Latest Post

ಸಾಕು ನಾಯಿಗಳಿಗೆ ತಪ್ಪದೇ ರೇಬೀಸ್ ಲಸಿಕೆ ನೀಡಿ: ಸಚಿವ ಪ್ರಭು ಚವ್ಹಾಣ ಕಂದಾಯ ಇಲಾಖೆ ಡಾಟಾ ಎಂಟ್ರಿ ಆಪರೇಟರ್‌ಗೆ ಸೇವಾ ಭದ್ರತೆ, ಸೂರ್ಯಕಾಂತ್ ನಾಗಮಾರಪಳ್ಳಿ ಮನವಿ
Spread the love

ಬಿಜೆಪಿ ಸರ್ಕಾರದ ಜನ ವಿರೋಧಿ ನೀತಿ ಮತ್ತು ರಾಷ್ಟ್ರೀಯ ಕಾಂಗ್ರೆಸ್  ನಾಯಕ ರಾಹುಲ್ ಗಾಂಧಿ  ಅವರನ್ನು  ವಿನಾಕಾರಣ ಇಡಿ ಮುಖಾಂತರ ಕಿರುಕುಳ ನೀಡುತ್ತಿರುವ ಕೇಂದ್ರ ಸರ್ಕಾರದ ನಡೆ ಖಂಡಿಸಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಶರಣಪ್ಪ ಪಾಟೀಲ್ ತಿಳಿಸಿದ್ದಾರೆ

ಔರಾದ ಬ್ಲಾಕ್ ಕಾಂಗ್ರೆಸ್ ಕಮಿಟಿ ವತಿಯಿಂದ ಜೂ.21 ರಂದು ಮುಂಜಾನೆ  11:00 ಗಂಟೆಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಅಧ್ಯಕ್ಷ ರಾಜಕುಮಾರ್ ಹಲಬುರ್ಗೆ, ಆನಂದ್ ಚೌಹಾಣ್. ಔರಾದ ತಾಲೂಕ ಉಸ್ತುವಾರಿಗಳಾದ ಶರಣಕುಮಾರ ಮೋದಿ ಹಾಗೂ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸಂಗ್ರಾಮ ಅವರು ಪ್ರತಿಭಟನೆಯ ನೇತೃತ್ವ ವಹಿಸಿಲಿದ್ದಾರೆ ,

ಔರಾದ ಬಸ್ ನಿಲ್ದಾಣ ಹತ್ತಿರ  ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ, ಈ ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್  ,ಎನ್ ಎಸ್  ಯು ಐ  ಹಾಗೂ ಎಲ್ಲಾ ಮುಂಚೂಣಿ ಘಟಕದ ಅಧ್ಯಕ್ಷರು ಮತ್ತು ಹಿರಿಯ ಮುಖಂಡರು ಕಾರ್ಯಕರ್ತರು ಹೆಚ್ಚಿನ  ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರತಿಭಟನೆ ನಡೆಸಲಿದ್ದಾರೆ ಎಂದು ಔರಾದ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಶರಣಪ್ಪ ಪಾಟೀಲ್ ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