Latest Post

ಸಾಕು ನಾಯಿಗಳಿಗೆ ತಪ್ಪದೇ ರೇಬೀಸ್ ಲಸಿಕೆ ನೀಡಿ: ಸಚಿವ ಪ್ರಭು ಚವ್ಹಾಣ ಕಂದಾಯ ಇಲಾಖೆ ಡಾಟಾ ಎಂಟ್ರಿ ಆಪರೇಟರ್‌ಗೆ ಸೇವಾ ಭದ್ರತೆ, ಸೂರ್ಯಕಾಂತ್ ನಾಗಮಾರಪಳ್ಳಿ ಮನವಿ
Spread the love

ನವದೆಹಲಿ: ಗುಜರಾತ್​ ಗಲಭೆ ಪ್ರಕರಣ ಸಂಬಂಧ ಹೈಕೋರ್ಟ್​ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ದೆಹಲಿಯ  ಸುಪ್ರೀಂಕೋರ್ಟ್​, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕ್ಲೀನ್​ ಚಿಟ್​ ನೀಡಿದೆ.

Narendra Modi gets clean chit in Gujarat riot case

ಗುಜರಾತ್​ ಗಲಭೆಯಲ್ಲಿ ಅಂದಿನ ಮುಖ್ಯಮಂತ್ರಿ ಮತ್ತು ಹಾಲಿ ಪ್ರಧಾನಿ ಮೋದಿ ಸೇರಿದಂತೆ 63 ಮಂದಿಯ ಪಾತ್ರವಿದೆ ಎಂದು ಆರೋಪಿಸಲಾಗಿತ್ತು. ಅದರೆ ಆ  ಘಟನೆ ಸಂಬಂಧ ವಿಶೇಷ ತನಿಖಾ ತಂಡವು ತನಿಖೆ ನಡೆಸಿ ಮೋದಿ ಅವರಿಗೆ ಕ್ಲೀನ್​ ಚಿಟ್​ ನೀಡಿತ್ತು.

ಮತ್ತು  ಇದನ್ನು ಪ್ರಶ್ನಿಸಿ, ಗಲಭೆಯಲ್ಲಿ ಮೃತಪಟ್ಟಿದ್ದ ಕಾಂಗ್ರೆಸ್​ ನಾಯಕ ಎಹ್ಸಾನ್ ಜಾಫ್ರಿ ಪತ್ನಿ ಜಾಕಿಯಾ ಜಫ್ರಿ ಗುಜರಾತ್​ ಹೈಕೋರ್ಟ್​ ಮೆಟ್ಟಿಲೇರಿದ್ದರು. ಆದರೆ, ಹೈಕೋರ್ಟ್ ಸಹ ​ ಅರ್ಜಿಯನ್ನು ತಿರಸ್ಕರಿಸಿ, ಎಸ್​ಐಟಿ ತನಿಖಾ ವರದಿಯನ್ನು ಎತ್ತಿಹಿಡಿದಿತ್ತು.

ಸುಮಾರು 20 ವರ್ಷಗಳ ಹಿಂದೆ ಅಂದರೆ 2002ರ ಫೆಬ್ರವರಿ 28 ರಂದು ಅಹಮದಾಬಾದ್‌ನ ಗುಲ್ಬರ್ಗ್ ಸೊಸೈಟಿಯಲ್ಲಿ ನಡೆದ ಭಾರಿ  ಹಿಂಸಾಚಾರದ ಸಂದರ್ಭದಲ್ಲಿ ಎಹ್ಸಾನ್ ಜಾಫ್ರಿ ಎಂಬುವರು ಕೊಲ್ಲಲ್ಪಟ್ಟರು.ಮತ್ತೆ ಹೈಕೋರ್ಟ್ ಅರ್ಜಿ ತಿರಸ್ಕರಿಸಿದ ಬಳಿಕ​ ಆದೇಶವನ್ನು ಪ್ರಶ್ನಿಸಿ ಜಾಕಿಯಾ ಅವರು ಸುಪ್ರೀಂಕೋರ್ಟ್​ನಲ್ಲಿ ದಾವೆ ಹೂಡಿದ್ದರು

ಹಲವು ದಿನಗಳ ಸುದೀರ್ಘ ವಿಚಾರಣೆ ನಡೆಸಿದ ಬಳಿಕ    (ಜೂನ್​ 24) ತೀರ್ಪು ನೀಡಿರುವ ಸುಪ್ರೀಂಕೋರ್ಟ್​, ಜಾಕಿಯಾ ಅವರ ಅರ್ಜಿಯನ್ನು ತಿರಸ್ಕರಿಸಿದೆ ಮತ್ತು ಪ್ರಧಾನಿ ಮೋದಿ ಅವರಿಗೆ ಗುಜರಾತ್​ ಗಲಭೆ ಪ್ರಕರಣದಲ್ಲಿ ಕ್ಲೀನ್​ ಚಿಟ್​ ನೀಡಿದೆ ಅನೇಕ ರಾಷ್ಟೀಯ ಮಾಧ್ಯಮಗಳು ವರದಿ ಮಾಡಿವೆ