Latest Post

ಉಪನ್ಯಾಸಕ ಅಶೋಕ ಕೋರೆಗೆ ಪಿಎಚ್‌.ಡಿ ಡಾಕ್ಟರೇಟ್ : ಎಬಿವಿಪಿ ಯಿಂದ ಸನ್ಮಾನ ಸಾಕು ನಾಯಿಗಳಿಗೆ ತಪ್ಪದೇ ರೇಬೀಸ್ ಲಸಿಕೆ ನೀಡಿ: ಸಚಿವ ಪ್ರಭು ಚವ್ಹಾಣ
Spread the love

ವರದಿ:ಹಣಮಂತ ದೇಶಮುಖ


ಸಬ್ಸಿಡಿಗಳಿಗೆ ಕತ್ತರಿ ಕಾರ್ಪೊರೇಟ್ ಬಂಡವಾಳಿಗರ ಜೊತೆ ದೋಸ್ತಿ ಪ್ರಧಾನಿ ನರೇಂದ್ರ ಮೋದಿ ಅವರ ಎಂಟು ವರ್ಷಗಳ ಸಾಧನೆ

ಸಬ್ಸಿಡಿಗಳನ್ನು ನೀಡುವುದರಿಂದ ಆರ್ಥಿಕತೆಯು ವೇಗ ಪಡೆಯುತ್ತದೆ ಎಂಬುದು ಅರ್ಥಶಾಸ್ತ ಗೊತ್ತಿರುವ ಪ್ರತಿಯೊಬ್ಬರಿಗೂ ಅರ್ಥವಾಗುತ್ತದೆ. ಆದರೆ ಮೋದಿ ಸರ್ಕಾರ ಮತ್ತು ಆ ಸರ್ಕಾರದ ಹಿಂದೆ ಇರುವ ಆರ್ಎಸ್ಎಸ್ ಪ್ರಣೀತ ಜನರಿಗೆ ಇದು ಅರ್ಥವಾಗುತ್ತಿಲ್ಲ

ಕೇಂದ್ರ ಸರ್ಕಾರ ರೈತ ವಿರೋಧಿ ಕಾಯ್ದೆಗಳನ್ನು ತಂದು ಕೃಷಿಯನ್ನೂ ಕೂಡ ಅದಾನಿ, ಅಂಬಾನಿ ಮುಂತಾದ ಬಂಡವಾಳಿಗರಿಗೆ ಕೊಟ್ಟು ರೈತರನ್ನು ಸರ್ವನಾಶ ಮಾಡಲು ಹೊರಟಿತ್ತು. ಆದರೆ ರೈತರು ನಡೆಸಿದ ವೀರೋಚಿತ ಹೋರಾಟಗಳಿಂದ ಕಾಯ್ದೆಗಳನ್ನು ಕೈ ಬಿಡಬೇಕಾಯಿತು.

ಮೋದಿಯವರ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕೊರೋನ ಇದ್ದ ಎರಡು ವರ್ಷ ಬಿಟ್ಟರೆ ಉಳಿದಂತೆ ನಿರಂತರವಾಗಿ ಸಬ್ಸಿಡಿಗಳಿಗೆ ಕತ್ತರಿ ಹಾಕುತ್ತಿದ್ದಾರೆ.

2012-2013ರಲ್ಲಿ ಕೇಂದ್ರದ ಬಜೆಟ್ ಗಾತ್ರ 19.91 ಲಕ್ಷ ಕೋಟಿ ಇತ್ತು. ಆಗ ಆಹಾರ, ರಸಗೊಬ್ಬರ, ಪೆಟ್ರೋಲಿಯಂನ ಮೇಲೆ ನೀಡಿದ ಸಬ್ಸಿಡಿಯ ಪ್ರಮಾಣ 2.48 ಲಕ್ಷ ಕೋಟಿ. ಅಂದರೆ ಒಟ್ಟಾರೆ ಬಜೆಟ್ ನ ಶೇ. 16.61 ರಷ್ಟು ಸಂಪನ್ಮೂಲಗಳನ್ನು ಸಬ್ಸಿಡಿಗಾಗಿ ವಿಯೋಗಿಸಲಾಗಿತ್ತು. ಅದರೆ
20222-23 ರ ಬಜೆಟ್ನಲ್ಲಿ ಮತ್ತೆ ಕಡಿತ ಮಾಡಿದ್ದಾರೆ. ಈ ವರ್ಷ ಕೇಂದ್ರದ ಬಜೆಟ್ ಗಾತ್ರ 39.44 ಲಕ್ಷ ಕೋಟಿಗಳಷ್ಟಿದೆ. ಆದರೆ ನೀಡುತ್ತಿರುವ ಸಬ್ಸಿಡಿ ಪ್ರಮಾಣ 3.05 ಲಕ್ಷ ಕೋಟಿಗಳಷ್ಟಿದೆ, ಅಂದರೆ ಶೇ. 7.7 ಮಾತ್ರ.
2014 ರಲ್ಲಿ ಅಧಿಕಾರಕ್ಕೆ ಬಂದ ಮೋದಿಯವರ ಸರ್ಕಾರ ನಿರಂತರವಾಗಿ ಜನಸಾಮಾನ್ಯರ ಬದುಕನ್ನು ಹಿಂಡುವ ಕೆಲಸ ಪ್ರಾರಂಭಿಸಿದೆ. ನಿರಂತರವಾಗಿ ಸಬ್ಸಿಡಿಯನ್ನು ಕಡಿಮೆ ಮಾಡುತ್ತಾ ಬಂದಿದೆ.

ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ಮೇಲೆ ಮನಮೋಹನಸಿಂಗ್ ಅವರ ಸರ್ಕಾರ ವರ್ಷಕ್ಕೆ 97 ಸಾವಿರ ಕೋಟಿ ರೂಗಳವರೆಗೂ ಸಬ್ಸಿಡಿ ನೀಡುತ್ತಿತ್ತು. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ125 ಡಾಲರ್ ಗಳನ್ನು ಮೀರಿ ಬೆಳೆದಿದ್ದರೂ ಸಹ ದೇಶದಲ್ಲಿ ಡೀಸೆಲ್ ಬೆಲೆ 46 ರೂಪಾಯಿ ಮತ್ತು ಪೆಟ್ರೋಲ್ ಬೆಲೆ 76ರೂಪಾಯಿ ಹಾಗೂ
ಅಡುಗೆ ಅನಿಲದ ಬೆಲೆ 414 ರೂ ಒಳಗೆ ಇರುವಂತೆ ಮನಮೋಹನಸಿಂಗ್ ನೋಡಿಕೊಂಡಿದ್ದರು. ಇದರಿಂದ ಹಣದುಬ್ಬರವನ್ನು ನಿಯಂತ್ರಿಸಿ ಜನ ಸಾಮಾನ್ಯರ ಬದುಕಿನ ಮೇಲೆ ದುಷ್ಪರಿಣಾಮವಾಗದಂತೆ ನೋಡಿಕೊಂಡಿದ್ದರು.

ಆದರೆ ಮೋದಿ ಸರ್ಕಾರ ಜನ ಸಾಮಾನ್ಯರನ್ನು ಶತ್ರುಗಳ ರೀತಿ ಭಾವಿಸುತ್ತಿದೆ. ಪೆಟ್ರೋಲಿಯಂ ಬಾಬತ್ತಿಗೆ ನೀಡುತ್ತಿದ್ದ ಸಬ್ಸಿಡಿಯನ್ನು. 2022-23ರಲ್ಲಿ ಅದರ ಪ್ರಮಾಣ ಕೇವಲ 5.8 ಸಾವಿರ ಕೋಟಿಗಳಿಗೆ ಇಳಿದಿದೆ. ಇದರಿಂದಾಗಿಯೂ ಬೆಲೆಗಳು ತೀವ್ರವಾಗಿ ಏರಿಕೆಯಾಗಿವೆ. ಜನರು ಬದುಕು ಸಾಗಿಸುವುದೇ ದುಸ್ತರವಾಗಿದೆ.

ರೈತರಿಗೆ ನೀಡುವ ಸಬ್ಸಿಡಿಯ ಮೊತ್ತ ಕೂಡ ದಿನೇ ದಿನೇ ಕಡಿಮೆಯಾಗುತ್ತಿದೆ. ಜನರಿಗೆ ಸಬ್ಸಿಡಿ ನೀಡಬಾರದು, ಜನರ ಕಡೆಯ ಹನಿ ರಕ್ತವೂ ಉಳಿಯದಂತೆ ಹೀರಿಕೊಳ್ಳಬೇಕೆಂದು ಹಠ ತೊಟ್ಟಂತೆ ತೆರಿಗೆ ವಿಧಿಸುತ್ತಿದೆ.

