Latest Post

ಈ ದೇಶದ ಸಂಪತ್ತು ಶಿಕ್ಷಕರು :ಡಾ ಮನ್ನಥ ಡೊಳೆ ವಸತಿ ನಿಲಯಗಳಿಗೆ 25% ಪ್ರತಿಶತ ಪ್ರವೇಶವನ್ನು ಹೆಚ್ಚಿಸುವಂತೆ ಎಬಿವಿಪಿ ಔರಾದ ಶಾಖೆ ಮನವಿ
Spread the love

ಬೀದರ್ (ಜು.03): ಮನೆ ಕಟ್ಟಿ ನೋಡು, ಮದುವೆ ಮಾಡಿ ನೋಡು ಎಂಬ ಗಾದೆ ಮಾತಿನಂತೆ ಹಳ್ಳಿ ಜನರು ಮದುವೆ ಮಾಡೋದು ದೊಡ್ಡ ಕಷ್ಟಕರವಾದ ಕೆಲಸವಾಗಿರುತ್ತದೆ. ಆ ನಿಟ್ಟಿನಲ್ಲಿ ನಮ್ಮ ಸರ್ಕಾರದ ವೇಳೆಯಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಪ್ರೋತ್ಸಾಹ ನೀಡುವ ಕೆಲಸ ಮಾಡಿದ್ದೇವು ಎಂದು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.


ಬುದ್ಧ ಬೆಳಕು ಸಾಮಾಜಿಕ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್, ಮಾನವ ಬಂಧುತ್ವ ವೇದಿಕೆ ಕರ್ನಾಟಕ, ರಾಷ್ಟ್ರ ಸೇವಾದಳ ಹಾಗೂ ಜ್ಞಾನ ಮಾರ್ಗ ಮಲ್ಟಿಪರ್ಪೋಸ್ ಸೊಸೈಟಿ ಬೀದರ್ ಗಳ ಸಂಯುಕ್ತಾಶ್ರಯದಲ್ಲಿ ಬೀದರ್ ದಕ್ಷಿಣ ಕ್ಷೇತ್ರದ ಆಣದೂರಿನಲ್ಲಿ ಭಾನುವಾರ ನಡೆದ ಬುದ್ಧ, ಬಸವ, ಅಂಬೇಡ್ಕರ್ ರವರ ಜಯಂತೋತ್ಸವ ಮತ್ತು ಸರಳ ಸಾಮೂಹಿಕ ವಿವಾಹ ಮತ್ತು ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮದುವೆ ಮಾಡಿಸುವುದು ಪುಣ್ಯದ ಕಾರ್ಯವಾಗಿದೆ ಎಂದರು.


ಸಾಮೂಹಿಕ ವಿವಾಹ ಕಾರ್ಯಕ್ರಮಗಳು ಸಂಘಟನೆಗಳ ನೇತೃತ್ವದಲ್ಲಿ ಮಾಡುತ್ತಿರುವುದು ವಿಶೇಷ ಕಾರ್ಯವಾಗಿದೆ. ಸರಳ, ಸಾಮೂಹಿಕ ವಿವಾಹಗಳಿಗೆ ಪ್ರೋತ್ಸಾಹ ನೀಡುವ ಕೆಲಸವನ್ನು ನಾವೆಲ್ಲರೂ ಮಾಡಬೇಕಾಗಿದೆ. ಸಾಲ ಮಾಡಿ ದುಂದು ವೆಚ್ಚ ಮಾಡಿ ಮದುವೆ ಮಾಡಿ, ಮದುವೆಗೆ ಮಾಡಿದ ಸಾಲ ತೀರಿಸಲು ಜೀವನ ಪೂರ್ತಿ ದುಡಿಯುವ ಪರಿಸ್ಥಿತಿ ತಂದುಕೊಳ್ಳಬಾರದು.
ಆಣದೂರಿನಂತ ಗ್ರಾಮಗಳಲ್ಲಿ 85 ಸಾಮೂಹಿಕ ವಿವಾಹ ಮಾಡಿರುವುದು ಮಾದರಿ ಕಾರ್ಯ. ಇದೇ ರೀತಿ ವಿವಿಧ ಸಂಘಟನೆಗಳು ಸಾಮೂಹಿಕ ವಿವಾಹಗಳನ್ನು ಹಮ್ಮಿಕೊಳ್ಳುವ ಮೂಲಕ ಬಡ ಜನರಿಗೆ ನೆರವಾಗಬೇಕು. ಆ ಕಾರ್ಯ ಎಲ್ಲರೂ ಮಾಡಬೇಕೆಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.


ಈ ಸಂದರ್ಭದಲ್ಲಿ ವೈಶಾಲಿ ನಗರ ಆಣದೂರಿನ ಪೂಜ್ಯ ಭಂತೆ ಧಮ್ಮಾನಂದ ಥೆರೋ, ಕೆಎಸ್ಡಿಎಸ್ಎಸ್ ರಾಜ್ಯ ಸಂಘಟನಾ ಸಂಚಾಲಕ ಮಾರುತಿ ಬೌದ್ದೆ, ಶಾಹೀನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಅಬ್ದುಲ್ ಖದೀರ್, ಫರ್ನಾಂಡೀಸ್ ಹಿಪ್ಪಳಗಾಂವ, ಪವನ್ ಗೂನ್ನಳ್ಳಿಕರ್, ಸಂದೀಪ್ ಕಾಂಟೆ, ಗೌತಮ್ ಮುತ್ತಂಗಿಕರ್, ಅಮರ ಅಲ್ಲಾಪೂರ, ರತ್ನದೀಪ ಕಸ್ತೂರೆ, ಕಲ್ಪನಾ ಗೋರನಾಳಕರ್, ಮಹೇಶ ಗೋರನಾಳಕರ್ ಸೇರಿದಂತೆ ಅನೇಕರಿದ್ದರು.