸಂಜು ಜಾಧವ, ಮುಸ್ತಫಾ, ಜ್ಞಾನದೇವ ಇಂಗಳೆ, ಹಾಗೂ ಅನೇಕ ಮುಖಂಡರು ಉಪಸ್ಥಿತರಿದ್ದರು.