Latest Post

ಸಾಕು ನಾಯಿಗಳಿಗೆ ತಪ್ಪದೇ ರೇಬೀಸ್ ಲಸಿಕೆ ನೀಡಿ: ಸಚಿವ ಪ್ರಭು ಚವ್ಹಾಣ ಕಂದಾಯ ಇಲಾಖೆ ಡಾಟಾ ಎಂಟ್ರಿ ಆಪರೇಟರ್‌ಗೆ ಸೇವಾ ಭದ್ರತೆ, ಸೂರ್ಯಕಾಂತ್ ನಾಗಮಾರಪಳ್ಳಿ ಮನವಿ
Spread the love

ನವದೆಹಲಿ: ಗಾಯದ ಸಮಸ್ಯೆಯಿಂದ ಟೀಂ ಇಂಡಿಯಾದ ಆಟಗಾರ ಕೆ.ಎಲ್. ರಾಹುಲ್ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಿಂದ ಹೊರಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ರಿಷಭ್ ಪಂತ್ ತಂಡವನ್ನು ಮುನ್ನಡೆಸಲಿದ್ದಾರೆ.

ರೋಹಿತ್ ಶರ್ಮಾ, ಜಸ್ಪ್ರೀತ್ ಬುಮ್ರಾ, ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಕೆ.ಎಲ್.

ರಾಹುಲ್ ಅವರನ್ನು ನಾಯಕರನ್ನಾಗಿ ನೇಮಕ ಮಾಡಲಾಗಿತ್ತು. ಆದರೆ ರಾಹುಲ್ ಗೆ ಬಲ ತೊಡೆಯಲ್ಲಿ ಗಾಯವಾಗಿದ್ದು, ಅವರು ಟೂರ್ನಿಯಿಂದ ಹೊರಬಿದ್ದಿದ್ದಾರೆ. ಇನ್ನು ಕುಲದೀಪ್ ಯಾದವ್ ಅವರು ನೆಟ್ಸ್ ನಲ್ಲಿ ಅಭ್ಯಾಸ ಮಾಡುವಾಗ ಬಲಗೈಗೆ ಗಾಯ ಮಾಡಿಕೊಂಡಿದ್ದು, ಅವರೂ ಸರಣಿಯಿಂದ ಹೊರಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ರಿಷಭ್ ಪಂತ್ ಅವರನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ನಾಯಕನಾಗಿ ಮತ್ತು ಹಾರ್ದಿಕ್ ಪಾಂಡ್ಯನನ್ನು ಉಪನಾಯಕನಾಗಿ ನೇಮಕ ಮಾಡಲಾಗಿದೆ ಎಂದು ಬಿಸಿಸಿಐ ತಿಳಿಸಿದೆ.

NEWS 🚨- KL Rahul and Kuldeep Yadav ruled out of #INDvSA series owing to injury.

The All-India Senior Selection Committee has named wicket-keeper Rishabh Pant as Captain and Hardik Pandya as vice-captain for the home series against South Africa @Paytm #INDvSA

– BCCI (@BCCI)

https://platform.twitter.com/embed/Tweet.html?creatorScreenName=Dailyhuntapp&dnt=false&embedId=twitter-widget-0&features=eyJ0ZndfZXhwZXJpbWVudHNfY29va2llX2V4cGlyYXRpb24iOnsiYnVja2V0IjoxMjA5NjAwLCJ2ZXJzaW9uIjpudWxsfSwidGZ3X3JlZnNyY19zZXNzaW9uIjp7ImJ1Y2tldCI6Im9mZiIsInZlcnNpb24iOm51bGx9LCJ0Zndfc2Vuc2l0aXZlX21lZGlhX2ludGVyc3RpdGlhbF8xMzk2MyI6eyJidWNrZXQiOiJpbnRlcnN0aXRpYWwiLCJ2ZXJzaW9uIjpudWxsfSwidGZ3X3R3ZWV0X3Jlc3VsdF9taWdyYXRpb25fMTM5NzkiOnsiYnVja2V0IjoidHdlZXRfcmVzdWx0IiwidmVyc2lvbiI6bnVsbH19&frame=false&hideCard=false&hideThread=false&id=1534518961668116482&lang=en&origin=https%3A%2F%2Fm.dailyhunt.in%2Fnews%2Findia%2Fkannada%2Fzeenewskannada-epaper-dhf5c5633fdf224b11a5f709eba0293d79%2Fbidinaayigalige%2Bhimse%2Bkottare%2Bserabekaaguttade%2Bjailu%2Bbilalide%2Bbhaari%2Bdanda-newsid-n393480814&sessionId=bf38602e621c6391f73bbb17edeb307e530e5839&siteScreenName=Dailyhuntapp&theme=light&widgetsVersion=b45a03c79d4c1%3A1654150928467&width=550px

ನಾಳೆಯಿಂದ ದಕ್ಷಿಣ ಆಫ್ರಿಕಾ ವಿರುದ್ಧ 5 ಟಿ20 ಪಂದ್ಯಗಳ ಸರಣಿ ಆರಂಭವಾಗಲಿದೆ, ಮೊದಲ ಪಂದ್ಯ ದೆಹಲಿಯಲ್ಲಿ ನಡೆಯಲಿದ್ದರೆ, ಎರಡನೇ ಪಂದ್ಯ ಜೂನ್ 12 ರಂದು ಕಟಕ್ ನಲ್ಲಿ, ಮೂರನೇ ಪಂದ್ಯ ಜೂನ್ 14 ರಂದು ವಿಶಾಖಪಟ್ಟಣದಲ್ಲಿ, ನಾಲ್ಕನೇ ಪಂದ್ಯ ಜೂನ್ 17 ರಂದು ರಾಜ್ ಕೋಟ್ ನಲ್ಲಿ ಹಾಗೂ ಐದನೇ ಪಂದ್ಯ ಜೂನ್ 19 ರಂದು ಬೆಂಗಳೂರಿನಲ್ಲಿ ನಡೆಯಲಿದೆ.

ಟೀಂ ಇಂಡಿಯಾ: ರಿಷಬ್ ಪಂತ್ (ನಾಯಕ) (ವಿ.ಕೀ.), ಹಾರ್ದಿಕ್ ಪಾಂಡ್ಯ (ಉಪನಾಯಕ), ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್ (ವಿ.ಕೀ.), ವೆಂಕಟೇಶ್ ಅಯ್ಯರ್, ಯುಜ್ವೇಂದ್ರ ಚಾಹಲ್, ಅಕ್ಸರ್ ಪಟೇಲ್, ರವಿ ಬಿಶ್ನೋ ಪಟೇಲ್ , ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅವೇಶ್ ಖಾನ್, ಅರ್ಶದೀಪ್ ಸಿಂಗ್, ಉಮ್ರಾನ್ ಮಲಿಕ್.