Latest Post

ಉಪನ್ಯಾಸಕ ಅಶೋಕ ಕೋರೆಗೆ ಪಿಎಚ್‌.ಡಿ ಡಾಕ್ಟರೇಟ್ : ಎಬಿವಿಪಿ ಯಿಂದ ಸನ್ಮಾನ ಸಾಕು ನಾಯಿಗಳಿಗೆ ತಪ್ಪದೇ ರೇಬೀಸ್ ಲಸಿಕೆ ನೀಡಿ: ಸಚಿವ ಪ್ರಭು ಚವ್ಹಾಣ
Spread the love

ಬೆಂಗಳೂರು : ಪಠ್ಯಪುಸ್ತಕ ಪರಿಷ್ಕರಣೆ ವಿವಾದ ವಿಚಾರ ತಾರಕಕ್ಕೇರಿದ್ದು, ಪಠ್ಯ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಕಾಂಗ್ರೆಸ್ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ

ವಿಧಾನಸೌಧದ ಮುಂಭಾಗ ಪಠ್ಯ ಪರಿಷ್ಕರಣೆ ವಿರೋಧಿಸಿ ಇಂದಿನ ಕಾಂಗ್ರೆಸ್ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.

ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಶಾಸಕರು, ಸಂಸದರು, ಎಂಎಲ್ ಸಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಮುಂಭಾಗದಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಲಾಗುತ್ತಿದೆ. ಹೊಸ ಪಠ್ಯ ಪುಸ್ತಕ ರದ್ದುಪಡಿಸಿ ಹಳೆಯ ಪಠ್ಯಪುಸ್ತಕ ಮುಂದುವರೆಸುವಂತೆ ಕಾಂಗ್ರೆಸ್ ಒತ್ತಾಯಿಸಿದೆ.