Latest Post

ಸಾಕು ನಾಯಿಗಳಿಗೆ ತಪ್ಪದೇ ರೇಬೀಸ್ ಲಸಿಕೆ ನೀಡಿ: ಸಚಿವ ಪ್ರಭು ಚವ್ಹಾಣ ಕಂದಾಯ ಇಲಾಖೆ ಡಾಟಾ ಎಂಟ್ರಿ ಆಪರೇಟರ್‌ಗೆ ಸೇವಾ ಭದ್ರತೆ, ಸೂರ್ಯಕಾಂತ್ ನಾಗಮಾರಪಳ್ಳಿ ಮನವಿ
Spread the love

ಖರ್ಗೆ ಅವರ ಹುಟ್ಟು ಹಬ್ಬದ ನಿಮಿತ್ಯ ರೋಗಿಗಳಿಗೆ ಹಣ್ಣುಹಂಪಲು ವಿತರಣೆ

ಔರಾದ : ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು ಮತ್ತು ರಾಜ್ಯ ಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಹುಟ್ಟು ಹಬ್ಬದ ಪ್ರಯುಕ್ತ ತಾಲ್ಲೂಕಿನ ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿನ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ಮಲ್ಲಿಕಾರ್ಜುನ ಖರ್ಗೆರವರ ಹುಟ್ಟು ಹಬ್ಬ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಂಕರರಾವ ದೊಡ್ಡಿ ಕೆಪಿಸಿಸಿ ಮಾಜಿ ಕಾರ್ಯದರ್ಶಿ ಮಾತನಾಡಿ ನಮ್ಮ ಪಕ್ಷದ ಬಲಿಷ್ಠ ನಾಯಕರು ರಾಜ್ಯದ ಧುರೀಣರು ಮುಂದೆ ಇನ್ನು ಉನ್ನತ ಸ್ಥಾನ ಗಳಿಸಲಿ ಆ ದೇವರು ಅವರ ಆಯು ಆರೋಗ್ಯ ಕಾಪಾಡಲಿ ಎಂದು ಶುಭಹಾರೈಸಿದರು. ತಾಲ್ಲೂಕಿನ ಹಿರಿಯ ಕಾಂಗ್ರೆಸ್ ಮುಖಂಡರಾದ ಡಾ ಫಯಾಜ್ ಅಲಿ ಮಾತನಾಡಿ ನಮ್ಮ ರಾಷ್ಟ್ರೀಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯ ಆ ದೆವರು ಕಾಪಾಡಲಿ ರಾಷ್ಟ್ರೀಯ ಮಟ್ಟದಲ್ಲಿ ಉನ್ನತ ಸ್ಥಾನ ಪಡೆಯುವಂತೆ ಭಗವಂತ ಕರುಣಿಸಲಿ ಎಂದು ನುಡಿದರು.ಈ ಸಂದರ್ಭದಲ್ಲಿ ತಾಲೂಕಿನ ಕಾಂಗ್ರೆಸ್ ಪಕ್ಷದ ಹಿರಿಯರಾದ ಚನ್ನಪ್ಪಾ ಉಪ್ಪೆ,ಧನರಾಜ ಮುಸ್ತಾಪೂರ,ಅಶೋಕ ದರಬಾರೆ,ಸಂಜು ಚಲವಾ,ವೈಜಿನಾಥ ವಡಿಯಾರ,ಇನ್ನು ಅನೇಕ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.