Latest Post

ಈ ದೇಶದ ಸಂಪತ್ತು ಶಿಕ್ಷಕರು :ಡಾ ಮನ್ನಥ ಡೊಳೆ ವಸತಿ ನಿಲಯಗಳಿಗೆ 25% ಪ್ರತಿಶತ ಪ್ರವೇಶವನ್ನು ಹೆಚ್ಚಿಸುವಂತೆ ಎಬಿವಿಪಿ ಔರಾದ ಶಾಖೆ ಮನವಿ
Spread the love

ಬೀದರ್‌: ಹಿಜಾಬ್- ಕೇಸರಿ ವಿವಾದದ ಹಿನ್ನೆಲೆಯಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ನಗರ ಪಟ್ಟಣಗಳಲ್ಲಿ ಭಾನುವಾರ ಪೊಲೀಸರು ಪಥ ಸಂಚಲ ನಡೆಸಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ಕಿಶೋರಬಾಬು ನೇತೃತ್ವದಲ್ಲಿ ಅಂಬೇಡ್ಕರ್ ವೃತ್ತದಿಂದ ಆರಂಭವಾದ ಪಥ ಸಂಚಲನವು ಶಹಾಗಂಜ್, ಗವಾನ್‌ ಚೌಕ್, ಚೌಬಾರಾ, ನಯಾಕಮಾನ್, ಬಸವೇಶ್ವರ ವೃತ್ತ, ಭಗತ್‌ಸಿಂಗ್‌ ವೃತ್ತ, ಶಿವಾಜಿ ವೃತ್ತ ಸಮೀಪದ ಅತಿಥಿಗೃಹದ ಬಳಿ ಬಂದು ಮುಕ್ತಾಯಗೊಳಿಸಿದರು.

ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಗೋಪಾಲ ಬ್ಯಾಕೋಡ್, ಬೀದರ್ ಡಿವೈಎಸ್‌ಪಿ ಸತೀಶ್‌ ಮುಂಚೂಣಿಯಲ್ಲಿ ಇದ್ದರು. ಜಿಲ್ಲಾ ಸಶಸ್ತ್ರಪಡೆ, ಕೆಎಸ್‌ಆರ್‌ಪಿ, ಸಿವಿಲ್‌ ಹಾಗೂ ಮಹಿಳಾ ಪೊಲೀಸ್‌ ಸಿಬ್ಬಂದಿ ಪಥ ಸಂಚಲನದಲ್ಲಿ ಪಾಲ್ಗೊಂಡಿದ್ದರು.

ಹುಮನಾಬಾದ್‌ನಲ್ಲಿ ಡಿವೈಎಸ್‌ಪಿ ಸೋಮಲಿಂಗ ಕುಂಬಾರ ನೇತೃತ್ವದಲ್ಲಿ ಪೊಲೀಸರು ಪಥ ಸಂಚಲನ ನಡೆಸಿದರು. ಬಸವಕಲ್ಯಾಣ, ಹುಲಸೂರು, ಭಾಲ್ಕಿ ಹಾಗೂ ಔರಾದ್‌ನಲ್ಲೂ ಪೊಲೀಸರು ಪಥ ಸಂಚಲನ ನಡೆಸಿದರು.