Latest Post

ಉಪನ್ಯಾಸಕ ಅಶೋಕ ಕೋರೆಗೆ ಪಿಎಚ್‌.ಡಿ ಡಾಕ್ಟರೇಟ್ : ಎಬಿವಿಪಿ ಯಿಂದ ಸನ್ಮಾನ ಸಾಕು ನಾಯಿಗಳಿಗೆ ತಪ್ಪದೇ ರೇಬೀಸ್ ಲಸಿಕೆ ನೀಡಿ: ಸಚಿವ ಪ್ರಭು ಚವ್ಹಾಣ
Spread the love

ಬೀದರ್: (ಜೂ.21): ಪ್ರಕೃತಿ ನಮಗೆ ಸಾಕಷ್ಟು ಕೊಡುಗೆಗಳನ್ನು ನೀಡಿದೆ. ನಾವು ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕಾಗಿದೆ ಎಂದು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.


ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಯದಲಾಪೂರ ಗ್ರಾಮದ ಹೊರವಲಯದಲ್ಲಿ ಮಂಗಳವಾರ ಬೆಳಗ್ಗೆ ಬೀದರ್ ನಗರದ ಬ್ರಹ್ಮಕುಮಾರಿಸ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಯೋಗ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರಕೃತಿಯಲ್ಲಿ ನಮಗೆ ಗಾಳಿ, ಬೆಳಕು, ನೀರು ಸೇರಿದಂತೆ ಪ್ರತಿಯೊಂದು ಕೂಡ ಉಚಿತವಾಗಿ ಸಿಗುವ ಕೊಡುಗೆಗಳಾಗಿವೆ ಎಂದರು.


ಯೋಗವನ್ನು ಜೀವನದಲ್ಲಿ ನಿರಂತರವಾಗಿ ಅಳವಡಿಸಿಕೊಂಡರೆ ಹೃದಯಾಘಾತದಂತ ಮಾರಕ ಕಾಯಿಲೆಗಳು ಬರಲು ಸಾಧ್ಯವಿಲ್ಲ ಎಂಬುದನ್ನು ವೈದ್ಯರು ಹೇಳುತ್ತಾರೆ. ಪರಿಸರದಲ್ಲಿ ಉಚಿತವಾಗಿ ಸಿಗುವ ಮಳೆ, ಬಿಸಿಲು, ಗಾಳಿಯನ್ನು ಸದುಪಯೋಗ ಪಡಿಸಿಕೊಂಡು ದಿನನಿತ್ಯ ವ್ಯಾಯಾಮ, ಯೋಗ ಮಾಡುವ ಮೂಲಕ ಆರೋಗ್ಯವನ್ನು ಚನ್ನಾಗಿಟ್ಟುಕೊಳ್ಳಬೇಕಾಗಿದೆ.


ನಾವು ಬಿಡುವು ಇಲ್ಲವೆಂಬ ನೆಪ ಹೇಳುವ ಮೂಲಕ ಯೋಗ ವ್ಯಾಯಾಮಗಳಿಂದ ಅಂತರ ಕಾಯ್ದುಕೊಳ್ಳುತ್ತಿದ್ದೇವೆ. ಇದರಿಂದ ನಮ್ಮ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಸಾಧ್ಯವಾದಷ್ಟು ಯೋಗ, ವ್ಯಾಯಾಮಗಳನ್ನು ಮಾಡೋಣ. ಯೋಗದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ವಿಶ್ವಾದ್ಯಂತ ಯೋಗ ದಿನವನ್ನು ಆಚರಿಸಲಾಗುತ್ತಿದೆ. ಕೇವಲ ಒಂದೇ ದಿನಕ್ಕೆ ಇದು ಸೀಮಿತವಾಗಬಾರದು ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು. ಬ್ರಹ್ಮಕುಮಾರಿಸ್ ಸಂಸ್ಥೆಯ ಪ್ರಮುಖರು, ವಿವಿಧ ಸಂಸ್ಥೆಗಳ ಮುಖಂಡರು, ವೈದ್ಯರು, ಸ್ಥಳೀಯ ಜನಪ್ರತಿನಿಧಿಗಳು ಸೇರಿದಂತೆ ಅನೇಕರಿದ್ದರು.