Latest Post

ಉಪನ್ಯಾಸಕ ಅಶೋಕ ಕೋರೆಗೆ ಪಿಎಚ್‌.ಡಿ ಡಾಕ್ಟರೇಟ್ : ಎಬಿವಿಪಿ ಯಿಂದ ಸನ್ಮಾನ ಸಾಕು ನಾಯಿಗಳಿಗೆ ತಪ್ಪದೇ ರೇಬೀಸ್ ಲಸಿಕೆ ನೀಡಿ: ಸಚಿವ ಪ್ರಭು ಚವ್ಹಾಣ
Spread the love

ಔರಾದ: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳನ್ನು ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪಶು ಸಂಗೋಪನೆ ಸಚಿವರಾದ ಪ್ರಭು ಬಿ.ಚವ್ಹಾಣ ಅವರು ಜುಲೈ 6ರಂದು ಔರಾದ್‍ನಲ್ಲಿ ಸನ್ಮಾನಿಸುವರು.

ಪ್ರಭು ಎಂಟರ್‍ಪ್ರೈಜೆಸ್‍ನಿಂದ ನಡೆಯುವ ಈ ಕಾರ್ಯಕ್ರಮದಲ್ಲಿ ಔರಾದ ಹಾಗೂ ಕಮಲನಗರ ತಾಲ್ಲೂಕುಗಳಲ್ಲಿ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ 11 ಸಾವಿರ, ದ್ವೀತಿಯ 7 ಸಾವಿರ ಹಾಗೂ ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ 5 ಸಾವಿರ ನಗದು ಬಹುಮಾನ ನೀಡಿ ಸನ್ಮಾನಿಸಲಾಗುವುದು. ಹಾಗೆಯೇ ಶೇ.80ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಗುವುದು ಎಂದು ಹೇಳಿದ್ದಾರೆ.

ನಾನು ಗ್ರಾಮ ಸಂಚಾರ ಕೈಗೊಂಡಾಗ ಅನೇಕ ಶಾಲೆಗಳಿಗೆ ಭೇಟಿ ನಿಡಿದ್ದೇನೆ. ಔರಾದ ಹಾಗೂ ಕಮಲನಗರ ತಾಲ್ಲೂಕುಗಳು ಶೈಕ್ಷಣಿಕವಾಗಿ ಹಿಂದಿಗಿಂತಲೂ ಸಾಕಷ್ಟು ಸುಧಾರಿಸಿವೆ. ಇನ್ನಷ್ಟು ಪ್ರಗತಿ ಸಾಧಿಸುವ ನಿಟ್ಟಿನಲ್ಲಿ ಪ್ರಯತ್ನಿಸುತ್ತಿದ್ದೇನೆ ಎಂದಿದ್ದಾರೆ.

2009ರಿಂದ ಸಾಧಕ ವಿದ್ಯಾರ್ಥಿಗಳು ಮತ್ತು ಮಕ್ಕಳ ಉಜ್ವಲ ಭವಿಷ್ಯ ರೂಪಿಸುವ ಶಿಕ್ಷಕರನ್ನು ಪ್ರತಿ ವರ್ಷ ನಿರಂತರವಾಗಿ ಸನ್ಮಾನಿಸುತ್ತಾ ಬಂದಿದ್ದೇನೆ. ಶಿಕ್ಷಕರು ಮತ್ತು ಪಾಲಕರ ಸಭೆ ಕರೆದು ಫಲಿತಾಂಶ ಸುಧಾರಣೆಗೆ ಅಗತ್ಯ ಸಲಹೆ ಸೂಚನೆಗಳನ್ನು ಕೊಡುತ್ತಿರುವ ಕಾರಣದಿಂದ ಫಲಿತಾಂಶದಲ್ಲಿ ಸುಧಾರಣೆಯೂ ಕಾಣಿಸಿದೆ. ಕೋವಿಡ್‍ನಿಂದಾಗಿ ಕಳೆದೆರಡು ವರ್ಷಗಳಿಂದ ಕಾರ್ಯಕ್ರಮ ಆಯೋಜಿಸಿರಲಿಲ್ಲ. ಇದೀಗ ಪುನಃ ಅದ್ದೂರಿಯಾದ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದ್ದಾರೆ.

