Latest Post

ಈ ದೇಶದ ಸಂಪತ್ತು ಶಿಕ್ಷಕರು :ಡಾ ಮನ್ನಥ ಡೊಳೆ ವಸತಿ ನಿಲಯಗಳಿಗೆ 25% ಪ್ರತಿಶತ ಪ್ರವೇಶವನ್ನು ಹೆಚ್ಚಿಸುವಂತೆ ಎಬಿವಿಪಿ ಔರಾದ ಶಾಖೆ ಮನವಿ
Spread the love

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿಡಿಪಿಓ‌ ಕಚೇರಿ ಮೇಲೂ ದಾಳಿ

ಬೀದರ್: ಗಡಿ ಜಿಲ್ಲೆ ಬೀದರ್‌ನಲ್ಲಿ ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಎಸಿಬಿ ದಾಳಿ ಮಾಡಿ ಶಾಕ್ ನೀಡಿದ್ದು, ಜಿಲ್ಲೆಯಲ್ಲಿ ಒಟ್ಟು ನಾಲ್ಕು ಕಡೆ ದಾಳಿ ಮಾಡಿ ಎಸಿಬಿ ಪೊಲೀಸರು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ಬೀದರ್‌ನ ಗುಮ್ಮೆ ಕಾಲೋನಿಯಲ್ಲಿರುವ ನಿವಾಸ,ಪಶು ವಿವಿಯ ಕಚೇರಿ, ಭಾಲ್ಕಿ ತಾಲೂಕಿನ ಹಾಲಹಳ್ಳಿಯ ನಿವಾಸ ಹಾಗೂ ಕಲಬುರಗಿಯ ಮಹಾಗಾಂವ್‌ನ ನಿವಾಸದ ಮೇಲೂ ಎಸಿಬಿ ಪೊಲೀಸರು ದಾಳಿ ಮಾಡಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಶುಕ್ರವಾರ ಬೆಳ್ಳಂಬೆಳಗ್ಗೆ ಎಸಿಬಿ ಪೊಲೀಸರು ಏಕಕಾಲಕ್ಕೆ ದಾಳಿ ಮಾಡಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ‌ ಎಂದು ತಿಳಿದು ಬಂದಿದೆ.

ಜೊತೆಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿಡಿಪಿಓ‌ ಕಚೇರಿ ಹಾಗೂ ಕಲಬುರಗಿಯ ನಿವಾಸದ ಮೇಲೂ ಎಸಿಬಿ ಪೊಲೀಸರು ದಾಳಿ ಮಾಡಿದ್ದಾರೆ. ಬೀದರ್‌ನ ಗುಂಪಾ ಬಳಿ ಇರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಚೇರಿ ಮೇಲೆ ದಾಳಿ ಮಾಡಿದ ಎಸಿಬಿ ಪೊಲೀಸರು ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ಎಸಿಬಿ ಎಸ್ಪಿ ಅಮರನಾಥ್ ರೆಡ್ಡಿ ಮಾರ್ಗದರ್ಶನದಲ್ಲಿ ಬೀದರ್ ಎಸಿಬಿ ಪೊಲೀಸ್ ಅಧಿಕಾರಿ ಹಣಮಂತರಾಯ, ಶ್ರೀಕಾಂತ್ ಸೇರಿದಂತೆ ಹಲವು ಅಧಿಕಾರಿಗಳ ತಂಡದಿಂದ ದಾಳಿ ನಡೆಸಿ ತನಿಖೆ ಮಾಡಲಾಗಿದೆ.