Latest Post

ಉಪನ್ಯಾಸಕ ಅಶೋಕ ಕೋರೆಗೆ ಪಿಎಚ್‌.ಡಿ ಡಾಕ್ಟರೇಟ್ : ಎಬಿವಿಪಿ ಯಿಂದ ಸನ್ಮಾನ ಸಾಕು ನಾಯಿಗಳಿಗೆ ತಪ್ಪದೇ ರೇಬೀಸ್ ಲಸಿಕೆ ನೀಡಿ: ಸಚಿವ ಪ್ರಭು ಚವ್ಹಾಣ
Spread the love

ಬೆಂಗಳೂರು : ಆಡಳಿತ ಸುಧಾರಣೆ ಸಲುವಾಗಿ ರಾಜ್ಯ ಸರ್ಕಾರ ಸಚಿವಾಲದಯದಲ್ಲಿರುವ ಸಾರ್ವಜನಿಕ ಉದ್ದಿಮೆ ಇಲಾಖೆಯನ್ನು ರದ್ದು ಮಾಡಿ ಆದೇಶ ಹೊರಡಿಸಿದೆ. ಇಲಾಖೆಗಳ ವಿಲೀನ, ಕಾಆರ್ಯ ನಿರ್ವಹಣೆಯ ಹಂಚಿಕೆ ಕುರಿತಂತೆ ಅಧ್ಯಯನ ಮಾಡಿ ವರದಿ ನೀಡಲು ರಚನೆಯಾಗಿರುವ ಕಂದಾಯ ಸಚಿವ ಆರ್.ಅಶೋಕ್ ಅಧ್ಯಕ್ಷತೆಯ ಸಂಪುಟ ಉಪಸಮಿತಿ ಮಾಡಿರುವ ಶಿಫಾರಸಿನಂತೆ ಇಲಾಖೆಯನ್ನು ರದ್ದು ಮಾಡಲಾಗಿದೆ.

ಈ ಕುರಿತಂತೆ ರಾಜ್ಯ ಸರ್ಕಾರ ನಡವಳಿ ಹೊರಡಿಸಿದ್ದು, ಸಚಿವ ಸಂಪುಟ ಉಪ ಸಮಿತಿಯ ನಡವಳಿಯ ಕಂಡಿಕೆ-11ರಲ್ಲಿ ಕರ್ನಾಟಕ ಸರ್ಕಾರ ಸಚಿವಾಲಯದ ಸಾರ್ವಜನಿಕ ಉದ್ದಿಮೆಗಳ ಇಲಾಖೆಯನ್ನು ರದ್ದು ಪಡಿಸಲು ಶಿಫಾರಸ್ಸು ಮಾಡಿರುತ್ತದೆ ಎಂದು ತಿಳಿಸಿದೆ.

ಈ ಹಿನ್ನಲೆಯಲ್ಲಿ ಕರ್ನಾಟಕ ಸಚಿವಾಲಯದ ಸಾರ್ವಜನಿಕ ಉದ್ದಿಮೆಗಳ ಇಲಾಖೆಯನ್ನು ರದ್ದುಗೊಳಿಸಿಲಾಗಿದೆ. ಸಾರ್ವಜನಿಕ ಉದ್ದಿಮೆಗಳ ಇಲಾಖೆಯಲ್ಲಿ ನಿರ್ವಹಿಸಲಾಗುತ್ತಿದ್ದ ವಿಷಯಗಳನ್ನು ಆರ್ಥಿಕ ಇಲಾಖೆಗೆ ವರ್ಗಾಯಿಸಿ, ಆದೇಶಿಸಿದೆ ಎಂದು ತಿಳಿಸಿದೆ.