Latest Post

ಸಾಕು ನಾಯಿಗಳಿಗೆ ತಪ್ಪದೇ ರೇಬೀಸ್ ಲಸಿಕೆ ನೀಡಿ: ಸಚಿವ ಪ್ರಭು ಚವ್ಹಾಣ ಕಂದಾಯ ಇಲಾಖೆ ಡಾಟಾ ಎಂಟ್ರಿ ಆಪರೇಟರ್‌ಗೆ ಸೇವಾ ಭದ್ರತೆ, ಸೂರ್ಯಕಾಂತ್ ನಾಗಮಾರಪಳ್ಳಿ ಮನವಿ
Spread the love

ಸರ್ಕಾರದ ಸೌಲಭ್ಯ ಪಡೆಯಲು ಬೆಳೆ ಸಮೀಕ್ಷೆ ಅನಿವಾರ್ಯ

ಬೀದರ : 2022-23ನೇ ಸಾಲಿನ ಮುಂಗಾರು ಬೆಳೆಗಳ ಬೆಳೆ ಸಮೀಕ್ಷೆ ಮಾಡಲು ಪ್ರತಿ ಗ್ರಾಮಕ್ಕೆ ನೇಮಿಸಿರುವ ಖಾಸಗಿನಿವಾಸಿಗಳ ಸಹಕಾರದೊಂದಿಗೆ ರೈತ ಬಾಂಧವರು ಅಂಡ್ರಾಯ್ಡ್ ಮೊಬೈಲ್ ಉಪಯೋಗಿಸಿ ಗೂಗಲ್ ಪ್ಲೇ ಸ್ಟೋರ್‌ನಿಂದ ರೈತರ ಆ್ಯಪ್ (ಖಾರಿಫ್ ಫಾರಮರ್ ಕ್ರಾಪ್ 2022-23) ಡೌನ್‌ಲೋಡ್ ಮಾಡಿಕೊಂಡು ತಮ್ಮ ಜಮೀನಿನ ಬೆಳೆ ಸಮೀಕ್ಷೆ ತಾವೇ ಖುದ್ದಾಗಿ ಮಾಡಿಕೊಳ್ಳಬಹುದಾಗಿದೆ.

 ಸರ್ಕಾರದಿಂದ ದೊರೆಯುವ ಬೆಳೆ ವಿಮೆ ಪರಿಹಾರ, ಕನಿಷ್ಠ ಬೆಂಬಲ ಬೆಲೆ, ಬೆಳೆ ನಷ್ಟ ಪರಿಹಾರ ಹಾಗೂ ವಿವಿಧ ಇಲಾಖೆಗಳಿಂದ ದೊರೆಯುವ ಸವಲತ್ತುಗಳನ್ನು ಪಡೆಯಲು ಬೆಳೆ ಸಮೀಕ್ಷೆ ಕಡ್ಡಾಯವಾಗಿರುತ್ತದೆ. ಬೆಳೆಯ ಫೋಟೋ ಜೊತೆಗೆ ಸರ್ವೇ ನಂಬರ್, ಬೆಳೆಯ ಸ್ಥಿತಿ ಎಲ್ಲವನ್ನೂ ಈ ಆ್ಯಪ್‌ನಲ್ಲಿ ಡೌನಲೋಡ್ ಮಾಡಬಹುದು. ರೈತರಿಗೆ ಅನುಕೂಲವಾಗುವ ದೃಷ್ಟಿಯಿಂದ ಸರ್ಕಾರ ಈ ಆ್ಯಪ್‌ನ್ನು ಅಭಿವೃದ್ಧಿ ಪಡಿಸಿದ್ದು, ರೈತರಿಗೆ ತಿಳಿಯದಿದ್ದರೆ ಮನೆಯಲ್ಲಿನ ಅಥವಾ ಅಕ್ಕ-ಪಕ್ಕದ ಮನೆಯ ವಿದ್ಯಾವಂತರಿAದ ಅಥವಾ ಪ್ರತಿ ಗ್ರಾಮಕ್ಕೆ ನೇಮಿಸಿರುವ ಖಾಸಗಿ ನಿವಾಸಿಗಳಸಹಕಾರ ಪಡೆದು ಬೆಳೆ ಸಮೀಕ್ಷೆ ಮಾಡಿಸಬಹುದು.ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹೋಬಳಿಯಲ್ಲಿರುವ ರೈತ ಸಂಪರ್ಕಕೇAದ್ರದ ಕೃಷಿ ಅಧಿಕಾರಿಗಳು, ತೋಟಗಾರಿಕೆಅಧಿಕಾರಿಗಳು, ರೇಷ್ಮೆ ಇಲಾಖೆಯ ಅಧಿಕಾರಿಗಳು ಹಾಗೂ ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಲೆಕ್ಕಾಧಿಕಾರಿಗಳನ್ನುಸಂಪರ್ಕಿಸಲು ಬೀದರ ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.