Latest Post

ಈ ದೇಶದ ಸಂಪತ್ತು ಶಿಕ್ಷಕರು :ಡಾ ಮನ್ನಥ ಡೊಳೆ ವಸತಿ ನಿಲಯಗಳಿಗೆ 25% ಪ್ರತಿಶತ ಪ್ರವೇಶವನ್ನು ಹೆಚ್ಚಿಸುವಂತೆ ಎಬಿವಿಪಿ ಔರಾದ ಶಾಖೆ ಮನವಿ
Spread the love

75ನೇ ಅಮೃತ ಮಹೋತ್ಸವ ನಿಮಿತ್ಯ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

ಔರಾದ ಸರಕಾರಿ ಪ್ರಥಮ ದರ್ಜೆ ಕಾಲೇಜು ಔರಾದ ನಲ್ಲಿ ಎನ್ಎಸ್ಎಸ್ ಘಟಕ ಹಾಗೂ ರೆಡ್ ಕ್ರಾಸ್ ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ಯುವಕ ಸಂಘದ ಸಂಯುಕ್ತ ಆಶ್ರಯದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾತು ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಡಾ ಸೂರ್ಯಕಾಂತ ಚಿದ್ರೆ ಅವರ ಅಧ್ಯಕ್ಷತೆಯಲ್ಲಿ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಲಾಯಿತು. ಮುಖ್ಯ ಅತಿಥಿ ಉದ್ಘಾಟಕರಾಗಿ ತಾಲೂಕು ತಹಶಿಲ್ದಾರ ಅರುಣಕುಮಾರ್ ಕುಲಕರ್ಣಿ ಉದ್ಘಾಟಿಸಿದರು. ಇತರ ಗಣ್ಯ ವ್ಯಕ್ತಿಗಳು, ಯುವ ಮುಖಂಡರು, ಪ್ರಾಧ್ಯಾಪಕ ವರ್ಗದವರು, ಅತಿಥಿ ಉಪನ್ಯಾಸಕರುಗಳು, ಹಾಗೂ ಕಾಲೇಜಿನ ಬಿಎ,ಬಿಎಸ್ಸಿ,ಬಿಕಾಂ ತರಗತಿಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ರಕ್ತದಾನ ಶಿಬಿರದಲ್ಲಿ ಸುಮಾರು 30 ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕ ವರ್ಗದವರು ರಕ್ತದಾನ ಮಾಡುವಲ್ಲಿ ಯಶಸ್ವಿಯಾದರು.ಈ ಸಂದರ್ಭದಲ್ಲಿ ಕಾಲೇಜಿನ ಉಪನ್ಯಾಸಕರಿಗೆ ಸನ್ಮಾನಿಸಿ ಗೌರವಿಸಲಾಯಿತು.