Latest Post

ಸಾಕು ನಾಯಿಗಳಿಗೆ ತಪ್ಪದೇ ರೇಬೀಸ್ ಲಸಿಕೆ ನೀಡಿ: ಸಚಿವ ಪ್ರಭು ಚವ್ಹಾಣ ಕಂದಾಯ ಇಲಾಖೆ ಡಾಟಾ ಎಂಟ್ರಿ ಆಪರೇಟರ್‌ಗೆ ಸೇವಾ ಭದ್ರತೆ, ಸೂರ್ಯಕಾಂತ್ ನಾಗಮಾರಪಳ್ಳಿ ಮನವಿ
Spread the love

ಬೆಂಗಳೂರು ,ಜುಲೈ೦೬(ಕರ್ನಾಟಕ ವಾರ್ತೆ): ತಾಲೂಕಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ(ಪಿ.ಯು.ಸಿ. ಮತ್ತು ಪಿ.ಯು.ಸಿ ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-೧, ೨ಎ, ೨ಬಿ, ೩ಎ, ೩ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ೨೦೨೨-೨೩ನೇ ಸಾಲಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಯ ಪೋಷಕರ ಆದಾಯ ಮಿತಿ: ಪ್ರವರ್ಗ-೧, ಎಸ್.ಸಿ ಮತ್ತು ಎಸ್.ಟಿ ರೂ.೧.೦೦ ಲಕ್ಷ ಹಾಗೂ ಪ್ರವರ್ಗ-೨ಎ, ೨ಬಿ, ೩ಎ, ೩ಬಿ ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ. ೪೪,೫೦೦/- ಇಲಾಖೆಯ ವೆಬ್‌ಸೈಟ್ www.bcwd.karnataka.gov.in ನ್ನು ಸಂಪರ್ಕಿಸಿ ಅರ್ಜಿಯನ್ನು ಸಲ್ಲಿಸಬೇಕು.

Online  ಮೂಲಕ ಅರ್ಜಿ ಸಲ್ಲಿಸಲು ವಿಸ್ತರಿಸಿದ ಕೊನೆಯ ದಿನಾಂಕ:೧೫-೦೭-೨೦೨೨. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ www.bcwd.karnataka.gov.in ನ್ನು ನೋಡಬಹುದು.

ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwd.hostels@karnataka.gov.in ಗೆ ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸAಪರ್ಕಿಸುವುದು.