Latest Post

ಸಾಕು ನಾಯಿಗಳಿಗೆ ತಪ್ಪದೇ ರೇಬೀಸ್ ಲಸಿಕೆ ನೀಡಿ: ಸಚಿವ ಪ್ರಭು ಚವ್ಹಾಣ ಕಂದಾಯ ಇಲಾಖೆ ಡಾಟಾ ಎಂಟ್ರಿ ಆಪರೇಟರ್‌ಗೆ ಸೇವಾ ಭದ್ರತೆ, ಸೂರ್ಯಕಾಂತ್ ನಾಗಮಾರಪಳ್ಳಿ ಮನವಿ
Spread the love

ಬೀದರ ಜೂನ್ 30 (ಕರ್ನಾಟಕ ವಾರ್ತೆ): 2022-23ನೇ ಸಾಲಿಗೆ ನಿಗಮದ ವಿವಿಧ ಯೋಜನೆಗಳಡಿಯಲ್ಲಿ
ಅನುಷ್ಠಾನಗೊಳಿಸುತ್ತಿರುವ ಸ್ವಯಂ ಉದ್ಯೋಗ ಸಾಲ ಮತ್ತು ಸಹಾಯ ಧನ, ಸಾಂಪ್ರದಾಯಿಕ ವೃತ್ತಿದಾರರ ಸಾಲ
ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.


 ಅರ್ಹರು ವೆಬ್‌ಸೈಟ್   www.suvidha.karnataka.gov.in ಮೂಲಕ ಮಾತ್ರವೆ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿ
ಸಲ್ಲಿಸಲು ಆಗಸ್ಟ್ 3 ಕೊನೆಯ ದಿನಾಂಕ ಆಗಿರುತ್ತದೆ. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ
ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು
ಅರ್ಹರಿರುವುದಿಲ್ಲ.


 ಹೆಚ್ಚಿನ ಮಾಹಿತಿಯನ್ನು ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮ
ನಿಯಮಿತ, ನಂ. 9-8-175/5ಬಿ, ಬಿವ್ಹಿಬಿ ಕಾಲೇಜ ರಸ್ತೆ, ಮೈಲೂರ ಕ್ರಾಸ್, ಬಸವನಗರ ಬೀದರ ನಿಗಮದ
ವೆಬ್‌ಸೈಟ್  https://kmmd.karnataka.gov.in ರಲ್ಲಿ ಪಡೆಯಬಹುದಾಗಿದೆ ಅಥವಾ ನಿಗಮದ ದೂ.ಸಂ. 08482-
223515ಗೆ ಸಂಪರ್ಕಿಸಬಹುದಾಗಿದೆ ಎಂದು ಬೀದರ ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದ ಜಿಲ್ಲಾ
ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.