Latest Post

ಸಾಕು ನಾಯಿಗಳಿಗೆ ತಪ್ಪದೇ ರೇಬೀಸ್ ಲಸಿಕೆ ನೀಡಿ: ಸಚಿವ ಪ್ರಭು ಚವ್ಹಾಣ ಕಂದಾಯ ಇಲಾಖೆ ಡಾಟಾ ಎಂಟ್ರಿ ಆಪರೇಟರ್‌ಗೆ ಸೇವಾ ಭದ್ರತೆ, ಸೂರ್ಯಕಾಂತ್ ನಾಗಮಾರಪಳ್ಳಿ ಮನವಿ
Spread the love

(ಜೂ.18): ರೈತರ ಜಮೀನುಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಸಮಸ್ಯೆಗಳನ್ನು ಮೊದಲನೇ ಆದ್ಯತೆಯಲ್ಲಿಯೇ ಸರಿಪಡಿಸುವ ಕೆಲಸ ಮಾಡಬೇಕೆಂದು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಅಧಿಕಾರಿಗಳಿಗೆ ಸೂಚಿಸಿದರು.
ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಚೋಂಡಿ ಗ್ರಾಮದ ಬಸವ ಮಂಟಪದಲ್ಲಿ ಶನಿವಾರ ನಡೆದ ‘ಜಿಲ್ಲಾಧಿಕಾರಿಗಳ ನಡೆ – ಹಳ್ಳಿ ಕಡೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ರೈತರ ಜಮೀನುಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಹಾಳಾಗಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಉದ್ಯೋಗ ಖಾತ್ರಿ, ಸೇರಿದಂತೆ ಬೇರೆ ಬೇರೆ ಯೋಜನೆಗಳಡಿ ಕೂಡಲೇ ಅವುಗಳನ್ನು ಸರಿಪಡಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.


ಹಳ್ಳಿಗಳಲ್ಲಿ ಈ ರೀತಿಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದರ ಉದ್ದೇಶ ಗ್ರಾಮೀಣ ಭಾಗದ ಸಮಸ್ಯೆಗಳಿಗೆ ಪರಿಹಾರ ಒದಗಿಸಿಕೊಡುವುದಾಗಿದೆ. ಅಧಿಕಾರಿಗಳು ಗ್ರಾಮಕ್ಕೆ ಬಂದು ಗ್ರಾಮಸ್ಥರ ಸಮಸ್ಯೆಗಳನ್ನು ಪರಿಹರಿಸಲಿದ್ದಾರೆ‌. ನಿಮ್ಮ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಲಿಖಿತ ರೂಪದಲ್ಲಿ ಮಾಹಿತಿ ನೀಡಿ ಪರಿಹಾರ ಕಂಡುಕೊಳ್ಳಿ ಎಂದು ಶಾಸಕರು ಗ್ರಾಮಸ್ಥರಿಗೆ ತಿಳಿಸಿದರು.

ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಎಂಬುದು ತಪ್ಪಾಗಿದೆ


ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಎಂಬುದು ತಪ್ಪಾಗಿದೆ. ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಎಂದರೆ ಜಿಲ್ಲಾಧಿಕಾರಿಯೇ ಹಳ್ಳಿಗೆ ಬರಬೇಕಾಗುತ್ತದೆ. ಒಂದೇ ದಿನ ಜಿಲ್ಲೆಯ ಪ್ರತಿ ತಾಲೂಕಿಗೆ ಒಂದೊಂದು ಕಾರ್ಯಕ್ರಮ ಮಾಡಿದರೆ ಜಿಲ್ಲಾಧಿಕಾರಿ ಯಾವುದಾದರೂ ಒಂದು ಕಡೆಗೆ ಹೋಗಲು ಸಾಧ್ಯವಾಗುತ್ತದೆ. ಎಲ್ಲಾ ಕಡೆಗೆ ಹೋಗಲು ಸಾಧ್ಯವಾಗದು. ಆಗಾಗಿ ಅದನ್ನು ಸರಿ ಪಡಿಸಿ ಅಧಿಕಾರಿಗಳ ನಡೆ ಹಳ್ಳಿ ಕಡೆ ಎಂದು ಮಾಡುವುದು ಸೂಕ್ತವೆಂಬ ಅಭಿಪ್ರಾಯವನ್ನು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಬೀದರ್ ನ ಗ್ರೇಡ್ 2 ತಹಶಿಲ್ದಾರ್ ಮಂಜುನಾಥ, ತಾಲೂಕು ಪಂಚಾಯತಿ ಇಒ ಗದಿಗೆಪ್ಪಾ ಕುರಕೋಟೆ, ಪಿಡಿಒ ಶರತ್ ಕುಮಾರ್, ಗ್ರಾಮ ಪಂಚಾಯತಿ ಅಧ್ಯಕ್ಷ ನಹೀಮ್ ಪಟೇಲ್, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ಅರಣ್ಯ ಇಲಾಖೆ, ಗುಲಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ, ಭೂ ದಾಖಲೆಗಳ ನಿರ್ದೇಶಕರು, ಗ್ರಾಮೀಣ ಉದ್ಯೋಗ ಖಾತ್ರಿ, ಕಾರಂಜಾ ಯೋಜನೆ, ಕೃಷಿ, ಬಿಇಒ, ಪಶು ವೈದ್ಯಕೀಯ, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಗ್ರಾಮಸ್ಥರು ಇದ್ದರು.