Latest Post

ಈ ದೇಶದ ಸಂಪತ್ತು ಶಿಕ್ಷಕರು :ಡಾ ಮನ್ನಥ ಡೊಳೆ ವಸತಿ ನಿಲಯಗಳಿಗೆ 25% ಪ್ರತಿಶತ ಪ್ರವೇಶವನ್ನು ಹೆಚ್ಚಿಸುವಂತೆ ಎಬಿವಿಪಿ ಔರಾದ ಶಾಖೆ ಮನವಿ
Spread the love

ತುಮಕೂರು: ಮುಖ್ಯಮಂತ್ರಿ ಕುರ್ಚಿಗೆ ಟವಲ್ ಹಾಕಿಕೊಂಡು ನಾನು ಕುಳಿತಿಲ್ಲ. ಜನತೆ ನೀಡುವ ತೀರ್ಪಿಗೆ ಎಲ್ಲರೂ ಬದ್ದವಾಗಿರುವುದಾಗಿ ಸಿದ್ದರಾಮಯ್ಯ ಹೇಳಿದರು.


ಈವರೆಗೆ ಹುಟ್ಟುಹಬ್ಬವನ್ನು ನಾನು ಎಂದೂ ಆಚರಣೆ ಮಾಡಿಕೊಂಡಿಲ್ಲ, ಆ.೩ರಂದು ನನಗೆ ೭೫ ವರ್ಷ ಆಗುವುದರಿಂದ ಅಭಿಮಾನಿಗಳು ಹಾಗೂ ಸ್ನೇಹಿತರ ಒತ್ತಡಕ್ಕೆ ಮಣಿದು ಒಪ್ಪಿಗೆ ನೀಡಿದ್ದೇನೆ.ಇದರ ಮೂಲಕ ಅಧಿಕಾರ ಪಡೆಯುವ ಇರಾದೆ ನನಗೆ ಇಲ್ಲ ಎಂದು ತಿಳಿಸಿದರು.


ಶಿರಾ ನಗರದ ಗ್ರಾಮ ದೇವತೆ ದುರ್ಗಮ್ಮ ದೇವಸ್ಥಾನಕ್ಕೆ ಶುಕ್ರವಾರ ಭೇಟಿ ನೀಡಿ ಪೂಜೆ ಸಲ್ಲಿಸಿ ಮಾತನಾಡಿದರು, ಮುಖ್ಯಮಂತ್ರಿ ಕುರ್ಚಿಗೆ ಕಾಂಗ್ರೆಸ್ ಪಕ್ಷದಲ್ಲಿ ಮಾತ್ರ ಹೋರಾಟ ನಡೆಯುತ್ತಿಲ್ಲ, ಬಿಜೆಪಿ ಪಕ್ಷದಲ್ಲಿ ಕೂಡ ಹೋರಾಟ ನಡೆಯುತ್ತಿದೆ

. ಎಲ್ಲಾ ಪಕ್ಷಗಳಲ್ಲೂ ಇದು ಸರ್ವೇ ಸಾಧಾರಣ. ಚುನಾವಣೆಯಲ್ಲಿ ಜನತೆ ನೀಡುವ ತೀರ್ಪಿಗೆ ಎಲ್ಲರೂ ಬದ್ಧವಾಗಬೇಕಾಗುವುದು ಎಂದರು.


ಗುತ್ತಿಗೆದಾರ ಸಂತೋಷ್ ಪಾಟೀಲ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ‘ಬಿ’ ರಿಪೋರ್ಟ್ ಸಲ್ಲಿಸಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರಿಗೆ ಕ್ಲೀನ್ ಚಿಟ್ ನೀಡುತ್ತಾರೆ ಎನ್ನುವ ಸಂದೇಹ ಮೊದಲಿನಿಂದ ಇತ್ತು. ಸಂತೋಷ್ ಡೆತ್‌ನೋಟ್‌ನಲ್ಲಿ ಈಶ್ವರಪ್ಪ ಅವರ ಹೆಸರು ನಮೂದಿಸಿರುವ ದಾಖಲೆ ಇದ್ದರೂ ಸೂಕ್ತವಾಗಿ ತನಿಖೆ ನಡೆಸದೆ ಕ್ಲೀನ್‌ಚಿಟ್ ನೀಡಲಾಗಿದ್ದು, ನ್ಯಾಯಾಂಗ ತನಿಖೆ ನಡೆಸಿದರೆ ಸತ್ಯ ಹೋರಬರಲಿದೆ ಎಂದು ಹೇಳಿದರು.