Latest Post

ಈ ದೇಶದ ಸಂಪತ್ತು ಶಿಕ್ಷಕರು :ಡಾ ಮನ್ನಥ ಡೊಳೆ ವಸತಿ ನಿಲಯಗಳಿಗೆ 25% ಪ್ರತಿಶತ ಪ್ರವೇಶವನ್ನು ಹೆಚ್ಚಿಸುವಂತೆ ಎಬಿವಿಪಿ ಔರಾದ ಶಾಖೆ ಮನವಿ
Spread the love

’ರೈತರನ್ನು ಬಲಿ ಕೊಟ್ಟಾಯಿತು, ಈಗ ಸೈನಿಕರ ಸರದಿಯೇ’? 

ಸೈನಿಕರಿಗೆ ಸಂಬಳ, ನೀಡಲಾಗದಷ್ಟು ಕೇಂದ್ರದ ಬಿಜೆಪಿ ಸರ್ಕಾರ ದಿವಾಳಿಯಾಗಿದೆಯೇ..?

ದೇಶದ ಭದ್ರತೆಯ ಜೊತೆ ಚೆಲ್ಲಾಟವಾಡಲು ಹೋಗಬೇಡಿ ನರೇಂದ್ರ ಮೋದಿಯವರೆ”

ವರದಿ :ಹಣಮಂತ ದೇಶಮುಖ

ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಅಗ್ನಿಪಥ ಯೋಜನೆಗೆ ದೇಶದಾದ್ಯಂತ ಯುವಜನರು ಬೀದಿಗಿಳಿದು ಪ್ರತಿಭಟನೆ ಆರಂಭಿಸಿದ್ದಾರೆ. ಕಳೆದೆರಡು ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ಹಿಂಸಾತ್ಮಕ ರೂಪ ಪಡೆದುಕೊಂಡಿದೆ

“ವರ್ಷಕ್ಕೆ ಎರಡು ಕೋಟಿ ಉದ್ಯೋಗದ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಪ್ರಧಾನಿ ನರೇಂದ್ರ ಮೋದಿ ಅವರೇ, ಉದ್ಯೋಗಾವಕಾಶದ ಬಾಗಿಲುಗಳನ್ನು ಒಂದೊಂದಾಗಿ ಮುಚ್ಚುತ್ತಾ ಇರುವ ನಿಮಗೆ ಪ್ರತಿವರ್ಷ ಎರಡು ಕೋಟಿ ನಿರುದ್ಯೋಗಿಗಳನ್ನು ಸೃಷ್ಟಿಸುವ ಗುಪ್ತಾ ಅಜೆಂಡಾ ಏನಾದರೂ ಇದೆಯೇ..?”

“ಉದ್ಯೋಗದ ಅಭದ್ರತೆ, ಭವಿಷ್ಯದ ಬಗೆಗಿನ ಭಯ ಮತ್ತು ವೃತ್ತಿ ಬಗೆಗಿನ ಅತೃಪ್ತಿಯನ್ನು ಹುಟ್ಟುಹಾಕಲಿರುವ ಅಗ್ನಿಪಥ್ ಯೋಜನೆಯಡಿ ನೇಮಕಗೊಂಡ ಸೈನಿಕರು ತಮ್ಮ ವೃತ್ತಿಯಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಲು ಸಾಧ್ಯವೇ..? ಶತ್ರುಗಳ ಜೊತೆ ಕಾದಾಡಲಿರುವ ಸೈನಿಕರ ಈ ಮನಸ್ಥಿತಿ ಅಪಾಯಕಾರಿಯಲ್ಲವೇ..?” 

