Latest Post

ಉಪನ್ಯಾಸಕ ಅಶೋಕ ಕೋರೆಗೆ ಪಿಎಚ್‌.ಡಿ ಡಾಕ್ಟರೇಟ್ : ಎಬಿವಿಪಿ ಯಿಂದ ಸನ್ಮಾನ ಸಾಕು ನಾಯಿಗಳಿಗೆ ತಪ್ಪದೇ ರೇಬೀಸ್ ಲಸಿಕೆ ನೀಡಿ: ಸಚಿವ ಪ್ರಭು ಚವ್ಹಾಣ
Spread the love

ಭಾರತ ಸರ್ಕಾರವು ೭೫ನೇ ಸ್ವಾತಂತ್ರ ಮಹೋತ್ಸವದ ಅಂಗವಾಗಿ ಕೇಂದ್ರ ಸರ್ಕಾರವು ೧೭ ಯೋಜನೆಗಳನ್ನು ಎಲ್ಲ ಅರ್ಹ ಫಲಾನುಭವಿಗಳಿಗೆ ತಲುಪಿಸಲು ಕರ್ನಾಟಕದ  ಅನೇಕ ಜಿಲ್ಲೆಯೊಳಗೊಂಡಂತೆ  ಒಟ್ಟು ೭೫ ಜಿಲ್ಲೆಗಳನ್ನು ಆಯ್ಕೆ ಮಾಡಿ ೯೦ ದಿನಗಳ ಕಾಲ AKAM ANTODAYA CAMPAIGN ನಡೆಸುತ್ತಿದ್ದು. ೧೭ ಯೋಜನೆ ಕಾರ್ಮಿಕ ಮತ್ತು ಉದ್ಯೋಗ ಮಂತ್ರಾಲಯದ ಪ್ರಧಾನಮAತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಯಲ್ಲಿ ನೊಂದಣಿ ಮಾಡಿಸಿಕೊಳ್ಳುವ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ಇದಾಗಿದೆ..

ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆಯ  ಎಂದರೇನು? ಇದರ ಲಾಭಗಳೇನು?

ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್-ಧನ್ ಯೋಜನೆಯ  ಎಂದರೇನು? ಇದರ ಲಾಭಗಳೇನು?ಯೋಜನೆಯ ವೈಶಿಷ್ಟ್ಯ : ಪಲಾನುಭವಿಗಳ ನೋಂದಣಿ ವಿಧಾನಗಳು :ಯೋಜನೆಯ ಸೌಲಭ್ಯಗಳು :ಫಲಾನುಭವಿಗಳು ಹೆಚ್ಚಿನ ಮಾಹಿತಿಗಾಗಿ

ಯೋಜನೆಯ ವೈಶಿಷ್ಟ್ಯ :

ಅಸಂಘಟಿತ ವಲಯದ ಕಾರ್ಮಿಕರಿಗೆ ಅವರ ಜೀವನ ಸಂಧ್ಯಾಕಾಲದಲ್ಲಿ ದುಡಿದು ತಮ್ಮನ್ನು ಪೋಷಿಸಿಕೊಳ್ಳಲು ಆರ್ಥಿಕ ಮೂಲಗಳು ಇರುವುದಿಲ್ಲ, ಇಂತಹ ಅಸಂಘಟಿತ ವಲಯದ ಕಾರ್ಮಿಕರಿಗೆ ಅವರ ವಯೋವೃದ್ಧ ವೇಳೆಯಲ್ಲಿ ಸಾಮಾಜಿಕ ಭದ್ರತೆ ಕಲ್ಪಿಸಲು ಭಾರತ ಸರ್ಕಾರವು ಪಿ.ಎಂ.ಎಸ್.ವೈ.ಎ ವಂತಿಗೆ ಆಧಾರಿತ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿದೆ.

ಯೋಜನೆ ಪಲಾನುಭವಿಗಳಿಗೆ ಇರಬೇಕಾದ ಅರ್ಹತೆಗಳು :

ಯೋಜನೆಗೆ ಒಳಪಡುವ ಕಾರ್ಮಿಕರು ಅಸಂಘಟಿತ ವಲಯದ ಕಾರ್ಮಿಕರಾಗಿರಬೇಕು. ೧೮ ರಿಂದ ೪೦ವರ್ಷದೊಳಗಿರಬೇಕು, ಅವರ ಮಾಸಿಕ ಆದಾಯ ೧೫೦೦೦ ಅಥವಾ ಅದಕ್ಕಿಂತ ಕಡಿಮೆ ಇರಬೇಕು. ಅವರು ಆದಾಯ ತೆರಿಗೆ/ಇ.ಎಸ್.ಐ/ಪಿ.ಎಫ್/ಎನ್.ಪಿ.ಎಸ್ ಯೋಜನೆಯ ವ್ಯಾಪ್ತಿಗೆ ಒಳಪಟ್ಟಿರಬಾರದು. ಬ್ಯಾಂಕ್ ಉಳಿತಾಯ ಖಾತೆ ಮತ್ತು ಆಧಾರ್ ಸಂಖ್ಯೆ ಹೊಂದಿರಬೇಕು.

