Latest Post

ಈ ದೇಶದ ಸಂಪತ್ತು ಶಿಕ್ಷಕರು :ಡಾ ಮನ್ನಥ ಡೊಳೆ ವಸತಿ ನಿಲಯಗಳಿಗೆ 25% ಪ್ರತಿಶತ ಪ್ರವೇಶವನ್ನು ಹೆಚ್ಚಿಸುವಂತೆ ಎಬಿವಿಪಿ ಔರಾದ ಶಾಖೆ ಮನವಿ
Spread the love

ಬೀದರ್: ಕರ್ನಾಟಕ ದ್ರಾಕ್ಷಾರಸ ಮಂಡಳಿ ಮಾಜಿ ಅಧ್ಯಕ್ಷ ಬಕ್ಕಪ್ಪ ಕೋಟೆ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಬಕ್ಕಪ್ಪ ಕೋಟೆ ಅವರು ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ, ನಗರ ನೀರು ಸರಬರಾಜು ಮತ್ತು ಒಳಚರಂಡಿ ನಿಗಮದ ನಿರ್ದೇಶಕ ಹಾಗೂ ಕಾಂಗ್ರೆಸ್ ಪಕ್ಷದ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದರು

ಮೂರೂವರೆ ದಶಕದಿಂದ ಕಾಂಗ್ರೆಸ್ ಪಕ್ಷದ ಸಕ್ರೀಯ ಕಾರ್ಯಕರ್ತನಾಗಿ ಸೇವೆ ಸಲ್ಲಿಸಿದ್ದೇನೆ. ಸ್ಥಳೀಯ ಸಂಸ್ಥೆ, ವಿಧಾನಸಭೆ, ವಿಧಾನ ಪರಿಷತ್, ಲೋಕಸಭೆ ಸೇರಿದಂತೆ ವಿವಿಧ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವಿಗೆ ಶ್ರಮಿಸಿದ್ದೇನೆ. ಪಕ್ಷದ ಮುಖಂಡರೆದುರು ಅನೇಕ ಬಾರಿ ಲೋಕಸಭೆ ಅಥವಾ ವಿಧಾನಸಭೆ ಚುನಾವಣೆ ಟಿಕೆಟ್‍ಗೆ ಬೇಡಿಕೆ ಇಟ್ಟಿದ್ದೆ. ಆದರೆ, ಸ್ಪಂದನೆ ದೊರಕಿಲ್ಲ ಎಂದು ಜಿಲ್ಲೆಯ ಕಾಂಗ್ರೆಸ್ ಹಿರಿಯ ಮುಖಂಡರಲ್ಲೊಬ್ಬರಾಗಿದ್ದ ಬಕ್ಕಪ್ಪ ಕೋಟೆ ಹೇಳಿದ್ದಾರೆ.

ಚುನಾವಣೆ ಸ್ಪರ್ಧೆಗೆ ಅವಕಾಶ ಸಿಗದ ಹಾಗೂ ಈಚಿನ ದಿನಗಳಲ್ಲಿ ಪಕ್ಷದಲ್ಲಿ ನಡೆಯುತ್ತಿರುವ ವಿದ್ಯಮಾನಗಳಿಂದ ಬೇಸತ್ತು ಸ್ವ ಇಚ್ಛೆಯಿಂದ ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದೇನೆ. ಪಕ್ಷದಲ್ಲಿ ಈವರೆಗೆ ತಮಗೆ ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ಅರ್ಪಿಸುವೆ ಎಂದು ತಿಳಿಸಿದ್ದಾರೆ.