Latest Post

ಸಾಕು ನಾಯಿಗಳಿಗೆ ತಪ್ಪದೇ ರೇಬೀಸ್ ಲಸಿಕೆ ನೀಡಿ: ಸಚಿವ ಪ್ರಭು ಚವ್ಹಾಣ ಕಂದಾಯ ಇಲಾಖೆ ಡಾಟಾ ಎಂಟ್ರಿ ಆಪರೇಟರ್‌ಗೆ ಸೇವಾ ಭದ್ರತೆ, ಸೂರ್ಯಕಾಂತ್ ನಾಗಮಾರಪಳ್ಳಿ ಮನವಿ
Spread the love

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಮುಂದಿನ ಮುಖ್ಯಮಂತ್ರಿ ಪಟ್ಟದ ರೇಸ್ ಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟಾಂಗ್ ನೀಡಿದ್ದಾರೆ. ಕಾಂಗ್ರೆಸ್ ನಾಯಕರು ಕೂಸು ಹುಟ್ಟುವ ಮೊದಲೇ‌ ಕುಲಾವಿ ಹೊಲಿಸುತ್ತಿದ್ದಾರೆ ಎಂದರು

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರಿಗೆ ಒಂದು ಮಾತು ಹೇಳಲು ಇಚ್ಚೆ ಪಡುತ್ತೇನೆ. ಕಾಂಗ್ರೆಸ್ ನಾಯಕರು ಕೂಸು ಹುಟ್ಟುವ ಮೊದಲೇ‌ ಕುಲಾವಿ ಹೊಲಿಸಿದ ರೀತಿಯಲ್ಲಿ ನಾನು ಮುಖ್ಯಮಂತ್ರಿ, ನೀನು ಮುಖ್ಯಮಂತ್ರಿ ಎಂದು ಬಡಿದಾಡುತ್ತಿದ್ದಾರೆ. ಯಾವ ಕಾರಣಕ್ಕೂ ಅವರು ಮುಖ್ಯಮಂತ್ರಿಯಾಗಲು ನಾವು ಬಿಡುವುದಿಲ್ಲ. ಬಿಜೆಪಿಯವರೇ ರಾಜ್ಯದ ಮುಖ್ಯಮಂತ್ರಿಯಾಗುವುದು. ನೂರಕ್ಕೆ ನೂರು ಬಹುಮತದಿಂದ ಮುಂದಿನ ಚುನಾವಣೆಯಲ್ಲಿ ನಾವು ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು

ಕೆ.ಆರ್. ಪೇಟೆಯಲ್ಲಿ ಬಹಳ ಶ್ರಮ ಹಾಕಿ ವಿಜಯೇಂದ್ರ ಪ್ರಯತ್ನದಿಂದ ನಮ್ಮ ಅಭ್ಯರ್ಥಿ ಗೆದ್ದಿದ್ದಾರೆ. ಈಗ ನಾರಾಯಣ ಗೌಡರು ಜಿಲ್ಲೆಯಲ್ಲಿ ಮೂರ್ನಾಲ್ಕು ಕ್ಷೇತ್ರ ಗೆಲ್ಲುವ ವಾತಾವರಣ ಸೃಷ್ಟಿ ಮಾಡಿದ್ದಾರೆ ಹೀಗಾಗಿ ಬಹಳ ದೊಡ್ಡ ಪ್ರಮಾಣದಲ್ಲಿ ಇಂದು ಸಭೆ ಆಗುತ್ತಿದೆ ಎಂದು ಹೇಳಿದರು.

ಹಳೆಯ ಮೈಸೂರು ಭಾಗದಲ್ಲಿ ಒಕ್ಕಲಿಗ ಸಮುದಾಯದ ಮತದ ಮೇಲೆ ರಾಷ್ಟ್ರೀಯ ಪಕ್ಷಗಳು ಸೇರಿದಂತೆ ಜೆಡಿಎಸ್ ಕಣ್ಣಿಟ್ಟಿವೆ. ರಾಜ್ಯ ರಾಜಕಾರಣದ ಮೇಲೆ ಒಕ್ಕಲಿಗ ಸಮುದಾಯ ಹೆಚ್ಚು ಪ್ರಭಾವವನ್ನು ಬೀರುತ್ತಿದ್ದು, ಆ ಸಮಾಜದ ಬೆಂಬಲವಿಲ್ಲದೆ ಆಡಳಿತ ನಡೆಸಲು ಸಾಧ್ಯವಿಲ್ಲ ಎಂಬುದನ್ನು ಅರಿತಿವೆ.

ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿರುವ ಡಿ ಕೆ ಶಿವಕುಮಾರ್, ಒಕ್ಕಲಿಗ ಸಮುದಾಯದ ಬೆಂಬಲ ಕೋರಿದ್ದರು. ಆದರೆ, ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ, ಡಿ ಕೆ ಶಿವಕುಮಾರ್ ನಡೆಯನ್ನು ಬಿ.ಎಸ್.ಯಡಿಯೂರಪ್ಪ ವ್ಯಂಗ್ಯ ಮಾಡಿದ್ದರು.