ಪಲಾನುಭವಿಗಳ ನೋಂದಣಿ ವಿಧಾನಗಳು :

ಅರ್ಹ ಅಸಂಘಟಿತ ಕಾರ್ಮಿಕರು ಹತ್ತಿರದ ಕಾಮನ್ ಸರ್ವೀಸ್ ಸೆಂಟರ್ ಗಳಲ್ಲಿ ಯೋಜನೆಯಡಿ ಫಲಾನುಭವಿಗಳಾಗಿ ನೋಂದಾಯಿಸಬೇಕು. ಸಿ.ಎಸ್.ಸಿ.ಗಳ ವಿವರಗಳನ್ನು ಹತ್ತಿರದ ಎಲ್.ಐ.ಸಿ ಶಾಖೆಗಳು, ಕಾರ್ಮಿಕ ಇಲಖೆ, ಕೇಂದ್ರ ಸರ್ಕಾರದ ಕಾರ್ಮಿಕ ಇಲಾಖೆ, ಇ.ಎಸ್.ಐ ಕಾರ್ಪೋರೇಷನ್ ಹಾಗೂ ಭವಿಷ್ಯನಿಧಿ ಸಂಘಟನೆಯ ಕಛೇರಿಗಳು ಹಾಗೂ ಇಲಾಖೆಯ ವೆಬ್ ವಿಳಾಸ http://locator.csccloud.in  ಗಳಲ್ಲಿ ಪಡೆಯಬಹುದಾಗಿದೆ.

ಕಾರ್ಮಿಕರು ತಮ್ಮೊಂದಿಗೆ ಆರಂಭಿಕ ವಂತಿಕೆ ಮೊತ್ತ, ಆದಾರ್ ಕಾರ್ಡ್, ಖಾತೆ ಹೊಂದಿರುವ ಬ್ಯಾಂಕಿನ ಐ.ಎಫ್.ಎಸ್.ಸಿ ಕೋಡ್ ವಿವರಗಳೊಂದಿಗೆ ತಮ್ಮ ನಾಮನಿರ್ದೇಶಿತರ ವಿವರಗಳು ಮತ್ತು ಮೊಬೈಲ್ ಹ್ಯಾಂಡ್ ಸೆಟ್ ನೊಂದಿಗೆ ಕಾಮನ್ ಸರ್ವೀಸ್ ಸೆಂಟರ್ ಗಳಿಗೆ ಬರುವುದು. ಅನುಬಂಧದಲ್ಲಿ ತಿಳಿಸಿರಿವಂತೆ ಅನುಗುಣವಾಗಿ ಆರಂಭಿಕ ವಂತಿಗೆಯನ್ನು ನಗದು ರೂಪದಲ್ಲಿ ಪಾವತಿಸುವುದು ಹಾಗೂ ನಂತರದ ಮಾಸಿಕ ವಂತಿಕೆಯನ್ನು ಖಾತೆಯಿಂದ ಆಟೋ-ಡೆಬಿಟ್ ಮೂಲಕ ಕಟಾವು ಮಾಡಿಕೊಳ್ಳಲಾಗುತ್ತದೆ.

ಯೋಜನೆಯ ಸೌಲಭ್ಯಗಳು :

ಕೇಂದ್ರ ಸರ್ಕಾರವು ಚಂದಾದಾರರು ಪಾವತಿಸುವ ವಂತಿಕೆಗೆ ಸಮಾನಾಂತರ ವಂತಿಕೆಯನ್ನು ಪಿಂಚಣಿ ಖಾತೆಗೆ ಪಾವತಿಸುತ್ತದೆ. ಫಲಾನುಭವಿಯ ವಯಸ್ಸು ೬೦ ವರ್ಷ ಪೂರ್ಣಗೊಂಡ ನಂತರ ತಿಂಗಳಿಗೆ ೩೦೦೦ ಗಳ ಖಚಿತ ಕನಿಷ್ಠ ಮಾಸಿಕ ಪಿಂಚಣಿಯನ್ನು ಪಡೆಯಲು ಅರ್ಹರಾಗುತ್ತಾರೆ.ಚಂದಾದಾರರು ೧೦ ವರ್ಷದೊಳಗಾಗಿ ಯೋಜನೆಯಿಂದ ನಿರ್ಗಮಿಸಿದಲ್ಲಿ ಅವರು ಪಾವತಿಸಿದ ವಂತಿಕೆಯನ್ನು ಮಾತ್ರ ಅವಧಿಗೆ ಉಳಿತಾಯ ಖಾತೆಗೆ ಪಾವತಿಸಲಾಗುವ ಬಡ್ಡಿಯೊಂದಿಗೆ ಹಿAದಿರುಗಿಸಲಾಗುತ್ತದೆ.