ಮೋದಿಯವರ ಬಿಜೆಪಿ ಸರ್ಕಾರವು ಮತ್ತೊಂದು ಕಡೆ ಕಾರ್ಪೊರೇಟ್ ಬಂಡವಾಳಿಗರ ಮೇಲಿನ ತೆರಿಗೆಯನ್ನು ಇಳಿಸುತ್ತಿದೆ. ದೇಶದಲ್ಲಿ ಈಗ ಜನಸಾಮಾನ್ಯರು ಕಟ್ಟುವ ತೆರಿಗೆ ಹೆಚ್ಚಾಗುತ್ತಿದೆ, ಕಾರ್ಪೊರೇಟ್ ಶ್ರೀಮಂತರು ಕಟ್ಟುವ ತೆರಿಗೆ ಕಡಿಮೆಯಾಗುತ್ತಿದೆ.

ಇದೇ ಸಂದರ್ಭದಲ್ಲಿ ದೇಶದ ಆರ್ಥಿಕತೆಯ ಚೈತನ್ಯವೆ ಕುಸಿದು ಹೋಗುವಂತೆ ಸಾಲ ಮಾಡಲಾಗಿದೆ. ಮೋದಿಯವರು ಅಧಿಕಾರಕ್ಕೆ ಬಂದ ಈ ಎಂಟು ವರ್ಷಗಳಲ್ಲಿ ದೇಶದ ಸಾಲ ೧೦೨ ಲಕ್ಷ ಕೋಟಿಗಳಷ್ಟು ಹೆಚ್ಚಾಗಿದೆ. 2014 ರಲ್ಲಿ ದೇಶದ ಜನರ ತಲೆಯ ಮೇಲೆ ೫೭ ಸಾವಿರ ರೂಪಾಯಿ ಸಾಲವಿದ್ದರೆ ಇಂದು 1.70 ಲಕ್ಷ ರೂಪಾಯಿ ಸಾಲವಾಗಿದೆ.

ಆದರೆ ಇದೇ ಸಂದರ್ಭದಲ್ಲಿ ಕೇವಲ ಪೆಟ್ರೋಲ್ ಮತ್ತು ಡೀಸೆಲ್ಗಳಿಂದಲೆ 26 ಲಕ್ಷ ಕೋಟಿ ರೂಪಾಯಿಗಳನ್ನು ದೇಶದ ಜನರಿಂದ ದೋಚಿಕೊಳ್ಳಲಾಗಿದೆ. ಇಷ್ಟೊಂದು ಹಣ ಎಲ್ಲಿ ಹೋಯಿತು? ಇದರ ಲಾಭ ಜನ ಸಾಮಾನ್ಯರಿಗೇಕೆ ಸಿಗಲಿಲ್ಲ? ಇದನ್ನು ಯಾರು ತಿಂದು ಹಾಕಿದರು? ಎಷ್ಟು ಹಣ ಭ್ರಷ್ಟಾಚಾರಕ್ಕೆ ಹೋಯಿತು? ಎಷ್ಟು ಹಣ ಕಾರ್ಪೊರೇಟ್ ಬಂಡವಾಳಿಗರ ಸಾಲ ಮನ್ನಾ ಮಾಡಲು ಖರ್ಚು ಮಾಡಲಾಯಿತು? ಈ ಎಲ್ಲ ಪ್ರಶ್ನೆಗಳಿಗೆ ದೇಶದ ಜನರಿಗೆ ಮೋದಿಯವರ ಸರ್ಕಾರ ಲೆಕ್ಕ ಕೊಡಬೇಕಾಗಿದೆ.

ಅದಕ್ಕೂ ಮೊದಲು ಅಮೆರಿಕ, ಯುರೋಪು, ಆಸ್ಟ್ರೇಲಿಯಾ, ಜಪಾನ್ ಮತ್ತು ನ್ಯೂಜಿಲ್ಯಾಂಡ್ ದೇಶಗಳಲ್ಲಿ ರೈತರಿಗೆ, ಜನಸಾಮಾನ್ಯರಿಗೆ ನೀಡುತ್ತಿರುವ ಸಬ್ಸಿಡಿಗಳಂತೆ ಭಾರತದಲ್ಲೂ ನೀಡಿ, ಮುಳುಗಿ ಹೋಗುತ್ತಿರುವ ಜನರ ಬದುಕನ್ನು ಸುಧಾರಣೆ ಮಾಡಬೇಕಾದ ಅಗತ್ಯ ಹೆಚ್ಚಾಗಿದೆ.

Modi
Modi