Latest Post

ಈ ದೇಶದ ಸಂಪತ್ತು ಶಿಕ್ಷಕರು :ಡಾ ಮನ್ನಥ ಡೊಳೆ ವಸತಿ ನಿಲಯಗಳಿಗೆ 25% ಪ್ರತಿಶತ ಪ್ರವೇಶವನ್ನು ಹೆಚ್ಚಿಸುವಂತೆ ಎಬಿವಿಪಿ ಔರಾದ ಶಾಖೆ ಮನವಿ
Spread the love

ಪಿಯುಸಿ ವಿದ್ಯಾರ್ಥಿಗಳು ಕಾಲೇಜಿಗೆ   ಇನ್ನುಂದೆ   ದ್ವಿಚಕ್ರ ವಾಹನ ತರುವಂತಿಲ್ಲ ಎಂದು ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ರವಿಕಾಂತೇಗೌಡ ಹೇಳಿದ್ದಾರೆ

ಸುದ್ದಿಗಾರರೊಂದಿಗೆ ಮಾತನಾಡಿದ ಆಯುಕ್ತ ರವಿಕಾಂತೇಗೌಡ  ಪಿಯುಸಿ ವಿದ್ಯಾರ್ಥಿಗಳು ಕಾಲೇಜಿಗೆ ದ್ವಿಚಕ್ರ ವಾಹನ ತರುವಂತಿಲ್ಲ, ಯಾಕೆಂದರ ವಿದ್ಯಾರ್ಥಿಗಳು ಇನ್ನೂ ಡಿಎಲ್ ಪಡೆಯಲು ಅರ್ಹತೆ ಆಗಿರೋದಿಲ್ಲ.ಹೀಗಾಗಿ ಕಾಲೇಜಿಗೆ ಬೈಕ್ ತರುವಂತಿಲ್ಲ ಎಂದು ಹೇಳಿದ್ದಾರೆ.

ಇನ್ನು ಬೆಂಗಳೂರು   ನಗರದಲ್ಲಿ ನಕಲಿ ನಂಬರ್ ಪ್ಲೇಟ್ ಹೊಂದಿರುವ ವಾಹನಗಳು ಸಿಗುತ್ತಿವೆ. ನಕಲಿ ನಂಬರ್ ವಾಹನಗಳ ಮಾಲೀಕರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗುತ್ತಿದೆ. ಜೂನ್ ತಿಂಗಳಲ್ಲಿ 22 ವಾಹನ ಸವಾರರು ಮದ್ಯ ಸೇವಿಸಿ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಯಾರೂ ಮದ್ಯ ಕುಡಿದು ವಾಹನ ಚಾಲನೆ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.