 ೧೦ ವರ್ಷ ಅಥವಾ ಅದಕ್ಕಿಂತ ಹೆಚ್ಚು ಅವಧಿಯ ನಂತರ ನಿರ್ಗಮಿಸಿದಲ್ಲಿ ಅವರು ಪಾವಿತಿಸಿದವಂತಿಕೆಯೊAದಿಗೆ ಪಿಂಚಣಿ ಖಾತೆಗೆ ಜಮೆಯಾಗಿರುವ ಬಡ್ಡಿ ಅಥವಾ ಉಳಿತಾಯ ಖಾತೆಗೆ ಪಾವತಿಸಲಾಗುವ ಬಡ್ಡಿ ಇವುಗಳಲ್ಲಿ ಯಾವುದು ಹೆಚ್ಚೋ ಅದನ್ನು ಪಾವತಿಸಲಾಗುವುದು. ಫಲಾನುಭವಿಯ ನಿತಂತರವಾಗಿ ವಂತಿಕೆಯನ್ನು ಪಾವತಿಸಿದ್ದು, ಅವರು ೬೦ ವರ್ಷದ ಒಳಗಾಗಿ ಮೃತಪಟ್ಟಲ್ಲಿ ಅಥವಾ ಶಾಶ್ವತ ಅಂಗ ನ್ಯೂನತೆಯಿಂದ ವಂತಿಕೆಯನ್ನು ಪಾವತಿಸಲು ಸಾಧ್ಯವಾಗದಿದ್ದಲ್ಲಿ ಅವನ/ಅವಳ ಸಂಗಾತಿಯುತದ ನಂತರ ಈ ಯೋಜನೆಗೆ ಸೇರಬಹುದಾಗಿದ್ದು ವಂತಿಕೆಯನ್ನು ಪಾವತಿಸಿ ಮುಂದುವರಿಸಬಹುದಾಗಿರುತ್ತದೆ.ಅಥವಾ ಅವರ ವಂತಿಕೆಯನ್ನು ಬಡ್ಡಿಯೊಂದಿಗೆ ಪಡೆಯಲು ಅರ್ಹರಾಗಿರುತ್ತಾರೆ. ಪಿಂಚಣಿ ಆರಂಭಗೊAಡ ನಂತರ ಚಂದಾದಾರರು ಮೃತಪಟ್ಡಲ್ಲಿ, ಅವರ ಪತ್ನಿ/ಪತಿ ಮಾತ್ರ ಪಿಂಚಣಿಯ ಶೇ ೫೦℅ ರಷ್ಟು ಪಿಂಚಣಿಯನ್ನು ಪಡೆಯಲು ಅರ್ಹರು. ಯೋಜನೆಯು ವಿದ್ಯುನ್ಮಾನ ಆಧಾರಿತವಾಗಿದ್ದು ಎಸ್.ಎಂ.ಎಸ್ ಮೂಲಕ ಎಲ್ಲ ವ್ಯವಹಾರಗಳ ಮಾಹಿತಿಯನ್ನು ಫಲಾನುಭವಿಗೆಕಾಲ ಕಾಲಕ್ಕೆ ತಿಳಿಸಲಾಗುವುದು.

ಫಲಾನುಭವಿಗಳು ಹೆಚ್ಚಿನ ಮಾಹಿತಿಗಾಗಿ : ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕಾರ್ಮಿಕ ಇಲಾಖೆಯ ಕಛೇರಿಗಳು, ಎಲ್.ಐ.ಸಿ.ಯಶಾಖಾ ಕಛೇರಿಗಳು, ಇ.ಪಿ.ಎಫ್.ಒ ಮತ್ತು ಇ.ಎಸ್.ಐ.ಸಿ ಕಛೇರಿಮಾಹಗಳು ಹಾಗೂ ಟೋಲ್ ಫ್ರೀಕಾಲ್ ಸೆಂಟರ್ ಸಂಖ್ಯೆ 1800-267-6888,, ಎಲ್.ಐ.ಸಿ.ಯ ವೆಬ್ ಸೈಟ್ ವಿಳಾಸ www.licindia.in, ಸಮೀಪದ ಸಿ.ಎಸ್.ಸಿ ಸೆಂಟರ್ ಗಳಿಗಾಗಿ http://locator.csccloud.in ಮತ್ತು ಮಾಹಿತಿಗಾಗಿ maandhan.inನ್ನು ಸಂಪರ್ಕಿಸಬಹುದು

5 Ways to Make Money Online Top 5 things of Chanakya Niti even poor can become rich ಸದಾ ಕಾಡುವ ಆಯಾಸ, ಸುಸ್ತಿಗೆ ಕಾರಣ ಈ ʼವಿಟಮಿನ್‌ʼ ಕೊರತೆ ‘Emergency’ Teaser ಮಾಜಿ ಪ್ರಧಾನಿ ಇಂದಿರಾ ಗಾಂಧಿಯಾಗಿ ಕಂಗನಾ ರಣಾವತ್ ನಟನೆ ಶ್ರಾವಣ ಮಾಸ 2022: ಈ ಮಾಸದಲ್ಲಿ ಯಾವ ಕೆಲಸ ಮಾಡಬೇಕು?