Latest Post

ಈ ದೇಶದ ಸಂಪತ್ತು ಶಿಕ್ಷಕರು :ಡಾ ಮನ್ನಥ ಡೊಳೆ ವಸತಿ ನಿಲಯಗಳಿಗೆ 25% ಪ್ರತಿಶತ ಪ್ರವೇಶವನ್ನು ಹೆಚ್ಚಿಸುವಂತೆ ಎಬಿವಿಪಿ ಔರಾದ ಶಾಖೆ ಮನವಿ
Spread the love

ಬೀದರ್ (ಜು.04): ಕರ್ನಾಟಕ ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಪೌರ ಕಾರ್ಮಿಕರ ಸಂಘ & ಕರ್ನಾಟಕ ರಾಜ್ಯ ಹೊರಗುತ್ತಿಗೆ ನೌಕರರ ಸಂಘ & ಬೀದರ್ ನಗರಸಭೆಯ ಹೊರಗುತ್ತಿಗೆ ನೌಕರರ ಸಂಘಟನೆಗಳ ವತಿಯಿಂದ ನಗರದ ನಗರಸಭೆ ಮುಂಭಾಗದಲ್ಲಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರದ ಸ್ಥಳಕ್ಕೆ ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಭೇಟಿ ನೀಡಿ ಮನವಿ ಸ್ವೀಕರಿಸಿದರು.
ನಗರಪಾಲಿಕೆ, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿಗಳ ಪೌರಕಾರ್ಮಿಕರು, ಹೊರಗುತ್ತಿಗೆ ಕಸ ಸಾಗಿಸುವ ವಾಹನ ಚಾಲಕರು, ಕಸ ನಿರ್ವಹಣೆಯ ಸ್ಯಾನಿಟರಿ ಸೂಪರ ವೈಜರ್ ಗಳು, ವಾಟರ್ ಮ್ಯಾನ್ ಗಳು, ಡಾಟಾಆಫರೇಟರ್ ಗಳನ್ನು ಖಾಯಂಗೊಳಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳೊಂದಿಗೆ ಪೌರ ಕಾರ್ಮಿಕರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ಸೋಮವಾರ ಭೇಟಿ ನೀಡಿದ ಶಾಸಕರು ಪೌರ ಕಾರ್ಮಿಕರ ಹೋರಾಟದ ಮಾಹಿತಿ ಪಡೆದರು.


ಈ ವೇಳೆ ಮಾತನಾಡಿದ ಅವರು, ರಾಜ್ಯದಲ್ಲಿ ಪೌರ ಕಾರ್ಮಿಕರಿಗೆ ಸರಿಯಾದ ವೇತನ ನೀಡಲಾಗುತ್ತಿಲ್ಲ. ಅವರಿಗೆ ಸಿಗುತ್ತಿರುವ ವೇತನದಲ್ಲಿ ಜೀವನ ನಡೆಸಲು ಕಷ್ಟವಾಗುತ್ತದೆ. ಅನೇಕ ವರ್ಷಗಳಿಂದ ಕೆಲಸ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು ತಮ್ಮನ್ನು ಖಾಯಂಗೊಳಿಸುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸುತ್ತಾ ಬಂದಿದ್ದಾರೆ. ಆದರೆ ಸರ್ಕಾರ ಪೌರ ಕಾರ್ಮಿಕರ ಮನವಿಯನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ.


ನಾನು ಕೂಡ ಈ ವಿಷಯಕ್ಕೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ಅಧಿವೇಶನದಲ್ಲಿ ಕಾರ್ಮಿಕರಿಗೆ ಸಂಬಂಧಿಸಿದಂತೆ ಅನೇಕ ಪ್ರಶ್ನೆಗಳನ್ನು ಕೇಳಿದ್ದೇನೆ. ಪೌರಕಾರ್ಮಿಕರ ಬೇಡಿಕೆಗೆ ಸರ್ಕಾರ ಸ್ಪಂದಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಕೂಡ ಪೌರಕಾರ್ಮಿಕರ ಪರವಾಗಿ ಸದನದಲ್ಲಿ ಧ್ವನಿ ಎತ್ತುತ್ತೇನೆ. ಸರ್ಕಾರ ಪೌರ ಕಾರ್ಮಿಕರ ಮನವಿಯನ್ನು ಗಂಭೀರವಾಗಿ ಪರಿಗಣಿಸಬೇಕೆಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಒತ್ತಾಯಿಸಿದರು.


ಈ ಸಂದರ್ಭದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಮಾರುತಿ ಬೌದ್ಧೆ, ನಗರಸಭೆ ಸದಸ್ಯ, ಜೆಡಿಎಸ್ ವಿದ್ಯಾರ್ಥಿ ಘಟಕದ ಜಿಲ್ಲಾಧ್ಯಕ್ಷ ಅಭಿ ಕಾಳೆ, ಪೌರ ಕಾರ್ಮಿಕರ ಸಂಘದ ಗೌರವಾಧ್ಯಕ್ಷ ಸಿದ್ದು ಪಾಟೀಲ್, ಜಿಲ್ಲಾಧ್ಯಕ್ಷ ಯೇಸುದಾಸ್, ದಲಿತ ಸಂಘಟನೆಯ ಮುಖಂಡರು, ಪೌರಕಾರ್ಮಿಕರ ಸಂಘಟನೆಗಳ ಮುಖಂಡರು, ಪೌರ ಕಾರ್ಮಿಕರು ಸೇರಿದಂತೆ ಅನೇಕರಿದ್ದರು.