Latest Post

ಉಪನ್ಯಾಸಕ ಅಶೋಕ ಕೋರೆಗೆ ಪಿಎಚ್‌.ಡಿ ಡಾಕ್ಟರೇಟ್ : ಎಬಿವಿಪಿ ಯಿಂದ ಸನ್ಮಾನ ಸಾಕು ನಾಯಿಗಳಿಗೆ ತಪ್ಪದೇ ರೇಬೀಸ್ ಲಸಿಕೆ ನೀಡಿ: ಸಚಿವ ಪ್ರಭು ಚವ್ಹಾಣ
Spread the love

ಚರಂಡಿ ನೀರು ರಸ್ತೆಗೆ : ಕೋಳ್ಳುರ ಗ್ರಾಮಸ್ಥರ ಸಮಸ್ಯೆ ಕೇಳೋರಿಲ್ಲ

ಔರಾದ : ತಾಲೂಕಿನ ಎಕಲಾರ ಗ್ರಾಪಂ ವ್ಯಾಪ್ತಿಯ ಕೋಳ್ಳುರ ಗ್ರಾಮದ ಸಾರ್ವಜನಿಕ ಭಾವಿ ಹತ್ತಿರ ಚರಂಡಿ ನೀರು ರಸ್ತೆಯ ಮೇಲೆ ಹರಿತಿದ್ದು , ಸ್ವಚ್ಛತೆ ಮರೀಚಿಕೆಯಾಗಿದೆ . ಚರಂಡಿಯಲ್ಲಿ ನೀರು ಸರಾಗವಾಗಿ ಹರಿಯದೇ ಸೊಳ್ಳೆಗಳ ಕಾಟ ಹೆಚ್ಚಾಗಿದೆ . ರಸ್ತೆ ಮೇಲೆ ಚರಂಡಿ ನೀರು ಹರಿಯುವುದರಿಂದ ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗಿದೆ . ತಿಂಗಳಿನಿಂದ ರಸ್ತೆ ಬದಿಯ ಚರಂಡಿಯಲ್ಲಿ ತ್ಯಾಜ್ಯ ಹಾಗೂ ಮಣ್ಣು ತುಂಬಿಕೊಂಡಿದ್ದು ಕಲುಷಿತ ನೀರು ರಸ್ತೆ ಮೇಲೆ ಹರಿಯುತ್ತಿದೆ . ಚರಂಡಿಯಲ್ಲಿ ನೀರು ನಿಂತಲ್ಲೇ ನಿಂತಿರುವುದರಿಂದ ಕಸವು ಸೇರಿಕೋಡಿದೆ ಚರಂಡಿ ನೀರು ಯುತ್ತಿದ್ದು , ದುರ್ವಾಸನೆ ಬೀರುತ್ತಿದೆ . ಸೊಳ್ಳೆಗಳ ಉತ್ಪತ್ತಿಗೆ ಕಾರಣವಾಗಿದೆ . ಸುತ್ತಮುತ್ತಲಿನ ಮನೆಗಳ ವೃದ್ಧರು ಹಾಗೂ ಮಕ್ಕಳು ಅನಾರೋಗ್ಯಕ್ಕೆ ತುತ್ತಾಗುವ ಪರಿಸ್ಥಿತಿ ನಿರ್ಮಾಣವಾಗುವಂತಿದೆ . ಇದಕ್ಕೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಪಂಚಾಯಿತಿ ಸದಸ್ಯರ ಬೇಜವಾಬ್ದಾರಿತನವೇ ಕಾರಣ ಎಂದು ಗ್ರಾಮಸ್ಥ ಸಂದಿಪ್ಪ ಪಾಟೀಲ್ ದೂರಿದ್ದಾರೆ .

ಸಾಂಕ್ರಾಮಿಕ ರೋಗ ಭೀತಿ : ನಿತ್ಯ ಇದೇ ರಸ್ತೆ ಮೇಲೆ ಗ್ರಾಮದ ಸದಸ್ಯರು ಓಡಾಡುತ್ತಾರೆ . ಆದರೆ ಅವರಿಗೆ ಈ ಸಮಸ್ಯೆಯನ್ನು ಬಗೆಹರಿಸುವ ಮನಸ್ಸಿಲ್ಲದಾಗಿದೆ . ನೂತನವಾಗಿ ಸಿಸಿ ಚರಂಡಿ ನಿರ್ಮಾಣ ಮಾಡಿದ್ದರೂ ಸಹ ಸರಿಯಾದ ನಿರ್ವಹಣೆ ಇಲ್ಲದೇ ಚರಂಡಿಯಲ್ಲಿ ಕಲುಷಿತ ನೀರು ಸೇರಿ ರಸ್ತೆಯ ಮೇಲೆ ಹರಿಯುತ್ತಿದೆ . ಇದ ರಿಂದಾಗಿ ಸ್ಥಳೀಯರಲ್ಲಿ ಸಾಂಕ್ರಾಮಿಕ ರೋಗ ಹರಡುವ ಭೀತಿ ಸೃಷ್ಟಿಸಿದೆ ಪಂಚಾಯಿತಿ ಅಧಿಕಾರಿಗಳು ಚರಂಡಿ ಸ್ವಚ್ಛತಾ ಕಾರ್ಯ ಮಾಡಿಲ್ಲ . ಔಷಧ ಸಿಂಪಡಿಸಿಲ್ಲ . ಚರಂಡಿ ನೀರಿ ಯುವನಿಂದಾಗಿ ಸೊಳ್ಳೆಗಳ ಕಾಟ ವಿಪರೀತವಾಗಿದೆ .
ಶುದ್ದ ಕುಡಿಯುವ ನೀರಿನ ಘಟಕ ಸ್ಥಾಪನೆ ಆದರು ಅದ್ದಕೆ ಚಾಲನೆ ನೀಡುತ್ತಿಲ್ಲ ಕುಲಸಿತ ನೀರು ಕುಡಿಯುವ ಪರಿಸ್ಥಿತಿ ಉಂಟಾಗಿದೆ ಇದರ ಬಗ್ಗೆ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳ ಗಮನಕ್ಕೆ ತಂದರೂ ಗ್ರಾಮಕ್ಕೆ ಭೇಟಿ ನೀಡಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

Leave a Reply