Latest Post

ಉಪನ್ಯಾಸಕ ಅಶೋಕ ಕೋರೆಗೆ ಪಿಎಚ್‌.ಡಿ ಡಾಕ್ಟರೇಟ್ : ಎಬಿವಿಪಿ ಯಿಂದ ಸನ್ಮಾನ ಸಾಕು ನಾಯಿಗಳಿಗೆ ತಪ್ಪದೇ ರೇಬೀಸ್ ಲಸಿಕೆ ನೀಡಿ: ಸಚಿವ ಪ್ರಭು ಚವ್ಹಾಣ
Spread the love

ಬ್ರಿಟಿಷರಿಗೆ ಸಿಂಹ ಸ್ವಪ್ನವಾಗಿದ್ದ ರಾಯಣ್ಣ ಕನ್ನಡಿಗರ ಉಸಿರು : ಡಾ. ಜೈಶೀಲಾ

ಔರಾದ : ಶೌರ್ಯ, ಪರಾಕ್ರಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಯೊಬ್ಬರಿಗೂ ಸ್ಪೂರ್ತಿಯ ಚಿಲುಮೆ. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಮಹಾ ದೇಶಪ್ರೇಮಿ‌. ಕರುನಾಡಲ್ಲಿ ಬ್ರಿಟಿಷರನ್ನು ನಡುಗಿಸಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬ್ರಿಟಿಷರ ಪಾಲಿಗೆ ಸಿಂಹ ಸ್ವಪ್ನವಾಗಿದ್ದ ಎಂದು ಉಪನ್ಯಾಸಕಿ ಡಾ. ಜೈಶೀಲಾ ಅವರು ಹೇಳಿದರು.

ನಗರದ ಡಾ. ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಡೆದ ಕನ್ನಡದ ಕಂಪು ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು ಕರುನಾಡಲ್ಲಿ ಬ್ರಿಟಿಷರಿಗೆ ನಡುಕ ಹುಟ್ಟಿಸಿದ ಧೀರನೆಂದರೆ ಅದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ. ರಾಣಿ ಕಿತ್ತೂರು ಚೆನ್ನಮ್ಮಳ ಬಲಗೈ ಬಂಟ ರಾಯಣ್ಣರ ಹೆಸರು ಕೇಳುತ್ತಿದ್ದರೆ ಬ್ರಿಟಿಷರ ಸದ್ದಡಗುತ್ತಿತ್ತು. ಇಂತಹ ವೀರನ ಹುಟ್ಟೂರು ನಮ್ಮ ಕರುನಾಡು ಎಂಬುದೇ ಕನ್ನಡಿಗರಿಗೆ ಹೆಮ್ಮೆಯ ವಿಷಯ.

ಬಡವರ ಭೂಮಿಯನ್ನು ಕಿತ್ತುಕೊಳ್ಳುತ್ತಿದ್ದ ಆಂಗ್ಲ ದೊರೆಗಳ ವಿರುದ್ಧವೇ ರಾಯಣ್ಣ ಸಿಡಿದೆದ್ದಿದ್ದ. ಸ್ವತಃ ಅವನ ಜಮೀನನ್ನು ಕೂಡ ಕಿತ್ತುಕೊಳ್ಳಲಾಗಿತ್ತು. ಇದರಿಂದ ಕೈಕಟ್ಟಿ ಕುಳಿತುಕೊಳ್ಳದ ಸಂಗೊಳ್ಳಿ ರಾಯಣ್ಣ ತನ್ನದೇ ಒಂದು ಸಮರ್ಥ ತಂಡವನ್ನು ಕಟ್ಟಿದ. ಅದರಿಂದ ಪರಕಿಯರ ದಬ್ಬಾಳಿಕೆ ವಿರುದ್ಧ ಸಿಡಿದೆದ್ದ ರಾಯಣ್ಣ. ದೇಶ ಪ್ರೇಮದ ಕಿಚ್ಚು ಹಚ್ಚಿದ ರಾಯಣ್ಣ ಕನ್ನಡಿಗರ ನಮ್ಮ ಕನ್ನಡಿಗರ ಉಸಿರು ಎಂದರು. ಈ ಪ್ರೌಢಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳಿಗೆ, ಕನ್ನಡಕ್ಕಾಗಿ ಸೇವೆಗೈದ ಹಿರಿಯ ಜೀವಿಗಳಿಗೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ ಮಾಡಲಾಯಿತು.

ಈ ಸಂದರ್ಭದಲ್ಲಿ ಕಸಾಪ ಅಧ್ಯಕ್ಷ ಡಾ. ಶಾಲಿವಾನ ಉದಗಿರೆ, ಉಪಾಧ್ಯಕ್ಷ ಅಮೃತರಾವ ಬಿರಾದಾರ, ಗೌರವ ಕಾರ್ಯದರ್ಶಿ ಜಗನ್ನಾಥ ದೇಶಮುಖ, ಮಹಿಳಾ ಘಟಕದ ಅಧ್ಯಕ್ಷೆ ಮಹಾನಂದಾ ಎಂಡೆ, ಊರ್ವಶಿ ಕಲ್ಯಾಣರಾವ ಶೆಂಬೆಳ್ಳೆ, ಗುರುನಾಥ ತವಾಡೆ, ಜಗನ್ನಾಥ ಮೂಲಗೆ, ಶ್ಯಾಮಸುಂದರ ಖಾನಾಪುರೆ, ಶಿಕ್ಷಕರ ಸಂಘದ ಅಧ್ಯಕ್ಷ ವಿಶ್ವನಾಥ ಬಿರಾದಾರ, ದೇವಿದಾಸ ಮಡಿವಾಳ, ಶಿವಕುಮಾರ ಪಾಟೀಲ, ಅಶೋಕ ಶೆಂಬೆಳ್ಳಿ, ವಸತಿ ನಿಲಯದ ಮೇಲ್ವಿಚಾರಕಿ ಸುನೀತಾ ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.