ಜನ್ಮದಿನ ಕೇವಲ ನೆಪಮಾತ್ರಕ್ಕೆ ಇರುತ್ತದೆ. ವಿದ್ಯಾರ್ಥಿಗಳ ಸಂತೋಷವೇ ನನ್ನ ಸಂತೋಷವಾಗಿದೆ. ಈ ಕಾರ್ಯಕ್ರಮದಲ್ಲಿ ಸಾಧಕ ವಿದ್ಯಾರ್ಥಿಗಳೊಂದಿಗೆ ಅವರ ಪಾಲಕರಿಗೂ ಮತ್ತು ಶೇ.100ರಷ್ಟು ಫಲಿತಾಂಶ ಪಡೆದ ಶಾಲೆಯ ಎಲ್ಲ ಸಿಬ್ಬಂದಿಗಳಿಗೆ ಸನ್ಮಾನಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಔರಾದ ವಿಧಾನಸಭಾ ಕ್ಷೇತ್ರ ಸರ್ವತೋಮುಖವಾಗಿ ಅಭಿವೃದ್ಧಿಯಾಗಬೇಕು ಎಂಬುದು ನನ್ನ ಗುರಿಯಾಗಿದ್ದು, ಇದರಲ್ಲಿ ಬಹುಮುಖ್ಯವಾಗಿರುವ ಶಿಕ್ಷಣ ಕ್ಷೇತ್ರದ ಏಳಿಗೆಗೆ ನನ್ನ ಸಹಕಾರ ಸದಾ ಇರುತ್ತದೆ. ಶಿಕ್ಷಕರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ಎಲ್ಲ ಶಾಲೆಗಳು ಶೇ.100ರಷ್ಟು ಫಲಿತಾಂಶ ದಾಖಲಿಸಬೇಕು. ಔರಾದ ಮತ್ತು ಕಮಲನಗರ ತಾಲ್ಲೂಕುಗಳಿಂದ ಹೆಚ್ಚು ವಿದ್ಯಾರ್ಥಿಗಳು ಅಗ್ರ ಶ್ರೇಣಿಯಲ್ಲಿ ಉತ್ತೀರ್ಣರಾಗಬೇಕು. ಈ ದಿಶೆಯಲ್ಲಿ ಶಿಕ್ಷಕರು ಇನ್ನೂ ಹೆಚ್ಚಿನ ಶ್ರಮ ವಹಿಸಬೇಕಿದೆ ಎಂದು ಸೂಚಿಸಿದ್ದಾರೆ.

Prabhu chavan

ಯುಪಿಎಸ್‍ಸಿ ಸಾಧಕರಿಗೆ ಸನ್ಮಾನ: ಬೀದರ ಜಿಲ್ಲೆಯಿಂದ ಹೆಚ್ಚು ವಿದ್ಯಾರ್ಥಿಗಳು ಕೇಂದ್ರ ಲೋಕಸೇವಾ ಆಯೋಗ ನಡೆಸುವ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವುದು ಹೆಚ್ಚು ಸಂತೋಷ ತಂದಿದೆ. ಇವರ ಪ್ರೇರಣೆ ಪಡೆದು ಮುಂದಿನ ದಿನಗಳಲ್ಲಿ ಜಿಲ್ಲೆಯ ಇನ್ನಷ್ಟು ವಿದ್ಯಾರ್ಥಿಗಳು ಐಎಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಬೇಕೆಂಬುದು ನನ್ನ ಆಕಾಂಕ್ಷೆಯಾಗಿದೆ. ಅದರಂತೆ ಯುಪಿಎಸ್‍ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಜಿಲ್ಲೆಯ ಸಾಧಕರನ್ನೂ ಸನ್ಮಾನಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.