“ದೇಶಕ್ಕಾಗಿ ಪ್ರಾಣತ್ಯಾಗ ಮಾಡಲು ಸಿದ್ಧರಾಗುವ ಸೈನಿಕರಿಗೆ ಉದ್ಯೋಗದ ಭದ್ರತೆ, ನ್ಯಾಯಬದ್ಧ ಸಂಬಳ, ಪಿಂಚಣಿ ಮತ್ತಿತರ ಸೌಲಭ್ಯಗಳನ್ನು ಒದಗಿಸಲಾಗದಷ್ಟು ಕೇಂದ್ರದ ಬಿಜೆಪಿ ಸರ್ಕಾರ ದಿವಾಳಿಯಾಗಿದೆಯೇ..? ನಿಮ್ಮ ದಿವಾಳಿತನ ಮುಚ್ಚಿಡಲು ದೇಶದ ಭದ್ರತೆಯ ಜೊತೆ ಚೆಲ್ಲಾಟವಾಡಲು ಹೋಗಬೇಡಿ ನರೇಂದ್ರ ಮೋದಿಯವರೆ”

“ಹೊಸಸೇನಾ ನೇಮಕಾತಿ ಅಗ್ನಿಪಥ್ ಕೇವಲ ಸೇನಾ ನೇಮಕಾತಿಗಷ್ಟೇ ಸೀಮಿತವಾಗಲಾರದು. ಸೈನಿಕರ ಅನ್ನ ಕಸಿಯಲು ಹೊರಟಿರುವ ಈ ದೇಶದ್ರೋಹಿ, ಜನವಿರೋಧಿ ಬಿಜೆಪಿ ಸರ್ಕಾರ ಮುಂದಿನ ದಿನಗಳಲ್ಲಿ ಇತರ ಸರ್ಕಾರಿ ಉದ್ಯೋಗಗಳ ಮೇಲೆಯೂ ಸವಾರಿ ಮಾಡಲು ಹೊರಡುವುದು ಖಚಿತ.

“ರೈತರ ಬದುಕು ನಾಶ ಮಾಡಲು ಕರಾಳ ಕೃಷಿ ಕಾಯ್ದೆಗಳನ್ನು ತಂದಿದ್ದ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ದೇಶದ ಜನ ಪಾಠ ಕಲಿಸಿದ್ದಾರೆ. ಈಗ ಯುವಜನರ ಬದುಕು ನಾಶದ ಜೊತೆಯಲ್ಲಿ, ಸೈನಿಕರ ಬದುಕಿನ ಜೊತೆ ಚೆಲ್ಲಾಟವಾಡುತ್ತಿರುವವರಿಗೂ ಪಾಠ ಕಲಿಸಲು ದೇಶದ ಜನತೆ ಮುಂದಾಗಬೇಕು”

ಒಕ್ಕೂಟ ಸರ್ಕಾರ ಘೋಷಿಸಿರುವ ಅಗ್ನಿಪಥ್ ಯೋಜನೆಗೆ ರಾಷ್ಟ್ರಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿದೆ. ಉದ್ಯೋಗಾಕಾಂಕ್ಷಿ ಯುವಜನರು ಸಿಡಿದೆದ್ದಿದ್ದು 7 ರಾಜ್ಯಗಳಲ್ಲಿ ಭಾರಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ತಡೆಯಲು ಪೊಲೀಸರು ಲಾಠೀ ಚಾರ್ಜ್ ಮಾಡಿದ್ದರಿಂದ ಪ್ರತಿಭಟನೆ ಹಿಂಸಾರೂಪ ಪಡೆದಿದೆ. ಇದುವರೆಗೂ ದೇಶಾದ್ಯಂತ ಒಂದು ಸಾವು ಸಂಭವಿಸಿದ್ದು, 8 ಜನರ ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

“ದೇಶದ ಯುವಜನರನ್ನು ನಿರುದ್ಯೋಗದ ಕೂಪಕ್ಕೆ ತಳ್ಳುವ ಮತ್ತು ದೇಶದ ಭದ್ರತೆಗೆ ಅಪಾಯಕಾರಿಯಾಗಬಲ್ಲ ಅಗ್ನಿಪಥ್ ಎಂಬ ಯೋಜನೆಯನ್ನು ಕೇಂದ್ರದ ಬಿಜೆಪಿ ಸರ್ಕಾರ ತಕ್ಷಣ ರದ್ದುಪಡಿಸಿ ಈಗಿನ ಸೇನಾ ನೇಮಕಾತಿ ಯೋಜನೆಯಡಿಯಲ್ಲಿಯೇ ಸೈನಿಕರ ನೇಮಕಾತಿ ನಡೆಯಬೇಕು.